Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಘನ-ತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ : ಸ್ವಚ್ಛ ಪರಿಸರ ನಿರ್ಮಾಣಕ್ಕಾಗಿ ನಮ್ಮ ಕಸ-ನಮ್ಮ ಹೊಣೆ :: ಟಿ.ಜಿ.ಪ್ರೇಮಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಘನ-ತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ : ಸ್ವಚ್ಛ ಪರಿಸರ ನಿರ್ಮಾಣಕ್ಕಾಗಿ ನಮ್ಮ ಕಸ-ನಮ್ಮ ಹೊಣೆ :: ಟಿ.ಜಿ.ಪ್ರೇಮಕುಮಾರ್*

ನವೆಂಬರ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.13 NEWS DESK : ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ( ಎಂಪ್ರಿ- ಎನ್ವಿರಾನ್ ಮೆಂಟಲ್ ಮೇನೇಜ್ ಮೆಂಟ್ ಅಂಡ್ ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್ ) ವತಿಯಿಂದ ಕುಶಾಲನಗರ ಪುರಸಭೆಯ ಸಭಾಂಗಣದಲ್ಲಿ ಮೈಸೂರು ಹಾಗೂ ಕೊಡಗು ಜಿಲ್ಲಾ ಸ್ಥಳೀಯ ನಗರ ಸಂಸ್ಥೆಗಳ ಪರಿಸರ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರಿಗೆ ಪೌರಾಡಳಿತ ನಿರ್ದೇಶನಾಲಯದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ “ಚಕ್ರೀಯ ಆರ್ಥಿಕತೆ” (ಸರ್ಕ್ಯುಲರ್ ಎಕಾನಮಿ”) – ಘನತ್ಯಾಜ್ಯ ನಿರ್ವಹಣೆ ಕುರಿತು ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಕಾರ್ಯಾಗಾರಕ್ಕೆ ಚಾಲನೆ ನೀಡಿ ನಮ್ಮ ಕಸ – ನಮ್ಮ ಹೊಣೆ : ಹಾಗೂ ಸ್ವಚ್ಛ ಪರಿಸರ ನಿರ್ಮಾಣ ಕುರಿತು ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರೂ ಆದ ಪರಿಸರ ಪ್ರಶಸ್ತಿ ಪುರಸ್ಕೃತರಾದ ಟಿ.ಜಿ.ಪ್ರೇಮಕುಮಾರ್, ಉತ್ತಮ ಪರಿಸರ ನಿರ್ಮಾಣಕ್ಕೆ ನಾವು ನಮ್ಮಿಂದ ದಿನನಿತ್ಯ ಉತ್ಪತ್ತಿಯಾಗುವ ಕಸವನ್ನು ವಿಂಗಡಿಸಿ ಸೂಕ್ತವಾಗಿ ವಿಲೇವಾರಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. “ನಮ್ಮ ಕಸ- ನಮ್ಮ ಹೊಣೆ” ಎಂಬ ರೀತಿಯಲ್ಲಿ ನಾವು ಕಸವನ್ನು ಸೂಕ್ತವಾಗಿ ವಿಲೇವಾರಿ ಮಾಡಿದರೆ ಸ್ವಚ್ಛ ಪರಿಸರ ಕಾಪಾಡಲು ಸಾಧ್ಯ ಎಂದರು. ಉತ್ತಮ ಪರಿಸರ ಸಂರಕ್ಷಣೆಗಾಗಿ ನಾವು ನಮ್ಮ ಸುತ್ತಲಿನ ಪರಿಸರದಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ಪ್ಲಾಸ್ಟಿಕ್ ತ್ಯಾಜ್ಯ ಸೇರಿದಂತೆ ಗಟ್ಟಿ ಕಸದ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣಕ್ಕೆ ನಾವು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ಚಕ್ರೀಯ ಆರ್ಥಿಕತೆಯಡಿ ಘನತ್ಯಾಜ್ಯ ನಿರ್ವಹಣೆ ಎಂದರೆ ನಾವು ಸ್ಥಳೀಯವಾಗಿ ಉತ್ಪಾದಿಸಿ, ಬಳಸಿದ ನಂತರ ಕಸದಂತೆ ಬಿಸಾಡುವ ಬದಲು, ಅವುಗಳನ್ನು ಮರುಬಳಕೆ, ಮರು ಉತ್ಪಾದನೆ ಮತ್ತು ಮರುಪೂರಣೆ ಮಾಡುವ ಮೂಲಕ ಸಂಪನ್ಮೂಲಗಳ ಬಳಕೆಯನ್ನು ಕಡಿಮೆ ಮಾಡುವುದು. ಇದರಿಂದ ನಾವು ಕಸವನ್ನು ಸೂಕ್ತವಾಗಿ ವಿಲೇವಾರಿ ಮಾಡಿ ಮರು ಬಳಕೆ ಮಾಡುವ ಮೂಲಕ ಶೂನ್ಯ ಕಸದ ಗುರಿ ಯೊಂದಿಗೆ ಸುಸ್ಥಿರ ಪರಿಸರ ಅಭಿವೃದ್ಧಿಗೆ ಪಣ ತೊಡಬೇಕಿದೆ ಎಂದು ಪ್ರೇಮಕುಮಾರ್ ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಪುರಸಭೆಯ ಮುಖ್ಯಾಧಿಕಾರಿಟಿ.ಎಸ್.ಗಿರೀಶ್, ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆಗೆ ನಾವು ಹೆಚ್ಚಿನ ಆದ್ಯತೆ ನೀಡಬೇಕಿದೆ. ಈ ತರಬೇತಿಯು ಘನತ್ಯಾಜ್ಯ ನಿರ್ವಹಣೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಸಹಕಾರಿಯಾಗಿದೆ.ಕಸ ನಿರ್ಹಣೆಗೆ ಸಮುದಾಯ ಕೈಜೋಡಿಸಿದರೆ ಉತ್ತಮ ಪರಿಸರ ನಿರ್ಮಿಸಲು ಸಾಧ್ಯ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಪೌರಾಡಳಿತ ನಿರ್ದೇಶನಾಲಯದ ಸ್ವಚ್ಛ್ ಭಾರತ್ ಮಿಷನ್ ವಿಭಾಗದ ಸಮನ್ವಯಾಧಿಕಾರಿಎಚ್.ವಿಜಯಲಕ್ಷ್ಮಿ ,ಎಂಪ್ರಿ ಸಂಸ್ಥೆಯ ಪರಿಸರ ಸ್ವಚ್ಛತೆ, ಘನತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಬಗ್ಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಮೂಲಕ ಪರಿಸರ ಸ್ವಚ್ಛತೆ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು. ಸಂಪನ್ಮೂಲ ವ್ಯಕ್ತಿ , ವಿಷಯ ತಜ್ಞರಾದ ಅನಿರುದ್ಧ್ ದತ್ತ ಅವರು ಘನತ್ಯಾಜ್ಯ ನಿರ್ವಹಣೆಕುರಿತು ಹಾಗೂ ಸಂಪನ್ಮೂಲ ವ್ಯಕ್ತಿ ವಾಸುಕೀ ” ಹಸಿ ತ್ಯಾಜ್ಯದಿಂದ ಕಾಂಪೋಸ್ಟ್ ಗೊಬ್ಬರ ತಯಾರಿಕೆ ಕುರಿತು ಸ್ಲೈಡ್ಸ್ ಮತ್ತು ಪಿ.ಪಿ.ಟಿ.ಪ್ರಾತ್ಯಕ್ಷಿಕೆ ಮೂಲಕ ವಿವರ ಮಾಹಿತಿ ನೀಡಿದರು. ಜಿಲ್ಲಾ ಘನತ್ಯಾಜ್ಯ ನಿರ್ವಹಣೆಯ ಪ್ರವರ್ತಕ ಎಂ.ಕೀರ್ತಿಪ್ರಸಾದ್, ಎಂಪ್ರಿ ಸಂಸ್ಥೆಯ ತರಬೇತುದಾರರಾದ ಎನ್. ರಾಘವೇಂದ್ರ, ಎ.ಎಂ.ರುಚಿತಾ ಶ್ರೀ ಪುರಸಭೆಯ ಹಿರಿಯ ಆರೋಗ್ಯಾಧಿಕಾರಿ ಎಂ.ಸಿ.ಉದಯ್ ಕುಮಾರ್, ಇತರೆ ಅಧಿಕಾರಿಗಳು ಇದ್ದರು. ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು.‌ :: ಪ್ರತಿಜ್ಞಾ ವಿಧಿ ::  ಇದೇ ವೇಳೆಯಲ್ಲಿ ಸ್ವಚ್ಛ ಪರಿಸರ ಹಾಗೂ ಸೂಕ್ತ ಕಸ ನಿರ್ವಹಣೆ ಕುರಿತು ಟಿ.ಜಿ.ಪ್ರೇಮಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಪ್ರತಿನಿತ್ಯ ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಸೂಕ್ತವಾಗಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣ ಮಾಡುವ ಕುರಿತು ಚರ್ಚೆ- ಸಂವಾದ ನಡೆಸಲಾಯಿತು. ತರಬೇತಿಯಲ್ಲಿ ಮೈಸೂರು ಮಹಾನಗರ ಪಾಲಿಕೆ ಸೇರಿದಂತೆ ಮೈಸೂರು ಹಾಗೂ ಕೊಡಗು ಜಿಲ್ಲೆಯ ನಗರ ಮತ್ತು ಪಟ್ಟಣದ ಸ್ಥಳೀಯ ನಗರ ಸಂಸ್ಥೆಗಳ ಪರಿಸರ ಅಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಕರು ಪಾಲ್ಗೊಂಡಿದ್ದರು. ಜಿಲ್ಲೆಯ ಮಡಿಕೇರಿ ನಗರಸಭೆ ಸೇರಿದಂತೆ ಕುಶಾಲನಗರ ಪುರಸಭೆ, ಸೋಮವಾರಪೇಟೆ, ವಿರಾಜಪೇಟೆ ಪಟ್ಟಣ ಪಂಚಾಯ್ತಿಯ ಅಧಿಕಾರಿಗಳು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.