Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋನ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋನ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ*

ನವೆಂಬರ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ನ.14 NEWS DESK : ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು. ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ ಎಂಟು ಅಂಶದ ಕಾರ್ಯಕ್ರಮಕ್ಕೆ ಅಸ್ತು ಎಂದರು.‌ ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶಗಳನ್ನು ಗುರುತಿಸುವುದು ಮತ್ತೆ ಯಾವ ಸ್ವರೂಪದ ಸಂಘರ್ಷ ಇದೇ ಎಂದು ಪಟ್ಟಿ ಮಾಡುವುದು. ಮಾನವ ಸಂಪನ್ಮೂಲದ ನಿರ್ವಹಣೆ ಸಂಘರ್ಷದ ತೀವ್ರತೆಯ ಆಧಾರದ ಮೇಲೆ ಅಧಿಕಾರಿ, ಸಿಬ್ಬಂದಿಯ ನಿಯೋಜನೆ. :: ಗಸ್ತು : : ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಮಾಡುವುದು ಹಾಗೂ ರಿಜಿಸ್ಟರ್ ನಿರ್ವಹಣೆ. ಹಿರಿಯ ಅಧಿಕಾರಿಗಳು ನಿಯಮಿತವಾಗಿ ಅರಣ್ಯದಂಚಿನ, ಅದರಲ್ಲೂ ಮಾನವ ವನ್ಯ ಜೀವಿ ಸಂಘರ್ಷ ಇರುವ ಗ್ರಾಮದಲ್ಲಿ ವಾಸ್ತವ್ಯ ಮಾಡುವುದು. ಸ್ಥಳೀಯರನ್ನು ತೊಡಗಿಸಿಕೊಳ್ಳುವುದು, ಅರಣ್ಯದಂಚಿನ ಗ್ರಾಮದ ಉತ್ಸಾಹಿ ಯುವಕರು ಮತ್ತು ಹಿರಿಯರನ್ನು ಗುರುತಿಸಿ ಅರಣ್ಯ ಮಿತ್ರ ಎಂದು ಪರಿಗಣಿಸಿ ಗಸ್ತು, ವನ್ಯಜೀವಿ , ಸೆರೆ, ಕಾರ್ಯಾಚರಣೆ ವೇಳೆ ಅವರ ಸೇವೆ ಬಳಸಿಕೊಳ್ಳುವುದು. ವನ್ಯಜೀವಿ ಸಂರಕ್ಷಣೆ ಕಾರ್ಯಾಚರಣೆಗೆ ವನ್ಯಜೀವಿಗಳು ಸಂಚರಿಸುವ ಕಾರ್ಯತಂತ್ರ ಸ್ಥಳಗಳಲ್ಲಿ 24/7 ವಾಹನ ಮತ್ತು ಅರಣ್ಯ ಸಿಬ್ಬಂದಿ ಲಭ್ಯವಾಗುವಂತೆ ಮಾಡುವುದು. :: ಅಣಕು ಪ್ರದರ್ಶನ ::  ವನ್ಯಜೀವಿ ಸೆರೆ , ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸುವುದು. ಜಿಲ್ಲಾ ಮಟ್ಟದಲ್ಲಿ ಸಮನ್ವಯ/ ಸಹಯೋಗ ಸಮಿತಿ ರಚನೆ ತಾಲ್ಲೂಕು ಮಟ್ಟದಲ್ಲಿ ಉಪಸಮಿತಿ ರಚನೆ ಮಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೆರವು ಪಡೆಯುವುದು. ಈ ಸಮಿತಿ ನಿಯಮಿತವಾಗಿ ಸಭೆ ನಡೆಸಿ ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಶ್ರಮಿಸುವುದು :: ಸಭೆಯಲ್ಲಿ ಚರ್ಚೆಗೆ ಬಂದ ಇತರೆ ಪ್ರಮುಖ ಸಂಗತಿಗಳು ::  ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 6395 ಇದ್ದು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಹುಲಿ ಸಂಖ್ಯೆ 563 ಇದ್ದು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಹಾಗೂ 1879 ಚಿರತೆಗಳಿದ್ದು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ವನ್ಯಜೀವಿ ಹಾವಳಿಯಿಂದ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2022-23ರಲ್ಲಿ 57, 2023-24ರಲ್ಲಿ 65, 2024-25ರಲ್ಲಿ 46, 2025-26ರಲ್ಲಿ 32 ಮಾನವ ಜೀವ ಹಾನಿ ಸಂಭವಿಸಿದೆ. ಚಾಮರಾಜನಗರ, ಕೊಡಗು, ಹಾಸನ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಾನವ ಪ್ರಾಣ ಹಾನಿ ಪ್ರಕರಣಗಳು ಸಂಭವಿಸಿದೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ 2024-25 ರಲ್ಲಿ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ 30% ಕಡಿತವಾಗಿದೆ. ವನ್ಯಜೀವಿಗಳು ಆಹಾರ ಹುಡುಕಿಕೊಂಡು ಹೊರಗೆ ಬರುವುದನ್ನು ನಿಗ್ರಹಿಸಬೇಕು.‌ ಬೇಸಿಗೆಯ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು . ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ ಲಾಂಟಾನ ಕಳೆದ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವನ್ಯಪ್ರಾಣಿಗಳ ಮೇವಿಗೆ ಕೊರತೆ ಉಂಟಾಗುತ್ತದೆ. ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನರೇಂದ್ರ ಸ್ವಾಮಿ, ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.