Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆಯಲ್ಲಿ ಪ್ರೌಢಶಾಲಾ ಮಕ್ಕಳಿಗೆ ಪ್ರಾಚ್ಯ ಪ್ರಜ್ಞೆ ಕುರಿತು ಸ್ಪರ್ಧೆ : ವಿದ್ಯಾರ್ಥಿಗಳು ಪ್ರಾಚ್ಯ ಪ್ರಜ್ಞೆ ಬೆಳೆಸಿಕೊಳ್ಳಲು ಎಂ.ವಿ.ಮಂಜೇಶ್ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆಯಲ್ಲಿ ಪ್ರೌಢಶಾಲಾ ಮಕ್ಕಳಿಗೆ ಪ್ರಾಚ್ಯ ಪ್ರಜ್ಞೆ ಕುರಿತು ಸ್ಪರ್ಧೆ : ವಿದ್ಯಾರ್ಥಿಗಳು ಪ್ರಾಚ್ಯ ಪ್ರಜ್ಞೆ ಬೆಳೆಸಿಕೊಳ್ಳಲು ಎಂ.ವಿ.ಮಂಜೇಶ್ ಕರೆ

ನವೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ ನ.15 NEWS DESK : ವಿದ್ಯಾರ್ಥಿಗಳು ಪ್ರವಾಸದ ಸಂದರ್ಭದಲ್ಲಿ ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡಿ ಅವುಗಳ ಇತಿಹಾಸ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಕುರಿತು ಪ್ರಾಚ್ಯ ಪ್ರಜ್ಞೆ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಂಡು ಸ್ಮಾರಕಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು
ಸೋಮವಾರಪೇಟೆ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್ ಹೇಳಿದರು. ಕರ್ನಾಟಕ ಪುರಾತತ್ವ, ಸಂಗ್ರಹಾಲಯಗಳು ಮತ್ತು
ಪರಂಪರ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಸೋಮವಾರಪೇಟೆ ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ಶನಿವಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಪ್ರಾಚ್ಯ ಪ್ರಜ್ಞೆ” ಕುರಿತು ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಇಂದು ನಾವು ಪ್ರಾಚೀನ ಕಾಲದ ಕಲೆ, ಸಂಸ್ಕೃತಿ, ಪರಂಪರೆಯನ್ನು ಪ್ರತಿಬಿಂಬಿಸುವ ಪ್ರಾಚ್ಯ ವಸ್ತು ಸ್ಮಾರಕಗಳು, ಸಂಗ್ರಹಾಲಯಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು. ಕರ್ನಾಟಕದ ಪ್ರಾಚೀನ ಸ್ಮಾರಕಗಳ ಉಳಿಸುವಿಕೆಯಲ್ಲಿ ಇರುವ ಸವಾಲುಗಳ ಬಗ್ಗೆ ನಾವು ಜಾಗ್ರತರಾಗುವ ಮೂಲಕ ಅವುಗಳ ಸಂರಕ್ಷಣೆಗೆ ಒತ್ತು ನೀಡಬೇಕಿದೆ ಎಂದು ಮಂಜೇಶ್ ಹೇಳಿದರು. ಪ್ರಾಚೀನ ಸಂಗ್ರಹಾಲಯಗಳ ಮಹತ್ವದ ಕುರಿತು ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಭಾರತದ ಇತಿಹಾಸ ಪ್ರತಿಬಿಂಬಿಸುವ ಸ್ಮಾರಕಗಳು ನಮ್ಮ ನಾಗರಿಕತೆಯ ಪ್ರಖ್ಯಾತ ಚಿಹ್ನೆಗಳಾಗಿವೆ ಎಂದರು. