
ಮಡಿಕೇರಿ ನ.17 NEWS DESK : ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 400 ಮೀಟರ್ ಓಟದ ಸ್ಪರ್ಧೆಯಲ್ಲಿ ಕನ್ರ್ನಂಡ ಕೃತಿಕಾ ಅಕ್ಕಮ್ ಪ್ರಥಮ, 200 ಮೀಟರ್ ಓಟದ ಸ್ಪರ್ಧೆಯಲ್ಲಿ ಬೊವ್ವರಿಯಂಡ ಹನ್ಸಿಕ ಪೊನ್ನಪ್ಪ ಪ್ರಥಮ, 400 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಂಡ ಶತಕ ದ್ವಿತೀಯ, 4400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಕುಲ್ಲಚಂಡ ಭೂಮಿಕಾ ಭೋಜಮ್ಮ, ಕರ್ನಂಡ ಶತಕ ಕಾವೇರಮ್ಮ, ಕರ್ನಂಡ ಕೃತಿಕಾ ಅಕ್ಕಮ್ಮ, ಬೊವ್ವರಿಯಂಡ ಹನ್ಸಿಕ ಪೊನ್ನಪ್ಪ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಈ ಅಥ್ಲೆಟಿಕ್ ತಂಡವು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಎಂದು ಶಾಲೆಯ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ. ಈ ಸಂದರ್ಭ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದಂತಹ ವಿನೋದ್ ಪಿ. ಎನ್ ಉಪಸ್ಥಿತರಿದ್ದು ಮಕ್ಕಳಿಗೆ ಪ್ರೋತ್ಸಾಹ ನೀಡಿದ್ದಾರೆ. ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಮೋನಿಕ, ಲಾವಣ್ಯ ಹಾಗೂ ಶ್ರೀಮಾನ್ ಗೌತಮ್ ತರಬೇತಿ ನೀಡಿದ್ದಾರೆ. ತಂಡದ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಿಕಿ ಹಾಗೂ ಬೋಧಕ ಬೋಧಕೇತರ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.









