Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ಮಕ್ಕಳು ದೂರ ಉಳಿಯಬೇಕು : ಸಿಎಂ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ಮಕ್ಕಳು ದೂರ ಉಳಿಯಬೇಕು : ಸಿಎಂ ಸಿದ್ದರಾಮಯ್ಯ

ನವೆಂಬರ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ನ.14 NEWS DESK : ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ – ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ ಅವರಿಗೆ ಇತ್ತು. ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಧರ್ಮ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಿದ್ದರು. ನಮ್ಮ ಸರ್ಕಾರ ಕೂಡ ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದು, 65,000 ಕೋಟಿ ರೂಪಾಯಿಗಳನ್ನು ಶಿಕ್ಷಣಕ್ಕೆ ನೀಡುತ್ತಿದ್ದೇವೆಂದು ಹೇಳಿದರು. ನೆಹರೂ ತಮ್ಮ ಯೌವ್ವನದ 3,200ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದ ಹೋರಾಟಗಾರ. ಅತೀ ಶ್ರೀಮಂತ ಕುಟುಂಬದಿಂದ ಬಂದಿದ್ದರೂ ದೇಶದ ಸ್ವಾತಂತ್ರ್ಯಕ್ಕಾಗಿ ಸೆರೆಮನೆ ಸೇರಿದರು. ದೇಶದ ಪ್ರಧಾನಿಯಾಗಿ ಕೃಷಿ, ವಿಜ್ಞಾನ, ನೀರಾವರಿ, ತಂತ್ರಜ್ಞಾನ ಸೇರಿ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಐಐಟಿ, ಏಮ್ಸ್ ಸೇರಿ ಅಣೆಕಟ್ಟು, ಕೈಗಾರಿಕೆಗಳನ್ನೆಲ್ಲಾ ಮಾಡಿದ್ದು ನೆಹರೂ.‌ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಬ್ರಿಟಿಷರ ಜೊತೆ ಕೈಜೋಡಿಸಿದ್ದವರು ನೆಹರೂ ಮತ್ತು ಗಾಂಧಿಯನ್ನು ಟೀಕಿಸುತ್ತಾರೆ. ಇದನ್ನು ಮಕ್ಕಳಿಗೆ ಶಿಕ್ಷಕರು ಹಾಗೂ ಪೋಷಕರು ಅರ್ಥ ಮಾಡಿಸಬೇಕು. ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಇರುವ ಮಕ್ಕಳ ಮೇಲೆ ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಕನಸನ್ನು ನೆಹರೂ ಕಟ್ಟಿಕೊಂಡಿದ್ದರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಈಗ ಈ ವೇದಿಕೆಯಲ್ಲಿ ಸನ್ಮಾನಿತರಾದ ವಿದ್ಯಾರ್ಥಿಗಳೆಲ್ಲರೂ ಬಡ ಕುಟುಂಬದಿಂದ ಬಂದು ಸರ್ಕಾರಿ ಶಾಲೆಗಳಲ್ಲಿ ಓದಿದವರು. ಆದ್ದರಿಂದ ಈ ವರ್ಷ ಒಟ್ಟು 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದ್ದೇವೆ. ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಶ್ರಮಿಸುತ್ತಿದೆ. ನಾನೂ ಸರ್ಕಾರಿ ಶಾಲೆಯಲ್ಲಿ ಓದಿಯೇ ಮುಖ್ಯಮಂತ್ರಿ ಆಗಿದ್ದೀನಿ. ಸರ್ಕಾರಿ ಶಾಲೆಗಳ ಮಕ್ಕಳು ಸ್ವಾಭಿಮಾನದಿಂದ ಸಮಾಜಮುಖಿಯಾಗಿ ಬೆಳೆಯಲು, ಉತ್ತಮ ಶಿಕ್ಷಣ ಪಡೆಯಲು ನಮ್ಮ ಸರ್ಕಾರ ಸಕಲ ಸವಲತ್ತುಗಳನ್ನೂ ನೀಡುತ್ತಿದೆ. ಇಂದಿರಾ ಕಿಟ್, ಶೂ, ಸಮವಸ್ತ್ರ, ಮೊಟ್ಟೆ, ಬಾಳೆಹಣ್ಣು, ಪಠ್ಯ ಪುಸ್ತಕ, ಸ್ಕಾಲರ್ಶಿಪ್ ಇವೆಲ್ಲವನ್ನೂ ಬಡವರ ಮಕ್ಕಳಿಗಾಗಿ ಸರ್ಕಾರ ಒದಗಿಸುತ್ತಿದೆ. ಇದರ ಅನುಕೂಲ ಪಡೆದು ಮಕ್ಕಳು ದೇಶದ ಆಸ್ತಿಯಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಜಯಂತಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರೂ ಅವರ ಪ್ರತಿಮೆಗೆ ಮಾಲಾರ್ಪಣೆ ಮುಖ್ಯಮಂತ್ರಿಗಳು ಮಾಲಾರ್ಪಣೆ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕುಶಾಲನಗರದ ಬಸವೇಶ್ವರ ಬಡಾವಣೆಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ

ಅಕ್ಟೋಬರ್ 14, 2026

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.14 NEWS DESK : ದಶಕಗಳಿಂದ ವಿದ್ಯುತ್ ಸೌಲಭ್ಯದಿಂದ ವಂಚಿತವಾಗಿದ್ದ ಚೆಂಬು ಗ್ರಾಮದ ದಬ್ಬಡ್ಕ ಪ್ರದೇಶದ ಮನೆಗಳಿಗೆ ತಾತ್ಕಾಲಿಕ…

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026

ಸರ್ಫೇಸಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಅಗತ್ಯ: ಡಾ. ಕಾವೇರಪ್ಪ; ಕರ್ನಾಟಕ ಹೈಕೋರ್ಟ್‌ನಲ್ಲಿ ಹೋರಾಟ ನಡೆಸಲು ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರ ಆಗ್ರಹ

ಅಕ್ಟೋಬರ್ 14, 2026

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ; ಅ. 17ರಂದು ರಾತ್ರಿ 7:50ಕ್ಕೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 14, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಶಾರದಾ ಪೂಜೆ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.