Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗೌಡಳ್ಳಿಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ : ಸಹಬಾಳ್ವೆ ಜೀವನಕ್ಕೆ ಕ್ರೀಡೆಗಳು ಸಹಕಾರಿ : ಅರಮೇರಿ ಸ್ವಾಮೀಜಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೌಡಳ್ಳಿಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ : ಸಹಬಾಳ್ವೆ ಜೀವನಕ್ಕೆ ಕ್ರೀಡೆಗಳು ಸಹಕಾರಿ : ಅರಮೇರಿ ಸ್ವಾಮೀಜಿ

ನವೆಂಬರ್ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ, ನ.18 NEWS DESK : ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಹಾಸಭಾದ ಸೋಮವಾರಪೇಟೆ ಘಟಕ ಹಾಗೂ ಜಿಲ್ಲಾ ಯುವ ಘಟಕದ ಸಹಯೋಗದೊಂದಿಗೆ ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿ ಬಿ.ಜಿ.ಎಸ್.ಶಾಲಾ‌ ಮೈದಾನದಲ್ಲಿ  ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಸಮುದಾಯದ ಕ್ರೀಡಾಕೂಟಗಳ ಮಹತ್ವ ಕುರಿತು ಮಾತನಾಡಿದ ಅರಮೇರಿ- ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಿಸ್ತು- ಸಂಯಮ, ಉತ್ತಮ ನಾಯಕತ್ವ ಗುಣ , ಪರಸ್ಪರ ಪ್ರೀತಿ- ವಿಶ್ವಾಸ , ಉತ್ತಮ ನಾಯಕತ್ವ ಗುಣ ಬೆಳೆಸಲು ಹಾಗೂ ಸಹಬಾಳ್ವೆ ಜೀವನಕ್ಕೆ ಕ್ರೀಡೆಗಳು ತುಂಬಾ ಸಹಕಾರಿಯಾಗಿವೆ ಎಂದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ‌ ಪಿ.ಚಂದ್ರಶೇಖರ್ ಮಾತನಾಡಿ,
ಯುವ ಜನಾಂಗ ಕ್ರೀಡಾ ಸ್ಪೂರ್ತಿ ಬೆಳೆಸಿಕೊಂಡು ಉತ್ತಮ ಜೀವನ ಕಂಡುಕೊಳ್ಳಬೇಕು. ಇಂತಹ ಕ್ರೀಡಾಕೂಟಗಳು ಪರಸ್ಪರ ಕ್ರೀಡಾ ಮನೋಭಾವ ಬೆಳೆಸಲು ಸಹಕಾರಿಯಾಗಿವೆ ಎಂದರು. ಕೊಡ್ಲಿಪೇಟೆ ಕಲ್ಮಠದ ಮಹಾಂತ ಸ್ವಾಮೀಜಿ ಮಾತನಾಡಿ,ಗ್ರಾಮೀಣ ಕ್ರೀಡೆಗಳನ್ನು ಉಳಿಸಲು ಮತ್ತು ಪರಸ್ಪರ ಪ್ರೀತಿ, ವಿಶ್ವಾಸ ಸಹಕಾರ ಮನೋಭಾವ ಬೆಳೆಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದರು. ಕೊಡ್ಲಿಪೇಟೆ ಕಲ್ಲುಮಠದ ಮಹಾಂತಸ್ವಾಮೀಜಿ ಮಾತನಾಡಿ, ವೀರಶೈವ ಸಮಾಜದ ಬಾಂಧವರಿಗಾಗಿ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡೆಯನ್ನು ಆಯೋಜಿಸಿರುವುದು ಶ್ಲಾಘನೀಯವಾದದ್ದು ಎಂದರು. ಕ್ರೀಡಾಜ್ಯೋತಿ ಸ್ವೀಕರಿಸಿದ ತಪೋವನ ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ, ಯಾವುದೇ ಸಮುದಾಯ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಆ ಸಮುದಾಯದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗಬೇಕು’ ಎಂದರು. ವೀರಶೈವ- ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ವಿ.ಶಿವಪ್ಪ ಮಾತನಾಡಿ, ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದರು.
ಸಮಾಜದಲ್ಲಿ ಪ್ರತಿಯೊಬ್ಬರೂ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು. ಮ್ಯಾರಥಾನ್ ಓಟಗಾರರಾದ ತೊರೆನೂರಿನ ಟಿ.ಎಚ್.ಗಣೇಶ್ ಕ್ರೀಡಾಜ್ಯೋತಿ ಬೆಳಗಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಕಿರಿಕೊಡ್ಲಿಪೇಟೆ ಮಠದ ಸದಾಶಿವ ಸ್ವಾಮೀಜಿ, ವೀರಶೈವ- ಲಿಂಗಾಯತ ಮಹಾಸಭಾದ ರಾಜ್ಯ ಸಮಿತಿಯ ಉಪಾಧ್ಯಕ್ಷೆ ರಾಜೇಶ್ವರಿ ನಾಗರಾಜ್, ರಾಜ್ಯ ಮಾಹಿತಿ ಹಕ್ಕು ಆಯೋಗದ ಮಾಜಿ ಆಯುಕ್ತ ವಿರೂಪಾಕ್ಷಯ್ಯ, ಮಹಾಸಭಾದ ಮಾಜಿ ಅಧ್ಯಕ್ಷ ಡಿ.ಬಿ.ಧರ್ಮಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಶಾಂಭಶಿವಯ್ಯ, ಉಪಾಧ್ಯಕ್ಷೆ ಡಿ.ಜೆ.ರಶ್ಮಿ, ನಿರ್ದೇಶಕರಾದ ಎಸ್.ಆರ್.ವೀರೇಂದ್ರಕುಮಾರ್, ಎಚ್.ಎಸ್.ಯುವರಾಜ್, ಕೋಶಾಧಿಕಾರಿ ಎಚ್.ಪಿ.ಉದಯ್ ಕುಮಾರ್, ನಿರ್ದೇಶಕ ಎಂ.ಎಸ್.ಗಣೇಶ್, ಮಹಾಸಭಾದ ತಾಲ್ಲೂಕು ಅಧ್ಯಕ್ಷ ಕೆ.ಪಿ.ಆದರ್ಶ್, ಕಾರ್ಯದರ್ಶಿ ಎಂ.ಎನ್.ಚಂದ್ರಶೇಖರ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋಕ್ಷಿತ್ ರಾಜ್, ಪದಾಧಿಕಾರಿಗಳಾದ ಶಿವಾನಂದ್, ಭರತ್, ಸ್ಥಳೀಯರಾದ ಬಾಲಶಂಕರ್, ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು. ಎನ್.ಎಂ.ಚಂದ್ರಶೇಖರ್ ನಿರ್ವಹಿಸಿದರು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ವೀರಶೈವ ಬಾಂಧವರು ಕ್ರಿಕೆಟ್ ಟೂರ್ನಿ, ಓಟದ ಸ್ಪರ್ಧೆಗಳು, ಥ್ರೋಬಾಲ್, ಹಗ್ಗ ಜಗ್ಗಾಟ , ಗೋಣಿ ಚೀಲದ ಓಟ, ರಂಗೋಲಿ ಬಿಡಿಸುವುದು ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.