Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕನ್ನಡ ಭಾಷೆಯ ಶ್ರೇಷ್ಠತೆಯನ್ನು ಪ್ರತಿಯೊಬ್ಬ ಕನ್ನಡಿಗ ಅರಿತು ಬಾಳಬೇಕು : ಡಾ. ಹೇಮಂತ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕನ್ನಡ ಭಾಷೆಯ ಶ್ರೇಷ್ಠತೆಯನ್ನು ಪ್ರತಿಯೊಬ್ಬ ಕನ್ನಡಿಗ ಅರಿತು ಬಾಳಬೇಕು : ಡಾ. ಹೇಮಂತ್ ಕುಮಾರ್*

ನವೆಂಬರ್ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.18 NEWS DESK : ಪರಭಾಷೆಗಳ ವ್ಯಾಮೋಹದಿಂದ ಕನ್ನಡ ಭಾಷೆಯು ಶೋಚನೀಯವಾದ ಸ್ಥಿತಿಯನ್ನು ತಲುಪುತಿದೆ. ಕನ್ನಡಿಗರಿಗೆ ಭಾಷೆಯ ಶ್ರೇಷ್ಠತೆ, ಅನನ್ಯತೆ ಅರಿವಿಲ್ಲದಿರುವುದರಿಂದ ಈ ಪರಿಸ್ಥಿತಿ ಎದುರಾಗಿದೆ ಎಂದು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಹೇಮಂತ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ನಾಡು ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು. ಅದನ್ನು ಏಕೀಕರಣಗೊಳಿಸಿದ ನೆನಪಾಗಿ ಹಾಗೂ ಮೈಸೂರು ರಾಜ್ಯವೆಂದಿದ್ದ ಹೆಸರನ್ನು ಕರ್ನಾಟಕವೆಂದು ಮರು ನಾಮಕರಣ ಮಾಡಿದ ಸುದಿನವನ್ನು ಕನ್ನಡ ರಾಜ್ಯೋತ್ಸವವೆಂದು ಆಚರಿಸುತ್ತೇವೆ. ಕನ್ನಡ ಭಾಷೆ ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಭಾಷೆ. ಈ ನಾಡಿನ ರಾಜರ ಪರಾಕ್ರಮ ಉತ್ತರ ಭಾರತದವರಿಗೂ ಹರಡಿತ್ತು ಇಮ್ಮಡಿ ಪುಲಕೇಶಿ, ಮುಮ್ಮಡಿ ಗೋವಿಂದರಂತಹ ರಾಜರ ಇತಿಹಾಸಗಳು ಇದಕ್ಕೆ ಸಾಕ್ಷಿಯಾಗಿ ನಿಂತಿವೆ. ಎಲ್ಲಾ ಕ್ಷೇತ್ರಗಳಲ್ಲೂ ಶ್ರೇಷ್ಠತೆಯನ್ನು ಹೊಂದಿರುವ ಕನ್ನಡ ಭಾಷೆಯ ಅನನ್ಯತೆ, ಹಿರಿಮೆ, ಸುಲಲಿತತೆ ತಿಳಿಯದೆ ಇರುವುದರಿಂದ ಹೆಚ್ಚಿನವರು ಭಾಷೆಯನ್ನು ಕೀಳಾಗಿ ಕಾಣುತ್ತಿದ್ದಾರೆ. ಆದರೆ ಭಾಷೆಯು ಎಲ್ಲಾ ರೀತಿಯಲ್ಲೂ ಮಹತ್ವಪೂರ್ಣವಾಗಿದ್ದು, ವೈಜ್ಞಾನಿಕವಾಗಿ ರಚನೆಯಾದಂತಹ ವರ್ಣಮಾಲೆ, 8 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವುದು, ಲಿಪಿಗಳಲ್ಲೇ ಅತ್ಯಂತ ಸುಂದರ ಲಿಪಿಯಾದ ಕಾರಣ ವಿಶ್ವ ಲಿಪಿಗಳ ರಾಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದನ್ನು ಗಮನಿಸಬಹುದು. ಅಷ್ಟೇ ಅಲ್ಲದೆ ಬರೆದಂತೆ ಓದುವ , ಓದಿದಂತೆ ಉಚ್ಚರಿಸುವ, ಉಚ್ಚರಿಸಿದಂತೆ ಬರೆಯುವ ಕೆಲವೇ ಕೆಲವು ಭಾಷೆಗಳಲ್ಲಿ ಕನ್ನಡ ಒಂದು. ಆದ್ದರಿಂದ ವ್ಯವಹಾರಿಕವಾಗಿ ವಿವಿಧ ಭಾಷೆಗಳು ಅವಶ್ಯಕತೆ ಇದ್ದರೂ ಕನ್ನಡ ಭಾಷೆಯನ್ನು ಎಂದಿಗೂ ಮರೆಯಬಾರದು. ಹೊರಗಿನಿಂದ ಬಂದು ಇಲ್ಲಿ ನೆಲೆಸಿದವರಿಗೂ ನಮ್ಮ ಭಾಷೆ, ನಮ್ಮ ಸಂಸ್ಕೃತಿಯನ್ನು ಕಲಿಸಿ ನಮ್ಮ ಮೂಲವನ್ನು ಉಳಿಸುವ ಪ್ರಯತ್ನ ಪ್ರತಿಯೊಬ್ಬರಿಂದ ಆದಾಗ ಕನ್ನಡ ಭಾಷೆಯು ಉಳಿಯುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್.ಸಲ್ದಾನ ಪ್ರಸ್ತುತ ಸಮಾಜದಲ್ಲಿ ವ್ಯವಹಾರಿಕ ದೃಷ್ಟಿಯಿಂದ ವಿವಿಧ ಭಾಷೆಗಳನ್ನು ಕಲಿಯುವುದು ಹಾಗೂ ಬಳಸುವುದು ಅವಶ್ಯ. ಈ ನಿಟ್ಟಿನಲ್ಲಿ ನಮ್ಮ ನಾಡಿನ ಮಾತೃ ಭಾಷೆ ಕನ್ನಡವನ್ನು ಎಂದಿಗೂ ನಿರ್ಲಕ್ಷಿಸಬಾರದು. ಭಾಷೆಯ ಹಿರಿಮೆ , ಇತಿಹಾಸ, ರಚನೆಯಾದಂತಹ ಶ್ರೇಷ್ಠ ಗ್ರಂಥಗಳು, ಸಾಹಿತ್ಯ , ಸಂಗೀತ ಇವೆಲ್ಲವನ್ನು ನಾವು ಅರಿತು‌ ಮುಂದಿನ ಪೀಳಿಗೆಗೆ ಅರ್ಥೈಸಿ ಕೊಡಬೇಕು. ಬಹಳ ಸ್ವಂತಿಕೆಯಿಂದ ಕೂಡಿದ ಭಾಷೆಯನ್ನು ಬಳಸಿ ಬೆಳೆಸುವ ಪಣವನ್ನು ನಾವೆಲ್ಲರೂ ತೊಡಬೇಕು. ಮನೆಯಲ್ಲಿ ಬೇರೆ, ಬೇರೆ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದರು ನಮ್ಮನ್ನು ಸಾಮಾಜಿಕವಾಗಿ ಒಗ್ಗೂಡಿಸು ಭಾಷೆ ಕನ್ನಡ ಎಂಬುದನ್ನು ಅರಿತು ಭಾಷೆಯ ಬಳಕೆ ಕಡೆ ಗಮನ ಹರಿಸೋಣ ಎಂದರು. ಕಾರ್ಯಕ್ರಮದಲ್ಲಿ  ಐಕ್ಯೂಎಸಿ ಸಂಯೋಜಕಿ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನ ಸಮಿತಿಯ ಮುಖ್ಯಸ್ಥೆ ಪ್ರಿಯ ಮುದ್ದಪ್ಪ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಾಗರಾಜು, ಕನ್ನಡ ವಿಭಾಗದ ಮುಖ್ಯಸ್ಥರಾದ ಬಿ.ಬಿ. ಸುನಿಲ್ ಕುಮಾರ್, ಕಾಲೇಜಿನ ಉಪನ್ಯಾಸಕರು , ಆಡಳಿತಾತ್ಮಕ ಸಿಬ್ಬಂದಿಗಳು , ವಿದ್ಯಾರ್ಥಿಗಳು ಹಾಜರಿದ್ದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.