Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವೀರ ವನಿತೆ ಅಬ್ಬಕ್ಕ ಚರಿತ್ರೆಯನ್ನು ತಿಳಿದುಕೊಳ್ಳುವುದು ಪ್ರತಿಯೊಬ್ಬರ  ಕರ್ತವ್ಯ : ಮನು ಕಾವೇರಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವೀರ ವನಿತೆ ಅಬ್ಬಕ್ಕ ಚರಿತ್ರೆಯನ್ನು ತಿಳಿದುಕೊಳ್ಳುವುದು ಪ್ರತಿಯೊಬ್ಬರ  ಕರ್ತವ್ಯ : ಮನು ಕಾವೇರಪ್ಪ*

ನವೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.15 NEWS DESK : ನಮ್ಮ ಇತಿಹಾಸ ನೋಡಿದಾಗ ಕೇವಲ ಪರಕೀಯರ ದಾಳಿ ಅವರ ಆಳ್ವಿಕೆಯನ್ನು ವೈಭವೀಕರಿಸಿ ಹೇಳಲಾಗಿದೆ ಹೊರತು ಸ್ಥಳೀಯ ವೀರರ ಕುರಿತು ಮಾಹಿತಿ ನೀಡಲಾಗುತಿಲ್ಲ ಎಂದು ವನವಾಸಿ ಕಲ್ಯಾಣ, ಕರ್ನಾಟಕ ಅಧ್ಯಕ್ಷ ಚಕ್ಕೇರ ಮನು ಕಾವೇರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.  ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗ ಮತ್ತು ವಿರಾಜಪೇಟೆ ಕಾವೇರಿ ಕಾಲೇಜು ಜಂಟಿ ಆಶ್ರಯದಲ್ಲಿ ನಡೆದ ಅಬ್ಬಕ್ಕ@500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ- ಎಸಳು 91 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ದೇಶದ ಮೇಲೆ ದಾಳಿ ನಡೆಸಿ ಆಕ್ರಮಣ ಮಾಡಿಕೊಂಡು ಆಡಳಿತವನ್ನು ನಡೆಸಿದ ಮೊಘಲರಿಂದ ಹಿಡಿದು ಬ್ರಿಟಿಷರವರೆಗಿನ ಎಲ್ಲಾ ಇತಿಹಾಸವನ್ನು ನಾವು ತಿಳಿದುಕೊಳ್ಳುತ್ತೇವೆ. ಇದಕ್ಕೆ ಕಾರಣ ಬ್ರಿಟಿಷರು ಶೈಕ್ಷಣಿಕವಾಗಿ ದೈಹಿಕ ಮತ್ತು ಮಾನಸಿಕ ಗುಲಾಮರನ್ನಾಗಿ ಮಾಡಿಕೊಂಡದ್ದು, ಆದರೆ ಸ್ಥಳೀಯವಾಗಿ ಹೋರಾಟವನ್ನು ನಡೆಸಿದ ವೀರರ ಮೇಲೆ ನಮ್ಮ ಇತಿಹಾಸ ಹೆಚ್ಚಾಗಿ ಬೆಳಕು ಚೆಲ್ಲುತ್ತಿಲ್ಲ. ಶಿವಾಜಿ, ಅಬ್ಬಕ್ಕ , ಕಿತ್ತೂರು ರಾಣಿ ಚೆನ್ನಮ್ಮ ಮುಂತಾದ ಮಹನೀಯರು ನಮ್ಮ ಇತಿಹಾಸದ ಪುಸ್ತಕಗಳಲ್ಲಿ ಕೇವಲ ಒಂದೆರಡು ಪುಟಕ್ಕೆ ಸೀಮಿತರಾಗಿದ್ದಾರೆ. ಭಾರತೀಯರಾದ ನಾವು ಮೊದಲು ನಮ್ಮ ಆಚಾರ, ವಿಚಾರ, ಸಂಸ್ಕೃತಿಯನ್ನು ಅರ್ಥ ಮಾಡಿಕೊಂಡು