Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಉಳಿಸಿ : ದೀಪಾಭಾಸ್ತಿ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಉಳಿಸಿ : ದೀಪಾಭಾಸ್ತಿ ಕರೆ*

ನವೆಂಬರ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.14 NEWS DESK : ಭಾಷೆಯಂತೆಯೇ ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಗ್ರಂಥಾಲಯಗಳನ್ನೂ ಉಳಿಸುವ ನಿಟ್ಟಿನಲ್ಲಿ ಸಾಹಿತ್ಯ ಪ್ರೇಮಿಗಳು ಕಾಯೋ೯ನ್ಮುಖವಾಗಬೇಕೆಂದು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾಭಾಸ್ತಿ ಕರೆ ನೀಡಿದರು. ನಗರದ ಕೈಗಾರಿಕಾ ಬಡಾವಣೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿತ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಂದಭ೯ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ದೀಪಾಭಾಸ್ತಿ, ಮಡಿಕೇರಿಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ತನಗೆ ಎರಡನೇ ಮನೆಯಿದ್ದಂತೆ ಎಂದು ಹೇಳಿದ ದೀಪಾಭಾಸ್ತಿ, ಗ್ರಂಥಾಲಯದ ಸಂಬಂಧದಿಂದಾಗಿ ತನ್ನ ಸಾಹಿತ್ಯ ಜ್ಞಾನ ಹೆಮ್ಮರವಾಯಿತೆಂದು ಹೇಳಿದರು. ಓದುವ ಪ್ರವೃತ್ತಿಯನ್ನು ಬೆಳೆಸುವಲ್ಲಿ ಅದರಲ್ಲಿಯೂ ಇಂಗ್ಲೀಷ್ ಪುಸ್ತಕ ಓದಲು ಮಡಿಕೇರಿಯ ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರೇರಣೆಯಾಯಿತು ಎಂದೂ ದೀಪಾಭಾಸ್ತಿ ಹೆಮ್ಮೆಯಿಂದ ನುಡಿದರು 2184 ಎಂಬ ತನ್ನ ಗ್ರಂಥಾಲಯ ನೋಂದಣಿ ಸಂಖ್ಯೆಯನ್ನೂ ಉಲ್ಲೇಖಿಸಿದ ದೀಪಾಭಾಸ್ತಿ, ಅನೇಕ ಪುಸ್ತಕಗಳಲ್ಲಿ ತಾನು ಆ ಪುಸ್ತಕ ಓದಿರುವ ಕುಹುರಾಗಿ ಈ ಸಂಖ್ಯೆಯನ್ನು ಗಮನಿಸಬಹುದು ಎಂದೂ ದೀಪಾ ಹೇಳಿದರು. ಸಪ್ತಾಹದ ಮೂಲಕ ಗ್ರಂಥಾಲಯಗಳಿಗೆ ಹೆಚ್ಚಿನ ಓದುಗರು ದೊರಕಲಿ. ಹೊಸ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ತರಿಸುವ ನಿಟ್ಟಿನಲ್ಲಿ ಸಕಾ೯ರ ಗ್ರಂಥಾಲಯಗಳಿಗೆ ಹೆಚ್ಚಿನ ಆಥಿ೯ಕ ಶಕ್ತಿ ನೀಡಲಿ ಎಂದೂ ದೀಪಾಭಾಸ್ತಿ ಸಲಹೆ ನೀಡಿದರು. ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟಿಸಿ ಮಾತನಾಡಿ, ಗ್ರಂಥಾಲಯಗಳು ಓದುಗರ ಪಾಲಿಗೆ ಆಲಯ ಇದ್ದಂತೆ. ಗ್ರಂಥಗಳ ಗುಡಿಯೇ ಆಗಿರುವ ಗ್ರಂಥಾಲಯಗಳು ಓದುಗರಲ್ಲಿ ಸಾಹಿತ್ಯಾಭಿರುಚಿ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿಕೊಂಡು ಬಂದಿವೆ. ವಿದ್ಯಾಥಿ೯ಗಳಲ್ಲಿಯೂ ಓದುವ ಅಭ್ಯಾಸಕ್ಕೆ ಗ್ರಂಥಾಲಯಗಳು ಕಾರಣವಾಗಬೇಕು. ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಂಡುಥನ್ ಮಕ್ಕಳು ಸಾಹಿತ್ಯ ಕೃತಿಗಳನ್ನು, ದಿನಪತ್ರಿಕೆಗಳನ್ನು ಓದುವಂತಾಗಬೇಕು. ಆಯಾ ಶಿಕ್ಷಣ ಸಂಸ್ಥೆಗಳು ಗ್ರಂಥಾಲಯ ಭೇಟಿಯಂಥ ಕಾಯ೯ಕ್ರಮಗಳ ಮೂಲಕ ವಿದ್ಯಾಥಿ೯ಗಳಲ್ಲಿ ಗ್ರಂಥಾಲಯದ ಮಹತ್ವ ತಿಳಿಸಿಕೊಡುವಂಥ ಕಾಯ೯ಕ್ರಮ ಆಯೋಜಿಸಬೇಕೆಂದು ಸಲಹೆ ನೀಡಿದರು. ಜಿಲ್ಲಾ ಕೇಂದ್ರ ಗ್ರಂಥಾಲಯವು ಅತ್ಯುತ್ತಮವಾಗಿ ನಿವ೯ಹಿಸಲ್ಪಡುತ್ತಾ ಓದುಗ ಸ್ನೇಹಿಯಾಗಿದೆ. ಇದಕ್ಕೆ ಕಾರಣರಾದ ಗ್ರಂಥಾಲಯದ ಸಿಬ್ಬಂದಿ ವಗ೯ ಅಭಿನಂದನಾಹ೯ರು ಎಂದರು. ಸಾಹಿತಿ ಸುಬ್ರಾಯ ಸಂಪಾಜೆ ಮಾತನಾಡಿ, ಮಡಿಕೇರಿಯಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಸಾಕಷ್ಟು ಮಹತ್ವವಿದೆ. ಇಲ್ಲಿನ ಗ್ರಂಥಾಲಯ ಸಿಬ್ಬಂದಿಗಳು ಸ್ನೇಹಪರರು ಎಂಬುದೇ ಹೆಚ್ಚು ಓದುಗರನ್ನು ಈ ಗ್ಂಥಾಲಯ ಹೊಂದಲು ಕಾರಣವಾಗಿದೆ. ಗ್ರಂಥಾಲಯ ಸಪ್ತಾಹ ಮತ್ತಷ್ಟು ಓದುಗರನ್ನು ಪಡೆಯಲು ಕಾರಣವಾಗಲಿ ಎಂದು ಹಾರೈಸಿದರು. ಜ್ಞಾನದ ದೀಪ ಬೆಳಗಿಸುವಂಥ ಗ್ರಂಥಾಲಯದ ಕೀತಿ೯ ಮತ್ತಷ್ಟು ಹೆಚ್ಚಾಗಲಿ ಎಂದು ಆಶಿಸಿದರು. ಕಾಯ೯ಕ್ರಮದಲ್ಲಿ ಜಿಲ್ಲಾ ಮುಖ್ಯ ಗ್ರಂಥಪಾಲಕಿ ಸುರೇಖಾ ಮಾತನಾಡಿ, ಪ್ರಸ್ತುತ ಗ್ರಂಥಾಲಯದಲ್ಲಿ 35 ಸಾವಿರ ಪುಸ್ತಕಗಳಿದ್ದು, 5500 ಓದುಗ ಸದಸ್ಯರಿದ್ದಾರೆ. ಏಳು ದಿನಗಳ ಗ್ರಂಥಾಲಯ ಸಪ್ತಾಹದ ಸಂದಭ೯ ಮತ್ತಷ್ಟು ಸದಸ್ಯರನ್ನು ನೋಂದಣಿ ಮಾಡಿಸಿಕೊಳ್ಳುವ ಗುರಿಯಿದೆ ಎಂದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಅಧೀನದಲ್ಲಿ ಜಿಲ್ಲೆಯಾದ್ಯಂತ 10 ಗ್ರಂಥಾಲಯಗಳು ಕಾಯ೯ನಿವ೯ಹಿಸುತ್ತಿವೆ ಎಂದೂ ಅವರು ಮಾಹಿತಿ ನೀಡಿದರು. 1970 ರಿಂದ ಮಡಿಕೇರಿಯಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯವು ಕಾಯ೯ನಿವ೯ಹಿಸುತ್ತಿದೆ ಎಂದೂ ಅವರು ತಿಳಿಸಿದರು. ಸಹಾಯಕ ಗ್ರಂಥಪಾಲಕ ವಿಜಯ್ ನಾಗ್, ಕಾಯ೯ಕ್ರಮ ನಿರೂಪಿಸಿದರು.  ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಗ್ರಂಥಾಲಯ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಓದುಗರಾದ ದಕ್ಷಿಣಮೂತಿ೯ ಅವರಿಗೆ ಸದಸ್ಯತ್ವ ಕಾಡ್೯ ನೀಡುವ ಮೂಲಕ ಗಣ್ಯರು ಚಾಲನೆ ನೀಡಿದರು. ಭಾರತದ ಗ್ರಂಥಾಲಯ ಚಳುವಳಿಯ ಪಿತಾಮಹ ಪದ್ಮಶ್ರೀ ಡಾ.ಎಸ್. ಆರ್.ರಂಗನಾಥನ್ ಭಾವಚಿತ್ರಕ್ಕೆ ಗಣ್ಯರು ಪುಪ್ಪಾಚ೯ನೆ ಮಾಡಿದರು. ಅನೇಕ ಓದುಗರು ಕಾಯ೯ಕ್ರಮದಲ್ಲಿ ಹಾಜರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.