Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹುದಿಕೇರಿಯಲ್ಲಿ ಸಿಎನ್‌ಸಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ : ಪಟ್ಟಭದ್ರಹಿತಾಸಕ್ತಿಗಳು ಹಾದಿ ತಪ್ಪಿಸುತ್ತಿದ್ದಾರೆ, ಕೊಡವರು ಎಚ್ಚರಿಕೆಯಿಂದ ಇರಬೇಕು : ಎನ್.ಯು.ನಾಚಪ್ಪ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹುದಿಕೇರಿಯಲ್ಲಿ ಸಿಎನ್‌ಸಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ : ಪಟ್ಟಭದ್ರಹಿತಾಸಕ್ತಿಗಳು ಹಾದಿ ತಪ್ಪಿಸುತ್ತಿದ್ದಾರೆ, ಕೊಡವರು ಎಚ್ಚರಿಕೆಯಿಂದ ಇರಬೇಕು : ಎನ್.ಯು.ನಾಚಪ್ಪ ಕರೆ*

ನವೆಂಬರ್ 10, 20255 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ನ.10 : ಕೊಡವರು ರಾಷ್ಟ್ರೀಯ ಜನಗಣತಿಯ ಸಂದರ್ಭ ಸ್ವತಂತ್ರ್ಯವಾಗಿ ‘ಕೊಡವ’ ಎಂದು ಗುರುತಿಸಿಕೊಳ್ಳುವಂತೆ ಸಿಎನ್‌ಸಿ ಕರೆ ನೀಡಿದೆ. ಆದರೆ ಈ ಕರೆಗೆ ವಿರುದ್ಧವಾಗಿ ಕೆಲವು ಪಟ್ಟಭದ್ರಹಿತಾಸಕ್ತಿಗಳು ಈ ರೀತಿ ಪ್ರತ್ಯೇಕವಾಗಿ ಗುರುತಿಸಿಕೊಂಡರೆ ಕೊಡವರಿಗೆ ರಕ್ಷಣೆ ಇರುವುದಿಲ್ಲ ಎಂದು ಅಪಪ್ರಚಾರ ಮಾಡುವ ಮೂಲಕ ಕೊಡವರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುದಿಕೇರಿಯಲ್ಲಿ ಸಿಎನ್‌ಸಿ ವತಿಯಿಂದ ನಡೆದ 19ನೇ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೊಡವರನ್ನು ನಿರಂತರವಾಗಿ ವಂಚಿಸುತ್ತಿರುವ ಕೆಲವು ಕೂಟಗಳ ಬಗ್ಗೆ ಕೊಡವರು ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು. ಕೊಡವರು ಸಂವಿಧಾನದ ಭದ್ರತೆ ಬೇಕೆಂದು ಕೇಳುವ ಸಂದರ್ಭ ಕೆಲವು ಕೂಟ ಕೊಡವರನ್ನು ಸದಾಕಾಲ ವಂಚಿಸಲು ತೊಡಗಿದೆ. ಅವರ ಕಾರ್ಯಾಸೂಚಿ ಕೊಡವರಿಗೆ ಏನೇನು ದೊರಕಬಾರದು ಎಂಬುದಾಗಿದೆ. ನೀವು ದೇಶವನ್ನು ರಕ್ಷಣೆ ಮಾಡಿದ ಜನ, ಶೂರರು, ಧೀರರು ಎಂದು ಹೊಗಳಿ ಹೊನ್ನಶೂಲಕ್ಕೇರಿಸಿ ನಿಮಗೆ ಸಂವಿಧಾನದ ರಕ್ಷಣೆ ಯಾಕೆ ಬೇಕು ಎಂದು ಪ್ರಶ್ನಿಸುವ ಮೂಲಕ ಹಾದಿ ತಪ್ಪಿಸುತ್ತಿದ್ದಾರೆ. ಮತ್ತದೇ ಕೂಟ ಕೊಡವರು ಜನಗಣತಿಯ ಸಂದರ್ಭ ‘ಕೊಡವ’ ಎಂದು ಪ್ರತ್ಯೇಕವಾಗಿ ಗುರುತಿಸಿಕೊಳ್ಳದಂತೆ ನೋಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಆದಿಮಸಂಜಾತ ಏಕ ಜನಾಂಗೀಯ ಆ್ಯನಿಮಿಸ್ಟಿಕ್ ನಂಬಿಕೆಯ ಕೊಡವರು ಯಾವುದೇ ಜಾತಿ, ಧರ್ಮದ ಬಂಧನ ಅಥವಾ ಕಳಂಕವಿಲ್ಲದೆ ಸ್ವತಂತ್ರವಾಗಿ ಬದುಕಿದ ಮತ್ತು ಬದುಕುತ್ತಿರುವ ಅತೀ ಅಪರೂಪದ ಸೂಕ್ಷ್ಮ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಕೊಡವ ನೆಲ ಬಿಟ್ಟರೆ ಬೇರೆ ಎಲ್ಲೂ ಕೊಡವರಿಗೆ ಸ್ವಂತ ಸ್ಥಳವಿಲ್ಲ. ಇಂದಿನ ಕಾಲಮಾನದಲ್ಲಿ ಕೊಡವರ ರಕ್ಷಣೆಯಾಗಬೇಕಾಗಿದೆ ಮತ್ತು ಸಂಪೂರ್ಣ ಸಬಲೀಕರಣವಾಗಬೇಕಾಗಿದೆ. ಇದು ದೇಶದ ಸಂವಿಧಾನದಿAದ ಮಾತ್ರ ಸಾಧ್ಯ ಎಂದು ವಿವರಿಸಿದರು. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟç ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಕೊಡವರಿಗೆ ಪಾರ್ಲಿಮೆಂಟ್ ಮತ್ತು ಎಸೆಂಬ್ಲಿಯಲ್ಲಿ ವಿಶೇಷ ಪ್ರಾತಿನಿಧ್ಯ ಸಿಗಬೇಕಾದರೆ, ಕೊಡವರ ಪೂರ್ವರ್ಜಿತ ಭೂ ಹಕ್ಕು ಮತ್ತು ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಬೇಕಾದರೆ ಕೊಡವರ ಪ್ರತ್ಯೇಕ ಗುರುತು ರಾಷ್ಟಿçÃಯ ಜನಗಣತಿಯ ಸಂದರ್ಭ ‘ಕೊಡವ’ ಎಂದು ದಾಖಲೀಕರಣವಾಗಬೇಕು. ಹೀಗೆ ಮಾಡಿದಾಗ ಮಾತ್ರ ನಮಗೆ ಸಂವಿಧಾನ ಬದ್ಧ ಹಕ್ಕು ದೊರೆಯಲಿದೆ ಎಂದರು. 