Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆ ತಾ.ಪಂ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ : ಅಧಿಕಾರಿಗಳು ಕರ್ತವ್ಯದ ಅವಧಿಯಲ್ಲಿ ಕಚೇರಿಯಲ್ಲಿರುವುದು ಕಡ್ಡಾಯ : ಶಾಸಕ ಡಾ.ಮಂತರ್ ಗೌಡ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ತಾ.ಪಂ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ : ಅಧಿಕಾರಿಗಳು ಕರ್ತವ್ಯದ ಅವಧಿಯಲ್ಲಿ ಕಚೇರಿಯಲ್ಲಿರುವುದು ಕಡ್ಡಾಯ : ಶಾಸಕ ಡಾ.ಮಂತರ್ ಗೌಡ ಸೂಚನೆ

ನವೆಂಬರ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ನ.19 NEWS DESK : ಸಾರ್ವಜನಿಕರಿಗೆ ಅತಿ ಅವಶ್ಯವಿರುವ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂತೆ ದಿನವಾದ ಸೋಮವಾರದಂದು ಕಡ್ಡಾಯವಾಗಿ ಕಛೇರಿಯಲ್ಲಿ ಹಾಜರಿರಬೇಕು. ಸಾರ್ವಜನಿಕರಿಂದ ಅನೇಕ ದೂರುಗಳು ಬರುತ್ತಿದ್ದು. ಸಮಯ ಪಾಲನೆ ಮಾಡದ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲಾಗುವುದೆಂದು ಶಾಸಕರು ಹೇಳಿದರು. ತಾಲ್ಲೂಕು ಪಂಚಾಯಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಶಾಸಕ ಡಾ.ಮಂತರ್‌ಗೌಡ ಅಧ್ಯಕ್ಷತೆಯಲ್ಲಿ ಮಂಗಳವಾರದಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.  ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುತ್ತಿಲ್ಲ.ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ ಎಂದು ಕೆಡಿಪಿ ನಾಮನಿರ್ದೆಶಿತ ಸದಸ್ಯರಾದ ಸಬಿತಾ ಚನ್ನಕೇಶವ ಸಭೆಯ ಗಮನಕ್ಕೆ ತಂದರು.ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕೃಷ್ಣಮೂರ್ತಿ ಮಧ್ಯವರ್ತಿಗಳಿಂದ ಕೆಲಸ ಮಾಡಿಸಬೇಡಿ.ಏನಾದರೂ ಸಮಸ್ಯೆ ಇದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ ಎಂದರು. ಕಂದಾಯ, ತೋಟಗಾರಿಕೆ ಮತ್ತು ಕಾಫಿಮಂಡಳಿ ಅಧಿಕಾರಿಗಳು ಅವಧಿಗೆ ಮುನ್ನವೇ ಬೆಳೆ ನಷ್ಟ ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ನೀಡಿದ್ದಾರೆ.ಅಕ್ಟೋಬರ್ ತಿಂಗಳ ಅಂತ್ಯದವರೆಗೂ ಅಕಾಲಿಕ ಮಳೆ ಸುರಿದಿದೆ.ಇದರಿಂದ ರೈತರಿಗೆ ಅನ್ಯಾಯವಾಗಿದೆ. ಅಧಿಕಾರಿಗಳು ತಾಲೂಕಿನಲ್ಲಿ ಎಷ್ಟು ಹೋಬಳಿ ಇದೆ.ಎಷ್ಟು ಮಳೆಯಾಗಿದೆ.ಬೆಳೆ ನಷ್ಟದ ಪ್ರಮಾಣ ಎಷ್ಟಿದೆ ಎಂಬುದನ್ನು ಮೊದಲು ತಿಳಿದುಕೊಳ್ಳಿ ಶಾಸಕ ಡಾ.ಮಂತರ್‌ಗೌಡ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು ಎಂದರು.  ತಾಲೂಕಿನಲ್ಲಿ ಸರಕಾರ ನೀಡುತ್ತಿರುವ ಅಕ್ಕಿ ದುರುಪಯೋಗ ಆಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು,ಸೊಸೈಟಿಗಳು,ನ್ಯಾಯಬೆಲೆ ಅಂಗಡಿಗಳು ಹಾಗೂ ಫಲಾನುಭವಿಗಳಿಂದ ಅಕ್ಕಿ ಪಡೆದುಕೊಂಡು ಮಾರಾಟ ಮಾಡುತ್ತಿರುವವರ ಬಗ್ಗೆ ತನಿಖೆ ಆಗಬೇಕಿದೆ.