Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತೋಳೂರುಶೆಟ್ಟಳ್ಳಿ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಶೇ.100 ಫಲಿತಾಂಶ*
  • *ಕೊಡಗು ಜಿಲ್ಲಾ ಜಾಗೃತಿ ಸಮಿತಿಯ ಗೌರವ ಕಾರ್ಯದರ್ಶಿಯಾಗಿ ರಂಜಿತ್ ಕವಲಪಾರ ಆಯ್ಕೆ*
  • *ಎಸ್‍ಎಸ್‍ಎಲ್‍ಸಿಯಲ್ಲಿ ವಿ.ಯು.ಮಿಸ್ಬಾಹ್ ಸಾಧನೆ*
  • *ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ನೇಮೋತ್ಸವ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ : ಕಾನೂನು ಸಲಹೆಗಾರರಾಗಿ ರೋಷನ್ ಹೆಚ್.ಸಿ ಆಯ್ಕೆ*
  • *ವಿಮಾನ ನಿಲ್ದಾಣ ಅಭಿವೃದ್ಧಿ ಪರಿಶೀಲನಾ ಸಭೆ : ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ಕಾರ್ಯ ತ್ವರಿತಗೊಳಿಸಲು ಸಂಸದ ಯದುವೀರ್ ಒಡೆಯರ್ ಸೂಚನೆ*
  • *ಚೀಯಕಪೂವಂಡ ಕಪ್ ಗೆ 24 ತಂಡಗಳ ಸೆಣಸಾಟ : ಏ.26 ರಂದು ಸಮಾರೋಪ*
  • *ಕಾಡುಪ್ರಾಣಿಗಳ ಹಾವಳಿ ಶಾಶ್ವತ ನಿಯಂತ್ರಣಕ್ಕೆ ಕಾವೇರಿ ಸೇವಾ ಸಂಘ ಆಗ್ರಹ*
  • *ಏ.28 ರಂದು ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ”*
  • *ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಗೌಡ ಸಮಾಜದಿಂದ ಅಭಿನಂದನಾ ಸಮಾರಂಭ : ನೂತನ ಗೌಡ ಸಮಾಜ ನಿರ್ಮಾಣಕ್ಕೆ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಗೌಡ ಸಮಾಜದಿಂದ ಅಭಿನಂದನಾ ಸಮಾರಂಭ : ನೂತನ ಗೌಡ ಸಮಾಜ ನಿರ್ಮಾಣಕ್ಕೆ ನಿರ್ಧಾರ*

ನವೆಂಬರ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ನ.17 : ವಿರಾಜಪೇಟೆ ಗೌಡ ಸಮಾಜಕ್ಕೆ ಭೂಮಿಯನ್ನು ದಾನವಾಗಿ ನೀಡಿದ ಸಮಾಜ ಸೇವಕ ಸುಳ್ಯದ ಕುರುಂಜಿ ವೆಂಕಟರಮಣ ಗೌಡ ಹಾಗೂ ಜಾನಕಿ ದಂಪತಿಗಳ ಪುತ್ರರಾದ ಡಾ.ಚಿದಾನಂದ ಗೌಡರು ಮತ್ತು ಡಾ.ರೇಣುಕಾ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭ ವಿರಾಜಪೇಟೆ ಗೌಡ ಸಮಾಜದಲ್ಲಿ ನಡೆಯಿತು.
ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಡಾ.ಚಿದಾನಂದ ಅವರು ಸುಮಾರು 20 ವರ್ಷಗಳಿಂದ ಬಾಕಿ ಉಳಿದಿದ್ದ ಭೂಮಿಯ ನೋಂದಣಿ ಪ್ರಕ್ರಿಯೆಯನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹಾಗೂ ಅವರ ತಂಡವು ನಮ್ಮೊಂದಿಗೆ ಚರ್ಚಿಸಿ ಅಂತಿಮಗೊಳಿಸಿದ್ದಾರೆ. ಇದೀಗ ಜಾಗ ಗೌಡ ಸಮಾಜದ ಅಧೀನದಲ್ಲಿದ್ದು, ಶೀಘ್ರ ಉತ್ತಮವಾದ ಗೌಡ ಸಮಾಜವನ್ನು ನಿರ್ಮಿಸಿ ಎಂದು ಕರೆ ನೀಡಿದರು. ನೂತನ ಕಟ್ಟಡ ನಿರ್ಮಾಣದ ಸಂದರ್ಭ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ ಅವರು, ಸನ್ಮಾನವನ್ನು ತಂದೆ, ತಾಯಿಯರಿಗೆ ಅರ್ಪಿಸುವುದಾಗಿ ಹೇಳಿದರು. ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರು ಮಾತನಾಡಿ ಗೌಡ ಸಮಾಜಕ್ಕೆ ದೊರೆತ್ತಿರುವ  ಜಾಗದಲ್ಲಿ ಸುಂದರವಾದ ಸಮಾಜ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿ ನಿಲಯವನ್ನು ಸ್ಥಾಪಿಸಿ ಎಂದು ಸಲಹೆಯನ್ನು ನೀಡಿದರು. ವಿರಾಜಪೇಟೆ ಗೌಡ ಸಮಾಜದ ಯೋಜನೆಗಳಿಗೆ ನಮ್ಮ ಕುಟುಂಬದ ಸಂಪೂರ್ಣ ಬೆಂಬಲ ಇದೆ ಎಂದರು. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರು ಮಾತನಾಡಿ ಸುಮಾರು 20 ವರ್ಷಗಳಿಂದ ಸಮಾಜದ ಪ್ರಮುಖರು ಜಾಗಕ್ಕಾಗಿ ನಿರಂತರ ಪ್ರಯತ್ನ ಮಾಡಿದ್ದಾರೆ. ಒಕ್ಕೂಟದ ಎಲ್ಲಾ ನಿರ್ದೇಶಕರು ಹಾಗೂ ದಾನಿಗಳ ಸಹಕಾರದಿಂದ ಇದೀಗ ನೋಂದಣಿ ಮಾಡಲಾಗಿದೆ. ಉತ್ತಮವಾದ ಸಮಾಜ ನಿರ್ಮಾಣದ ಯೋಜನೆಗೆ ಒಕ್ಕೂಟ ಬೆಂಬಲವಾಗಿ ನಿಲ್ಲಲಿದೆ. ಶೀಘ್ರ ಮಹಾಸಭೆ ನಡೆಸಿ ಅನುಭವಸ್ಥರು ಹಾಗೂ ಯುವಕರಿಂದ ಕೂಡಿದ ಆಡಳಿತ ಮಂಡಳಿಯನ್ನು ರಚಿಸಿ ಮುಂದಿನ ಕಾರ್ಯಚಟುವಟಿಕೆಗಳಿಗೆ ಕಾರ್ಯೋನ್ಮುಖರಾಗಿ ಎಂದು ಸಲಹೆ ನೀಡಿದರು.
ವಿಧಾನಸಭೆಯ ಮಾಜಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಅವರು ಮಾತನಾಡಿ ಸಮಾಜಕ್ಕೆ ಬರುವ ಸರಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ನಾನು ಶಾಸಕನಾಗಿದ್ದಾಗ ಅನುದಾನ ಕೊಡಿಸಲು ಸಾಧ್ಯವಾಗಿರಲಿಲ್ಲ. ಮುಂದಿನ ದಿನಗಳಲ್ಲಿ ಅನುದಾನ ಕ್ರೋಢೀಕರಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಅವರು ಮಾತನಾಡಿ ಗೌಡರು ಹಾಗೂ ಕೊಡವರು ಸಹಬಾಳ್ವೆಯಿಂದ ಇರಬೇಕು, ನಮ್ಮ ಒಗ್ಗಟ್ಟು ಮತ್ತಷ್ಟು ಗಟ್ಟಿಯಾಗಬೇಕು ಎಂದರು. ವಿರಾಜಪೇಟೆ ಗೌಡ ಸಮಾಜಕ್ಕೆ ಎಂಎಲ್‌ಸಿ ಅನುದಾನದಿಂದ 5ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು. ವಿರಾಜಪೇಟೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟ್ಟಿ ವಾಸು ಗಣಪತಿ ಅವರು ಮಾತನಾಡಿ ಒಂದೊಳ್ಳೆಯ ಗೌಡ ಸಮಾಜವನ್ನು ನಿರ್ಮಿಸಲು ನಿರ್ಧರಿಸಿದ್ದು, ಸರ್ವರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುಪಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರಿಗೆ ವಿರಾಜಪೇಟೆ ಗೌಡ ಸಮಾಜದ ವತಿಯಿಂದ ಮನವಿ ಪತ್ರವನ್ನು ನೀಡಲಾಯಿತು.  ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷ ಡಾ.ರಾಜೇಶ್ ತೇನನ ಸ್ವಾಗತಿಸಿದರು. ಪಟ್ಟಡ ಶಿವಕುಮಾರ್ ನಿರೂಪಿಸಿದರು, ಗೌಡದಾರೆ ಬಿದ್ದಪ್ಪ ವಂದಿಸಿದರು. ಚೆಟ್ಟಿನೆರವನ ಚಂದ್ರಶೇಖರ್ ಗೌಡ ಸಮಾಜ ನಡೆದು ಬಂದ ಹಾದಿಯನ್ನು ವಿವರಿಸಿದರು. ಮಂಜoದ್ರ ರೇಖಾ ಉಲ್ಲಾಸ್ ಪ್ರಾರ್ಥಿಸಿದರು. ಕೊಡಗು ಗೌಡ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ ಕುಮಾರ್, ಸರ್ವ ನಿರ್ದೇಶಕರುಗಳು, ಕೊಡಗು, ಬೆಂಗಳೂರು, ಮೈಸೂರು ಸೇರಿದಂತೆ ಕೊಡಗಿನ ಎಲ್ಲಾ ಭಾಗಗಳ ಗೌಡ ಸಮಾಜಗಳ ಅಧ್ಯಕ್ಷರುಗಳು, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತೋಳೂರುಶೆಟ್ಟಳ್ಳಿ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಶೇ.100 ಫಲಿತಾಂಶ*