2026-27 ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಅಳವಡಿಸಬೇಕು. ಇದರ ಆಧಾರದಡಿ ಮುಂದೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕ್ಷೇತ್ರ ಪುನರ್ ವಿಂಗಡಣೆಗೆ ಮಾನದಂಡವಾಗಲಿರುವ ಈ ಜನಗಣತಿಯು ಕೊಡವರ ರಾಜಕೀಯ ಸಬಲೀಕರಣ, ಸ್ವಯಂ ನಿರ್ಧಾರದ ಹಕ್ಕು ಸ್ಥಾಪಿಸಲು ಮೆಟ್ಟಿಲಾಗಲಿದೆ. ಅಲ್ಲದೆ ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರಿಯಲು ಪೂರಕವಾಗಲಿದೆ. ಕೊಡವರು ಯಾವುದೇ ಧರ್ಮ ಅಥವಾ ಜಾತಿಗೆ ಸೇರಿದವರಲ್ಲ. ಇಂದು ಜನಗಣತಿಯೂ ಸೇರಿದಂತೆ ರಾಜ್ಯ ದಾಖಲೆಗಳ ಎಲ್ಲಾ ಕಾಲಂಗಳಲ್ಲಿ ಈ ದೇಶದ ಬಹುಧರ್ಮ, ಪ್ರಭಲಧರ್ಮ ಮತ್ತು ಬಲಾಡ್ಯ ಜಾತಿಯನ್ನು ದೃಷ್ಟಿಯಲ್ಲಿಟ್ಟು ರಚಿಸಲ್ಪಟ್ಟಿರುವ ಧರ್ಮ ಮತ್ತು ಜಾತಿ ಬಗ್ಗೆ ಮಾತ್ರ ಉಲ್ಲೇಖ ಇರುವುದರಿಂದ ಆನಿಮಿಸ್ಟಿಕ್ ನಂಬಿಗೆಯ ಕೊಡವರು ಅನಿವಾರ್ಯವಾಗಿ ಧರ್ಮ ಮತ್ತು ಜಾತಿ ಕಾಲಂಗಳನ್ನು ಒಪ್ಪಿಕೊಂಡು ಕೊಡವ ಎಂದು ದಾಖಲಿಸಬೇಕಾದ ಪರಿಸ್ಥಿತಿ ಬಂದಿದೆ. 1871-72 ರಿಂದ 1931ರ ವರೆಗೆ ನಡೆದ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರನ್ನು ಧರ್ಮೇತರ ಮತ್ತು ಜಾತಿಯೇತರ ಜನಾಂಗ/ಮೂಲವಂಶಸ್ಥ (ರೇಸ್) ಎಂದು ದಾಖಲಿಸಲ್ಪಡುವ ಮೂಲಕ ಕೊಡವರ ಪ್ರತ್ಯೇಕ ಅಸ್ತಿತ್ವ ಮತ್ತು ಸ್ವತಂತ್ರ ವ್ಯಕ್ತಿತ್ವವನ್ನು ಗುರುತಿಸಿ ನಮ್ಮ ಹೆಗ್ಗುರುತು ರಾಜ್ಯ ದಾಖಲೆಯಲ್ಲಿ ನಳನಳಿಸುವಂತಾಗಿತ್ತು. ತದನಂತರ ನಮ್ಮನ್ನು 2021ರ ವರೆಗೆ ಪ್ರತಿ ದಶಮಾನಗಳಿಗೊಮ್ಮೆ ನಡೆಸುವ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರನ್ನು ಬಲಾಡ್ಯ ಧಾರ್ಮಿಕ ಮತ್ತು ಜಾತಿಯೊಂದಿಗೆ ವಿಲೀನಗೊಳಿಸಿ ನಮ್ಮ ಅಸ್ತಿತ್ವ ಮತ್ತು ಹೆಗ್ಗುರುತು ವಿನಾಶದೊಂದಿಗೆ ಕೊಡವರ ಅಸ್ಮಿತೆ ಮತ್ತು ಸತ್ವವನ್ನು ಧ್ವಂಸ ಮಾಡಲಾಯಿತು. ಮುಂದೆ ಅದು ಕೊಡವರ ಸ್ವಯಂ ನಿರ್ಣಯ ಹಕ್ಕು ಹಾಗೂ ಸಂವಿಧಾನಿಕ ಹಕ್ಕುಗಳ ಧ್ವನಿಯೂ ಪ್ರತಿಪಾಧಿಸಲು ಆಗಲಾರದಷ್ಟು ಕ್ಷೀಣಗೊಂಡು ಧಮನಕ್ಕೊಳಗಾಯಿತು. ಕೊಡವರ ವಿರಳ ಸಂಖ್ಯೆಯು ಕೊಡವರ ಪ್ರತ್ಯೇಕ ಅಸ್ತಿತ್ವ ಮತ್ತು ಹೆಗ್ಗುರುತನ್ನು ಜೋಪಾನ ಮಾಡಲು ವಿಶೇಷ ಹಕ್ಕು ಕೇಳಲೆಬಾರದು, ಕೊಡವರೇನಿದ್ದರು ಬಲಾಡ್ಯ ಜನಸಂಖ್ಯಾ ಬಾಹುಳ್ಯದೊಂದಿಗೆ ಗುರುತಿಸಿಕೊಳ್ಳಬೇಕೆನ್ನುವ ಅವ್ಯಕ್ತ ಕಾರ್ಯಸೂಚಿಯೊಂದು ಪಿತೂರಿ ಮಾಡುತ್ತಾ ಬಂತು. ಕೊಡವರು ಭೂದೇವಿ ಅರ್ಥಾತ್ ಅವರ ಜನ್ಮಭೂಮಿ ಕೊಡವಲ್ಯಾಂಡ್, ಜಲದೇವಿ ಕಾವೇರಿ, ವನದೇವಿ/ದೇವಕಾಡ್, ಪಾರಮಾರ್ಥಿಕ ಮಂದ್, ಧಾರ್ಮಿಕ ಸಂಸ್ಕಾರ, ತೋಕ್-ಗನ್, ಗೆಜ್ಜೆತಂಡ್, ಸೂರ್ಯ-ಚಂದ್ರ, ಪರ್ವತ ದೇವಿ, ಗುರು-ಕಾರೋಣ, ಸ್ವರ್ಗೀಯ ದಿವ್ಯಾತ್ಮಗಳು, ತೂಟಂಗಳ-ಕ್ಯಾಕೋಳ (ಸಮಾಧಿ ಸ್ಥಳ) ಗಳನ್ನು ಪೂಜ್ಯಭಾವನೆಯಿಂದ ಆರಾಧಿಸುತ್ತಾರೆ. ಸಪ್ತಪದಿ ಇಲ್ಲದ ಮದುವೆ, ಮಂಗಳ ಸೂತ್ರ ಪದ್ಧತಿ ಇಲ್ಲದ (ಮದುವೆಯ ಮುನ್ನದಿನ ರಾತ್ರಿ ಮಧುಮಗಳ ತಾಯಿ ಮಧುಮಗಳ ಕೊರಳಿಗೆ ಪವಿತ್ರ ‘ಪತ್ತಾಕ್’ ಕಟ್ಟುವ ವಿಶಿಷ್ಟ ಪರಂಪರೆ ನಡೆದು ಬಂದಿದೆ.) ಕೊಡವರ ಎಲ್ಲಾ ಶುಭಕಾರ್ಯ, ಅಶುಭಕಾರ್ಯಗಳಲ್ಲಿ ಮದ್ಯ ಸಮರಾಧನೆ ಮತ್ತು ಪಂದಿಕರಿ ಭೋಜನ ಕಡ್ಡಾಯ. ತೋಕ್-ಗನ್ ಎಲ್ಲಾ ಕಾರ್ಯದಲ್ಲೂ ಪೂಜಾ ಪರಿಕರವಾಗಿ ಬಳಸುತ್ತೇವೆ. ಈ ರೀತಿಯ ಸಂಸ್ಕಾರವನ್ನ ಆನಿಮಿಸ್ಟಿಕ್ ನಂಬಿಗೆಯ ಜನರೆಂದು ವಿಶ್ವರಾಷ್ಟ್ರ ಸಂಸ್ಥೆ ಗುರುತಿಸಿದೆ. ಸಂವಿಧಾನವೇ ನಮಗೆ ರಾಜಗುರು, ಧರ್ಮಗುರು. ಆದ್ದರಿಂದ ಕೊಡವರಿಗೆ ರಾಜ್ಯಾಂಗ ಖಾತ್ರಿ ದೊರಕಬೇಕು. ಆ ಮೂಲಕ ಪ್ರಪಂಚದ ಅತ್ಯಂತ ದೊಡ್ಡ ಜನಾಂಗೀಯ ವೈವಿದ್ಯತೆಯ ಮತ್ತು ಬೃಹತ್ ಸಂವಿಧಾನಿಕ ಪಾರ್ಲಿಮೆಂಟರಿ ಪಾರ್ಟಿಸಿಪೇಟರಿ ಪ್ರಜಾತಂತ್ರ ರಾಷ್ಟçವಾದ ಭಾರತದಲ್ಲಿ ನಮ್ಮ ಅಸ್ತಿತ್ವ, ಹೆಗ್ಗುರುತು, ಅಸ್ಮಿತೆ ಉಳಿಯುವುದರೊಂದಿಗೆ ನಮ್ಮ ಜನ್ಮಭೂಮಿಯಲ್ಲಿ ನಮ್ಮ ಚಾರಿತ್ರಿಕ ನಿರಂತರತೆಗೆ ಕಾಯ್ದೆ ಬದ್ಧ ರಕ್ಷಣೆ ದೊರಕಬೇಕಾದರೆ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವ ಎಂದು ದಾಖಲಿಸಬೇಕು. ಈ ಸಂಬಂಧ ಈಗಾಗಲೇ ಈ ರಾಷ್ಟ್ರದ ನುರಿತ ಸಂವಿಧಾನ ತಜ್ಞರು ಮಾನವ ಶಾಸ್ತ್ರ ವಿಜ್ಞಾನಿಗಳು, ಸಮಾಜ ವಿಜ್ಞಾನಿಗಳು ಮತ್ತು ರಾಜಕೀಯ ಶಾಸ್ತ್ರ ವಿಜ್ಞಾನಿಗಳ ಜೊತೆ ಸಂಪರ್ಕ ಮತ್ತು ಚರ್ಚೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ಇದೇ ಸಂದರ್ಭ ಎನ್.ಯು.ನಾಚಪ್ಪ ಹೇಳಿದರು.  ಹೊರ ರಾಷ್ಟ್ರದ ಬಾಂಗ್ಲಾದೇಶಿ ರೋಹಿಂಗ್ಯಗಳಿಗೆ ನೆಲೆ ಕಲ್ಪಿಸಲು ಅವರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಮುಂದೆ ಜನಗಣತಿ ಸಂದರ್ಭ ಅವರನೆಲ್ಲ ಕೊಡವ ಎಂದು ದಾಖಲಿಸಿ ಮತಬ್ಯಾಂಕ್ ವೃದ್ಧಿ ಮಾಡಿಕೊಂಡು ಅವರ ಜನಸಂಖ್ಯಾ ವೃದ್ಧಿಯನ್ನು ತೋರಿಸಿ ಮುಂದೆ ಕೊಡಗಿಗೆ ದುಪ್ಪಟ್ಟು ಮತದಾರರ ಆಧಾರದಲ್ಲಿ ಪಾರ್ಲಿಮೆಂಟ್ ಸೀಟ್ ಬೇಕೆಂದು ಎರಡು ರಾಷ್ಟ್ರೀಯ ರಾಜಕೀಯ ಪಕ್ಷಗಳು ಲಜ್ಜೆಗೇಡಿ ಮತಭಿಕ್ಷೆ ಕಾರ್ಯದಲ್ಲಿ ತೊಡಗಿದ್ದು, ಇದಕ್ಕಾಗಿ ಕೊಡವರ ಭೂಮಿಗಳನ್ನು ಬಲವಂತ ತೆರವುಗೊಳಿಸಿ ಅಲ್ಲಿ ಇವರಿಗೆಲ್ಲ ಭೂಮಿ, ವಸತಿ ನಿರ್ಮಿಸುವ ಒಳಸಂಚು ನಡೆಲಾಗುತ್ತಿದೆ. ಇದಕ್ಕೆ ಪ್ರತಿಭಟಿಸಿದರೆ, ಕೊಡಗಿನಲ್ಲಿ ಕಾರ್ಮಿಕರ ಕೊರತೆಯ ನೆಪ ತೋರಿಸಲಾಗುತ್ತದೆ. ಮುಂದೆ ಹರಾಜಕತೆ ನಿರ್ಮಾಣವಾಗಿ ಸ್ಥಳೀಯರಿಗೆ ರಕ್ಷಣೆ ಇಲ್ಲದಾಗುತ್ತದೆ ಎಂದು ನಾಚಪ್ಪ ಕಳವಳ ವ್ಯಕ್ತಪಡಿಸಿದರು. ಸರಿ ಕಾರ್ಮಿಕರ ಕೊರತೆ ಇದ್ದರೆ ಟರ್ಕಿ ದೇಶದ ವಲಸಿಗ ಕಾರ್ಮಿಕರನ್ನು ಪ್ಯಾರಿಸ್‌ನಲ್ಲಿ ಗೆಸ್ಟ್ ವರ್ಕರ್ ಎಂದು ಪರಿಗಣಿಸಲಾಗಿದೆ. ಮೋದಿ-ಶೇಖ್ ಹಸಿನಾ ಒಪ್ಪಂದ 2015ರಲ್ಲಿ ಡಾಕಾದಲ್ಲಿ ನಡೆದಾಗ ಈ ಗೆಸ್ಟ್ ವರ್ಕ್ ನ ರೀತಿ ಮುನ್ನಲೆಗೆ ಬಂದಿದೆ. ಅದೇ ರೀತಿ ಕೊಡಗಿನಲ್ಲಿ ಹೊರ ರಾಜ್ಯದ ಕಾರ್ಮಿಕರನ್ನು ಗೆಸ್ಟ್ ವರ್ಕರ್ ಪರ್ಮಿಟ್ ಮೇಲೆ ಆಹ್ವಾನಿಸಿ ಕೆಲಸ ಮುಗಿದ ನಂತರ ಅವರ ಊರುಗಳಿಗೆ, ದೇಶಗಳಿಗೆ ಹಿಂತಿರುಗಬೇಕು. ಪುನಃ ಕೃಷಿ ವರ್ಷ ಆರಂಭದಲ್ಲಿ ಅವರ ಗೆಸ್ಟ್ ವರ್ಕರ್ ಪರ್ಮಿಟ್ ನವೀಕರಿಸಬೇಕು, ಈ ನಿಯಮ ಜಾರಿಯಾಗಬೇಕು ಎಂದು ಎನ್.