Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡ್ಲೂರು ಸರ್ಕಾರಿ ಶಾಲೆಗಳಲ್ಲಿ ಸಂಭ್ರಮದ‌ ಮಕ್ಕಳ ದಿನಾಚರಣೆ : ಸರ್ಕಾರಿ ಶಾಲೆಗಳ ಪ್ರಗತಿಗೆ ಪೋಷಕರ ಪಾತ್ರ ಮುಖ್ಯ : ಟಿ.ಜಿ.ಪ್ರೇಮಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡ್ಲೂರು ಸರ್ಕಾರಿ ಶಾಲೆಗಳಲ್ಲಿ ಸಂಭ್ರಮದ‌ ಮಕ್ಕಳ ದಿನಾಚರಣೆ : ಸರ್ಕಾರಿ ಶಾಲೆಗಳ ಪ್ರಗತಿಗೆ ಪೋಷಕರ ಪಾತ್ರ ಮುಖ್ಯ : ಟಿ.ಜಿ.ಪ್ರೇಮಕುಮಾರ್*

ನವೆಂಬರ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.14 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ‌ ಕೂಡುಮಂಗಳೂರು(ಕೂಡ್ಲೂರು)
ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ
ವತಿಯಿಂದ ಮಕ್ಕಳ ದಿನಾಚರಣೆ : 2025 ಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಶಾಲೆಗಳಲ್ಲಿ ಆಯೋಜಿಸಲಾಗಿದ್ದ
ಮಕ್ಕಳ ವೇಷಭೂಷಣ ಸ್ಪರ್ಧೆ,ಭಾಷಣ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ವಿವಿಧ ದಿರಿಸುಗಳನ್ನು ತೊಟ್ಟು ಗಮನ ಸೆಳೆದರು.
ಮಕ್ಕಳು ಸಂಭ್ರಮದಿಂದ ಪ್ರತಿಭೆಯ ಅನಾವರಣಗೊಳಿಸಿ ಖುಷಿ ಪಟ್ಟರು. ಶೈಕ್ಷಣಿಕ ಹಾಗೂ ಇನ್ನಿತರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಕುರಿತು ವಿಚಾರ ಮಂಡಿಸುವ ಮೂಲಕ ಗಮನ ಸೆಳೆದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳಿಗೆ ವಿವಿಧ ಉಚಿತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಸಮುದಾಯ ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ವಿದ್ಯಾರ್ಥಿಗಳ ಪೋಷಕರನ್ನು ತಮ್ಮ ಮಕ್ಕಳ ಶಿಕ್ಷಣ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ದಿಸೆಯಲ್ಲಿ ಈ ಸಭೆಯು ಸಹಕಾರಿಯಾಗಿದೆ ಎಂದು ತಿಳಿಸಿದರು. ಮಕ್ಕಳ ಹಕ್ಕುಗಳು, ಶಿಕ್ಷಣ ಮತ್ತು ಯೋಗಕ್ಷೇಮದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಮಕ್ಕಳ ಬಾಲ್ಯದ ಮನೋಭಾವವನ್ನು ಎತ್ತಿಹಿಡಿಯಲು ಈ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ಪ್ರೇಮಕುಮಾರ್ ತಿಳಿಸಿದರು. ವಿದ್ಯಾರ್ಥಿಗಳ ಪೋಷಕರನ್ನು ತಮ್ಮ ಮಕ್ಕಳ ಶಿಕ್ಷಣ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ದಿಸೆಯಲ್ಲಿ ಈ ಸಭೆಯು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಸ್. ಡಿ.ಎಂ.ಸಿ.ಅಧ್ಯಕ್ಷ ಕೆ.ಕೆ.ಹರೀಶ್ ಮಾತನಾಡಿ, ಪ್ರತಿಯೊಬ್ಬರೂ ಸರ್ಕಾರಿ ಶಾಲೆಗಳ ಪ್ರಗತಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಶಾಲೆಯ ಹಿರಿಯ ಶಿಕ್ಷಕ ಕೆ.ಗೋಪಾಲಕೃಷ್ಣ, ಶಾಲೆಗಳಲ್ಲಿ ಸರ್ಕಾರದ ವತಿಯಿಂದ ಮಕ್ಕಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಶಿಕ್ಷಕರಾದ ಬಿ.ಡಿ.ರಮ್ಯ, ಬಿ.ಎನ್.ಸುಜಾತ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಕಛೇರಿ ಸಿಬ್ಬಂದಿ ಎಂ.ಉಷಾ, ಶಾಲಾ ನಾಯಕರಾದ ಮಾಳವಿಕ , ಶಾಹಿರ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಇದ್ದರು. ವಿದ್ಯಾರ್ಥಿನಿ ದಿಶಾ ನಿರ್ವಹಿಸಿದರು. ಇದಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ ವಿವಿಧ ಮನೋರಂಜನೆಯ ಆಟಗಳನ್ನು ಆಡಿಸಿದರು. :: ಕೂಡ್ಲೂರು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂಭ್ರಮ ::  ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಎಂ. ಸಂತೋಷ್ ಅಧ್ಯಕ್ಷತೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕರ- ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ ಮಾತನಾಡಿ, ಮಕ್ಕಳ ಶೈಕ್ಷಣಿಕ ‌ಪ್ರಗತಿಗೆ ಮತ್ತು ಶಾಲಾಭಿವೃದ್ಧಿಗೆ ಪೋಷಕರು ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಪವಿತ್ರ, ಸದಸ್ಯರು ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಪ್ರಮುಖರಾದ ಗಿರೀಶ್, ಗಿರಿಪ್ರಸಾದ್, ಯಮುನ, ಕೆ.ಕೆ.ಹರೀಶ್, ಅರ್ಪಿತಾ ಇತರರು ಇದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತಗೊಂಡ ಮಕ್ಕಳಿಗೆ ಶಾಲಾ ಶಿಕ್ಷಕಿ ಜಿ.ನಳಿನಿ , ವೈಯಕ್ತಿಕವಾಗಿ ಬಹುಮಾನ ವಿತರಿಸಿದರು. ಇದೇ ವೇಳೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸುವ ಕುರಿತು ಹಾಗೂ ಸರ್ಕಾರಿ ಶಾಲೆಗಳ ಸರ್ವಾಂಗೀಣ ಪ್ರಗತಿಗೆ ಪೋಷಕರು, ದಾನಿಗಳು ಹಾಗೂ ಸಮುದಾಯದ ಸಹಭಾಗಿತ್ವವನ್ನು ಬಳಸಿಕೊಳ್ಳುವ ಮೂಲಕ ಕುರಿತು ಮಹಾಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು. ಕುಶಾಲನಗರ ತಾಲ್ಲೂಕಿನ ವಿವಿಧ ಶಾಲೆಗಳಲ್ಲಿ ‘ಮಕ್ಕಳ ದಿನಾಚರಣೆ’ ಯನ್ನು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲಾಯಿತು. ಇದೇ ವೇಳೆಯಲ್ಲಿ ಕೂಡ್ಲೂರು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಬೆಂಗಳೂರಿನಿಂದ ನೇರ ಪ್ರಸಾರವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕಾರ್ಯಕ್ರಮವನ್ನು ಟಿ.ವಿ.ಮೂಲಕ ಮಕ್ಕಳು ವೀಕ್ಷಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.