ಏಪ್ರಿಲ್ 25, 2026

*ಕೊಡಗು ಜಿಲ್ಲಾ ಜಾಗೃತಿ ಸಮಿತಿಯ ಗೌರವ ಕಾರ್ಯದರ್ಶಿಯಾಗಿ ರಂಜಿತ್ ಕವಲಪಾರ ಆಯ್ಕೆ*

ಏಪ್ರಿಲ್ 25, 2026

*ಎಸ್‍ಎಸ್‍ಎಲ್‍ಸಿಯಲ್ಲಿ ವಿ.ಯು.ಮಿಸ್ಬಾಹ್ ಸಾಧನೆ*

ಏಪ್ರಿಲ್ 25, 2026

*ಕೊಡಗು ಜಿಲ್ಲಾ ಜಾಗೃತಿ ಸಮಿತಿಯ ಗೌರವ ಕಾರ್ಯದರ್ಶಿಯಾಗಿ ರಂಜಿತ್ ಕವಲಪಾರ ಆಯ್ಕೆ*

ಏಪ್ರಿಲ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.25 NEWS DESK : ಕರ್ನಾಟಕ ಸರಕಾರದ ಪುಸ್ತಕ ಅಭಿವೃದ್ಧಿ ಪ್ರಾಧಿಕಾರದಿಂದ ರಚಿಸಲ್ಪಟ್ಟಿರುವ ಕೊಡಗು ಜಿಲ್ಲಾ ಜಾಗೃತಿ ಸಮಿತಿಯ…

*ಎಸ್‍ಎಸ್‍ಎಲ್‍ಸಿಯಲ್ಲಿ ವಿ.ಯು.ಮಿಸ್ಬಾಹ್ ಸಾಧನೆ*

ಏಪ್ರಿಲ್ 25, 2026

*ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ನೇಮೋತ್ಸವ*

ಏಪ್ರಿಲ್ 25, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ : ಕಾನೂನು ಸಲಹೆಗಾರರಾಗಿ ರೋಷನ್ ಹೆಚ್.ಸಿ ಆಯ್ಕೆ*

ಏಪ್ರಿಲ್ 25, 2026

*ವಿಮಾನ ನಿಲ್ದಾಣ ಅಭಿವೃದ್ಧಿ ಪರಿಶೀಲನಾ ಸಭೆ : ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ಕಾರ್ಯ ತ್ವರಿತಗೊಳಿಸಲು ಸಂಸದ ಯದುವೀರ್ ಒಡೆಯರ್ ಸೂಚನೆ*

ಏಪ್ರಿಲ್ 25, 2026

*ಚೀಯಕಪೂವಂಡ ಕಪ್ ಗೆ 24 ತಂಡಗಳ ಸೆಣಸಾಟ : ಏ.26 ರಂದು ಸಮಾರೋಪ*

ಏಪ್ರಿಲ್ 25, 2026

*ಕಾಡುಪ್ರಾಣಿಗಳ ಹಾವಳಿ ಶಾಶ್ವತ ನಿಯಂತ್ರಣಕ್ಕೆ ಕಾವೇರಿ ಸೇವಾ ಸಂಘ ಆಗ್ರಹ*

ಏಪ್ರಿಲ್ 25, 2026

*ಏ.28 ರಂದು ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ”*

ಏಪ್ರಿಲ್ 25, 2026

*ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*

ಏಪ್ರಿಲ್ 25, 2026

*ಅಖಿಲ ಭಾರತ ಅಂತರ್ ಗುಂಪು ಸೈನಿಕ ಶಾಲೆಗಳ (ಗುಂಪು-ಹೆಚ್) ಪುಟ್ಬಾಲ್ ಪಂದ್ಯಾವಳಿ : ಚಾಂಪಿಯನ್ ಪಟ್ಟ ಉಳಿಸಿಕೊಂಡ ಕೊಡಗು ಸೈನಿಕ ಶಾಲೆ*

ಏಪ್ರಿಲ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.