ನಮ್ಮತನವನ್ನು ತಿಳಿದುಕೊಳ್ಳಬೇಕು. ಜಗತ್ತಿಗೆ ಅಸಂಖ್ಯಾತ ಜ್ಞಾನಿಗಳನ್ನು ಸೊನ್ನೆಯಂತಹ ಮಹಾಸಂಖ್ಯೆಯನ್ನು ನೀಡಿದಂತಹ ವಿಶ್ವಗುರು ಭಾರತ ಎಂಬುದನ್ನು ಅರಿತು ಬಾಳಬೇಕೆಂದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರು ಮತ್ತು ಡೀನ್ ಪ್ರೊ.ಉದಯ ಕುಮಾರ್ ಶೆಣೈ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಬ್ಬಕ್ಕ ಬಹಳ ಚರ್ಚಿತಳಾಗುತ್ತಿದ್ದಾಳೆ. ಅಬ್ಬಕ್ಕನ ಕುರಿತ ಇತಿಹಾಸದಲ್ಲಿ ನೋಡುವಂತಹ ಸಂದರ್ಭ ಸುಧೀರ್ಘವಾಗಿ ಸಣ್ಣ ಪ್ರಾಂತ್ಯದ ಮೂಲಕ ಪೋರ್ಚುಗೀಸರಲ್ಲೇ ನಡುಕವನ್ನು ಹುಟ್ಟಿಸಿದ ವೀರ ವನಿತೆ. ಸೈನ್ಯ, ನೀರಾವರಿ ವ್ಯವಸ್ಥೆ ,ಆಡಳಿತದ ಮೂಲಕ ಪಾಶ್ಚಿಮಾತ್ಯ ರಾಷ್ಟಗಳವರೆಗೆ ತನ್ನ ಪ್ರಸಿದ್ಧಿ ಹರಡುವಂತೆ ಮಾಡಿದ ವೀರ ಮಹಿಳೆ. ರಾಷ್ಟ್ರ ಪ್ರಥಮ ಎಂಬ ಪರಿಕಲ್ಪನೆ ಮೊದಲು ಆರಂಭಿಸಿದವಳು ಅಬ್ಬಕ್ಕ ಸ್ಥಳೀಯರ ಮೂಲಕ ಪ್ರಬಲವಾದ ನೌಕಾಪಡೆ ಸ್ಥಾಪಿಸಿ ಕಡಲ ತಡಿಯಿಂದ ನಿರಂತರವಾಗಿ ಪೋರ್ಚುಗಿಸರನ್ನು ಹಿಮ್ಮೆಟ್ಟಿಸಿ ವಿವಿಧ ಧರ್ಮ ಜಾತಿ ಜನರ ಸಮಾನ ಅವಕಾಶ ನೀಡಿ ಸಮರ್ಥ ಸೈನ್ಯದ ಮೂಲಕ ಆಡಳಿತ ನಡೆಸಿ ಅಂತರ್ಜಾತಿ ವಿವಾಹದ ಮೂಲಕ ಸಾಮರಸ್ಯ ಬೆಳೆಸಿ ನೆಲ, ಜಲ, ಸಂಸ್ಕಾರ , ಸಂಸ್ಕೃತಿ ಉಳಿಸಿ ಬೆಳೆಸಿದವರು. ಇಂತಹವರ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಯ ಪಡಿಸುವುದು ಬಹಳ ಅಗತ್ಯ ಎಂದರು.  ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಕೆ ಆರ್ ಎಂ ಎಸ್ ಎಸ್ . ರಾಜ್ಯ ಪ್ರಧಾನ ಜಂಟಿ ಕಾರ್ಯದರ್ಶಿ ಡಾ. ಮಾಧವ ಎಂ.ಕೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಮಾತನಾಡಿದರು. ಕೆ ಆರ್ ಎಂ ಎಸ್ ಎಸ್, ಸಂಯೋಜಕಿ ಜಯಲಕ್ಷ್ಮಿ ಆರ್ ಶೆಟ್ಟಿ, ಕುಟ್ಟಂಡ ಪ್ರಿನ್ಸ್ ಗಣಪತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಆಡಳಿತಾತ್ಮಕ ಸಿಬ್ಬಂದಿಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.