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಪ್ರಾಚೀನ ಸ್ಮಾರಕಗಳು, ಶಿಲ್ಪಕಲೆಗಳು, ವಾಸ್ತುಶಿಲ್ಪ ಹಾಗೂ ಪರಂಪರೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಸಹಕಾರಿಯಾಗಿವೆ ಎಂದು ಹೇಳಿದರು. ಪ್ರಾಚ್ಯ ಪ್ರಜ್ಞೆ ಯ ಮಹತ್ವ ವಿವರಿಸಿದ ತಾಲ್ಲೂಕು ಸ್ಪರ್ಧಾ ನೋಡಲ್ ಅಧಿಕಾರಿ ಎಸ್.ಎಸ್.ಶಿವಕುಮಾರ್, ದೇಶದ ಇತಿಹಾಸ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ಪ್ರಾಚೀನ ಸ್ಮಾರಕಗಳ ಬಗ್ಗೆ ಅರಿವು ಮೂಡಿಸಿ ಅವುಗಳ ಸಂರಕ್ಷಣೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ ಇಂತಹ ಸ್ಪರ್ಧೆ ಏರ್ಪಡಿಸಲಾಗುತ್ತಿದೆ ಎಂದರು.  ಪ್ರಾಚ್ಯ ಸಂಗ್ರಹಾಲಯಗಳ ಮಹತ್ವದ ಕುರಿತು ಮಾತನಾಡಿದ
ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಟಿ.ವಿ.ಶೈಲಾ, ದೇಶದ ಪ್ರತಿಯೊಂದು ಸ್ಮಾರಕಗಳು ಹಾಗೂ ಸಂಗ್ರಹಾಲಯಗಳು ದೇಶದ ಸಂಪತ್ತು. ಇವುಗಳ ಕಲೆ, ಸಾಹಿತ್ಯ, ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು ಹಾಗೂ ಇವುಗಳನ್ನು ಭವಿಷ್ಯತ್ತಿನ ದೃಷ್ಟಿಯಿಂದ ಉಳಿಸಿ ಸಂರಕ್ಷಿಸಬೇಕಿದೆ ಎಂದರು.  ಕರ್ನಾಟಕದ ಪ್ರಾಚೀನ ಐತಿಹಾಸಿಕ ಸ್ಮಾರಕಗಳಿಗೆ ತನ್ನದೇ ಆದ ವೈಶಿಷ್ಟ್ಯತೆ ಇದ್ದು,ವಿಶ್ವ ಪಾರಂಪರಿಕ ‌ಪಟ್ಟಿಯಲ್ಲಿ ಇಲ್ಲಿನ ಐತಿಹಾಸಿಕ ಸ್ಮಾರಕಗಳು ಸೇರಿರುವುದು ಕನ್ನಡ ನಾಡಿನ ಹೆಮ್ಮೆಯಾಗಿದೆ ಎಂದು ಬಣ್ಣಿಸಿದರು. ಮಾದಾಪುರ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಪಾಲಾಕ್ಷ, ಶಿಕ್ಷಣ ಸಂಯೋಜಕಿ ಎಸ್.ಬಿ.ಯಾದಕುಮಾರಿ, ಸಿ.ಆರ್ ಗಳಾದ ವಿ ಪ್ರೇಮ, ಡಿ.ಆರ್. ಗಿರೀಶ್, ಎಂ.ಎನ್.ಚೈತ್ರ, ಸಂಪನ್ಮೂಲ ಶಿಕ್ಷಕರಾದ ಡಿ.ವಿಜಯ್ ಕುಮಾರ್ , ಬಿಪಿನ್ ಕುಮಾರ್ ಹಾಗೂ ಆರ್. ದಿವಾಕರ್ ಇದ್ದರು.  ವಿದ್ಯಾರ್ಥಿಗಳಿಗೆ ಪ್ರಾಚ್ಯ ಪ್ರಜ್ಞೆ ಕುರಿತು ಪ್ರಬಂಧ, ಭಾಷಣ, ಚಿತ್ರಕಲೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿವಿಧ ಸ್ಪರ್ಧೆಗಳ ವಿಷಯಗಳನ್ನು ಮುಂದೆ ಆವರಣದಲ್ಲಿ ಬರೆಯಲಾಗಿದೆ. :: ಪ್ರಬಂಧ ಸ್ಪರ್ಧೆ : : ಕರ್ನಾಟಕದ ಪ್ರಾಚೀನ ಸ್ಮಾರಕಗಳ ಉಳಿಸುವಿಕೆಯಲ್ಲಿ ಇರುವ ಸವಾಲುಗಳು ಮತ್ತು ಪರಿಹಾರಗಳು, :: ಭಾಷಣ ಸ್ಪರ್ಧೆ : : ಕರ್ನಾಟಕದ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಮುದಾಯದ ಪಾತ್ರ, :: ಚಿತ್ರಕಲೆ ಸ್ಪರ್ಧೆ :: ಕರ್ನಾಟಕದ ಐತಿಹಾಸಿಕ ಸ್ಮಾರಕಗಳು ಹಾಗೂ :: ರಸಪ್ರಶ್ನೆ ಸ್ಪರ್ಧೆ :: ಕರ್ನಾಟಕದ ಪ್ರಾಚೀನ ಐತಿಹಾಸಿಕ ಸ್ಮಾರಕಗಳಿಗೆ ಸಂಬಂಧಪಟ್ಟ ವಿಷಯಗಳು ಕುರಿತು ಸ್ಪರ್ಧೆಗಳನ್ನು ನಡೆಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.