ಹಲವು ಶ್ರೀಮಂತರು,ಸರಕಾರಿ ಇಲಾಖೆಯ ನೌಕರರ ಮನೆಯಲ್ಲೂ ಬಿಪಿಎಲ್ ಕಾರ್ಡ್ ಇದೆ.ಇದರ ಪರಿಶೀಲನೆ ಮಾಡಿ ವರದಿ ನೀಡಬೇಕೆಂದು ಶಾಸಕರು ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು. ಸರ್ವೆ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರ ಆರ್ಭಟಜಾಸ್ತಿಯಾಗಿದೆ.ಗ್ರಾಮ ನಕಾಶೆಗಳನ್ನು ಸರಿಯಾಗಿ ಗುರುತಿಸುತ್ತಿಲ್ಲ. ಎಡಿಎಲ್‌ಆರ್ ರವರ ಮಾತುಗಳನ್ನು ಸಿಬ್ಬಂದಿಗಳು ಕೇಳುತ್ತಿಲ್ಲ. ಆಹಾರ ಇಲಾಖೆಯಲ್ಲಿ ಸಿಬ್ಬಂದಿಗಳೇ ಇಲ್ಲ. ಜನನ ಮರಣ ನೋಂದಣಿ ವಿಭಾಗದ ಕಛೇರಿಯಲ್ಲೂ ಯಾರೂ ಇರುವುದಿಲ್ಲ ಎಂದು ಸೂಡಾ ಅಧ್ಯಕ್ಷಕೆ.ಎ.ಆದಂ ಸಭೆಯ ಗಮನಕ್ಕೆ ತಂದರು. ಫಾರ್ಮ್ ನಂಬರ್ ೯ ಮತ್ತು 11ರ ಪರಿವರ್ತನೆಗೆ ಸಂಬಂದಿಸಿದಂತೆ ಅಧಿಕಾರಿಗಳು ಲಂಚದಆಮಿಷ ಒಡ್ಡುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಬರುತ್ತಿದ್ದು.ಆರೋಪ ಸಾಬೀತಾದರೆ ಸಂಬಂದಿಸಿದವರ ಅಮಾನತ್ತಿಗೆ ಶಿಫಾರಸು ಮಾಡಲಾಗುವುದು ಎಂದು ಶಾಸಕರು ಎಚ್ಚರಿಕೆ ನೀಡಿದರು.
ಕಟ್ಟಡ ಮತ್ತು ಇತರ ಕಾರ್ಮಿಕರ ಮಕ್ಕಳ ಶ್ರೇಯೋಭಿವೃದ್ದಿಗೆ ಸೋಮವಾರಪೇಟೆ ತಾಲೂಕಿನ ಚೆನ್ನಾಪುರ ಗ್ರಾಮದಲ್ಲಿ ವಸತಿ ಶಾಲೆ ನಿರ್ಮಾಣಕ್ಕೆ ಐದು ಏಕರೆ ಜಾಗ ಗುರುತಿಸಲಾಗಿದ್ದು,ಸುಮಾರು ೪೦ ಕೋಟಿ ಅನುದಾನ ನೀಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.ಆದರೆ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಅಸಡ್ಡೆಯಿಂದಾಗಿ ಇನ್ನೂ ಸಂಬಂದಪಟ್ಟ ಜಾಗವನ್ನು ಇಲಾಖೆ ಸುಫರ್ದಿಗೆ ತೆಗೆದುಕೊಳ್ಳದಿರುವ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದರು. ಸೋಮವಾರಪೇಟೆ ಪಟ್ಟಣ ಹಾಗೂ ಸಮೀಪದ ಚೌಡ್ಲು ಮತ್ತು ಹಾನಗಲ್ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತ ಬಹುಮಹಡಿ ಕಟ್ಟಡಗಳು ನಿರ್ಮಾಣವಾಗುತ್ತಿದೆ.ಪ್ರಾಧಿಕಾರದಿಂದ ಯಾವುದೇ ಅನುಮತಿಯನ್ನು ಪಡೆದಿಲ್ಲ.ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಯಾವ ಆಧಾರದಲ್ಲಿ ನಿರಾಕ್ಷೇಪಣಾ ಪತ್ರ ನೀಡಿದ್ದಾರೆ ಎಂದು ಸೂಡಾ ಅಧ್ಯಕ್ಷ ಕೆ.ಎ.ಆದಂ ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಹಲವು ಬಾರ್‌ಗಳಲ್ಲಿ ಅಪ್ರಾಪ್ತ ಬಾಲಕರು ಮದ್ಯದ ಬಾಟಲಿ ಖರೀದಿಸುತ್ತಿರುವ ಬಗ್ಗೆ ಸಾರ್ವಜನಿಕರು ಹಾಗೂ ಪೋಷಕರಿಂದ ದೂರು ಬಂದಿದೆ.ಬಾರ್ ಮಾಲೀಕರು ಆಧಾರ್ ಕಾರ್ಡ್ಗಳನ್ನು ಪರಿಶೀಲಿಸುವ ಅಗತ್ಯವಿದೆ.ಗ್ರಾಮಾಂತರ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟದ ಪ್ರಕರಣಗಳೂ ಹೆಚ್ಚುತ್ತಿದ್ದು,ಅಬ್ಕಾರಿ ಇಲಾಖೆಯವರು ಕಾನೂನು ಕ್ರಮ ಕೈಗೊಳ್ಳಬೇಕೆಮದು ಶಾಸಕರು ಸೂಚನೆ ನೀಡಿದರು. ಸಭೆಯಲ್ಲಿ ಆಡಳಿತಾಧಿಕಾರಿ ಅಬ್ದುಲ್ ನಭಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.