ಯು.ನಾಚಪ್ಪ ಸಲಹೆ ನೀಡಿದರು. 2026-27ರ 16ನೇ ರಾಷ್ಟ್ರ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ವರ್ಗೀಕರಿಸಬೇಕು. ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಉಳಿಸಬೇಕು, ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 202627 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆದರು. ಅಲ್ಲದೆ ಜಾತಿ ಜನಗಣತಿಯ ಮೂರೂ ಕಾಲಂಗಳಲ್ಲಿ ಕೊಡವರು ‘ಕೊಡವ’ ಎಂದು ನಮೂದಿಸುವಂತೆ ಕರೆ ನೀಡಿದರು. *ನ.18ರಂದು ಕುಟ್ಟದಲ್ಲಿ ಜನಜಾಗೃತಿ* 20ನೇ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನ.18 ರಂದು ಬೆಳಿಗ್ಗೆ 10.30 ಗಂಟೆಗೆ “ಕುಟ್ಟ”ದಲ್ಲಿ ನಡೆಯಲಿದೆ ಎಂದು ಇದೇ ಸಂದರ್ಭ ಎನ್.ಯು.ನಾಚಪ್ಪ ತಿಳಿಸಿದರು. ಇಲ್ಲಿಯವರೆಗೆ ಬಿರುನಾಣಿ, ಟಿ.ಶೆಟ್ಟಿಗೇರಿ, ಕಡಂಗ, ಕಕ್ಕಬ್ಬೆ, ಬಾಳೆಲೆ, ಪೊನ್ನಂಪೇಟೆ, ಮಾದಾಪುರ, ಸುಂಟಿಕೊಪ್ಪ, ಸಿದ್ದಾಪುರ, ನಾಪೋಕ್ಲು, ಗೋಣಿಕೊಪ್ಪ, ವಿರಾಜಪೇಟೆ, ಮೂರ್ನಾಡ್, ಚೇರಂಬಾಣೆ, ಚೆಟ್ಟಳ್ಳಿ, ಅಮ್ಮತ್ತಿ, ಶ್ರೀಮಂಗಲ, ಬಿಟ್ಟಂಗಾಲದಲ್ಲಿ ಜನಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು. ಕಾರ್ಯಕ್ರಮದಲ್ಲಿ ಅಜ್ಜಮಾಡ ಕವಿತಾ, ಅಂಜಿಗೇರಿ ನಾಡ ತಕ್ಕ ಚೆಕ್ಕರೆ ರಾಜೇಶ್, ಚಂಗುಲಂಡ ಸೂರಜ್, ಕೋಳೇರ ರಾಜ ನರೇಂದ್ರ, ಇಟ್ಟೀರ ಲಾಲಪ್ಪ ಮಂಡಂಗಡ ಯೋಗೇಶ್, ಬೊಳ್ಳಜಿರ ಕಿಶೋರ್, ಚೊಟ್ಟೆಯಂಡಮಾಡ ಬಿಪಿನ್, ಬೊಜ್ಜಂಗಡ ದೀಪು ತಿಮ್ಮಯ್ಯ, ಅಣ್ಣಾಳಮಾಡ ಶಂಕರಿ, ಕಳಕಂಡ ಲವ, ಕೊಡಾಂಗಡ ರೋಶನ್, ನೂರೇರ ರಮೇಶ್, ಕಿರಿಯಮಾಡ ಪೊನ್ನಪ್ಪ, ಕಿರಿಯಮಾಡ ಶಾಂತ ತಮ್ಮಯ್ಯ, ಬಾಚರಣಿಯಂಡ ಉತ್ತಪ್ಪ, ಕಟ್ಟೇರ ಕಿಶೋರ್, ಚಂಗುಲಂಡ ಕಾರ್ಯಪ್ಪ, ಬಲ್ಯಮಾಡ ಕಾರ್ಯಪ್ಪ, ಚೆಕ್ಕೇರ ತಮ್ಮಯ್ಯ, ಬಯವಂಡ ಮಾಚಯ್ಯ, ಕುಪ್ಪಣಮಾಡ ವಾಸು, ಕುಪ್ಪಣಮಾಡ ಸುಬ್ಬಯ್ಯ, ಅಜ್ಜಿಕುಟ್ಟೀರ ರಮೇಶ್, ಚೆಕ್ಕೇರ ವಿಠಲ್, ಚೆಕ್ಕೇರ ಸುಬ್ಬಯ್ಯ, ಚೆಂಗುಲಂಡ ಅನು, ಕೇಚಮಾಡ ಧ್ರುವ, ಕುಪ್ಪಣಮಾಡ ಮೊಣ್ಣಪ್ಪ, ಕುಪ್ಪಣಮಾಡ ಗಣೇಶ್, ಕೇಚಮಾಡ ಶಿವು ನಾಚಪ್ಪ, ಕಿರಿಯಮಾಡ ದತ್ತಾತ್ರೇಯ, ಕಿರಿಯಮಾಡ ಮಿಲನ್, ಕುಪ್ಪಣಮಾಡ ಚಾಮಿ, ಚಂಗುಲಂಡ ಚಂಗಪ್ಪ, ಚೆಂಗುಲಂಡ ಅರುಣ, ಚೆಂಗುಲಂಡ ಈಶ, ಅಯ್ಯಪ್ಪ, ಮಾರಮಾಡ ಸುಗಂಧ, ಮಾರಮಾಡ ಮದನ್ ಮಂದಣ್ಣ, ನೂರೇರ ಚಿಟ್ಟಿಯಪ್ಪ, ಚೆಕ್ಕೇರ ಅಶ್ವಥ್, ನೂರೇರ ಕುಟ್ಟಪ್ಪ, ಚೀಯನಮಾಡ ರಾಮು, ಚೆಂಗುಲಂಡ ಅಯ್ಯಪ್ಪ, ಚೆಂಗುಲಂಡ ತಿಮ್ಮಯ್ಯ, ಕೇಚಮಾಡ ಹರ್ಷ, ಬೊಳ್ಳಜಿರ ಕಾವೇರಪ್ಪ, ಚೆಕ್ಕೇರ ಸಚಿನ್, ಮಾದಿರ ಪೆಮ್ಮಯ್ಯ, ಕೊಡಾಂಗಡ ಅಣ್ಣಯ್ಯ, ಐಪುಮಾಡ ರಾಯ್, ಕಿರಿಯಮಾಡ ಶಶಿ ವಿಶ್ವನಾಥ್, ಬಲ್ಯಮಿದೇರಿರ ಪ್ರಕಾಶ್, ಐಪುಮಾಡ ದೇವಯ್ಯ, ಬೊಟ್ಟಂಗಡ ಜಪ್ಪು, ಬಲ್ಯಮಿದೇರಿರ ಪ್ರಕಾಶ್, ಬಯವಂಡ ಕಾಳಪ್ಪ, ಚೆಪ್ಪುಡಿರ ರಾಜೇಶ್, ಅಜ್ಜಿಕುಟ್ಟೀರ ಮುತ್ತು, ಚೆಂಗುಲಂಡ ಚಿಪ್ಪ ನವೀನ್, ಮಲ್ಲಂಡ ನಾಚಪ್ಪ, ಮಲ್ಲಂಡ ದಿನೇಶ್, ಮೀದೇರಿರ ಸವೀನ, ಚೆಕ್ಕೇರ ಸಂಜು, ಚಂಗುಲಂಡ ಮಾದಯ್ಯ, ದೇಕಮಾಡ ಮಧು, ಚೆಕ್ಕೇರ ತಿಮ್ಮಯ್ಯ, ಚೆಕ್ಕೇರ ರಮೇಶ್, ನೂರೇರ ಕರುಂಬಯ್ಯ, ನೂರೇರ ಪ್ರತಾಪ್, ನೂರೇರ ವಿಜಯ, ಮಾಣಿರ ಸಂಜು ಸೋಮಯ್ಯ, ಬೊಳ್ಳಂದಂಡ ಕಾವೇರಪ್ಪ, ಕಿರಿಯಮಾಡ ಶೆರಿನ್, ಅಪ್ಪೆಯಂಗಡ ಮಾಲೆ ಪೂಣಚ್ಚ, ಅಜ್ಜಿಕುಟ್ಟೀರ ಲೋಕೇಶ್, ಬೊಟ್ಟಂಗಡ ಗಿರೀಶ್ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು…

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.