Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ : ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ಸಾಧನೆಗೆ ಒಳ್ಳೆಯ ಪುಸ್ತಕ ಅಧ್ಯಯನ ಅಗತ್ಯ : ಜಿ.ಪಂ.ಸಿಇಒ ಆನಂದ ಪ್ರಕಾಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ : ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ಸಾಧನೆಗೆ ಒಳ್ಳೆಯ ಪುಸ್ತಕ ಅಧ್ಯಯನ ಅಗತ್ಯ : ಜಿ.ಪಂ.ಸಿಇಒ ಆನಂದ ಪ್ರಕಾಶ್*

ನವೆಂಬರ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.20 NEWS DESK : ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ಸಾಧನೆ ಮಾಡಬೇಕಾದರೆ ಒಳ್ಳೆಯ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳುವಂತಾಗಬೇಕು ಎಂದು ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ಹೇಳಿದ್ದಾರೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ವತಿಯಿಂದ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2025 ದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಹಿತಿ ಕೆ.ಪಿ.ಬಾಲಸುಬ್ರಹ್ಮಣ್ಯ ಕಂಜರ್ಪಣೆ ಅವರು ಮಾತನಾಡಿ ಪ್ರತೀ ವರ್ಷವೂ ನವೆಂಬರ್ 14 ರಿಂದ ಒಂದು ವಾರ ಕಾಲ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ನಡೆಸಲಾಗುತ್ತದೆ. ನೆಹರೂ ಅವರ ಜನ್ಮದಿನಾಂಕದಿಂದ ಇದು ಒಂದು ವಾರ ನಡೆಯುತ್ತದೆ ಎಂದರು. ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹರೆಂದೇ ಹೆಸರಾದ ದಿವಂಗತ ಡಾ.ಎಸ್.ಆರ್.ರಂಗನಾಥನ್ (1892-1972) ಅವರ ನೆನಪಿನಲ್ಲಿ ಈ ಸಪ್ತಾಹ ನಡೆಸಲಾಗುತ್ತದೆ. ಗ್ರಂಥಾಲಯ ವಿದ್ವಾಂಸರಾದದ್ದು ಆನಂತರ, ಮೂಲತಃ ಅವರು ಖ್ಯಾತ ಗಣಿತಶಾಸ್ತ್ರಜ್ಞರೂ ಶಿಕ್ಷಣ ತಜ್ಞರೂ ಆಗಿದ್ದರು. ಕರ್ನಾಟಕದ ಮಂಗಳೂರಿನ ಸರಕಾರಿ ಕಾಲೇಜಿನಲ್ಲೂ ಅವರು ಗಣಿತ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರೆಂಬುದು ಕನ್ನಡದ ಹೆಮ್ಮೆ. ಅವರು ಗ್ರಂಥಾಲಯಗಳ ವಿಕಾಸಕ್ಕೆ ತಮ್ಮ ಅರಿವಿನ ಮೂಲಕ ಹೊಸ ನಿಯಮಗಳನ್ನು ರೂಪಿಸಿ ಒಂದು ಚೌಕಟ್ಟನ್ನು ಹಾಕಿ ಕೊಟ್ಟವರು ಎಂದು ನುಡಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ಮಾತನಾಡಿ ಪುಸ್ತಕಗಳನ್ನು ಓದುವುದರಿಂದ ಅಭಿವೃದ್ಧಿಗೆ ಸಹಕಾರಿ ಆಗಿದೆ ಎಂದು ಹೇಳಿದರು. ಪುಸ್ತಕಗಳು ವಿದ್ಯಾರ್ಥಿಗಳ ಜ್ಞಾನ ದೇಗುಲ ಬಾಗಿಲು ತರಿಸುವಂತೆ ಆಗಿದೆ. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕವನ್ನು ಓದಲು ಅನುಮೋದನೆ ನೀಡಬೇಕು. ಸಾಧನೆಗಳಿಗೆ ಸೂಕ್ತವಾಗಿರುವುದು ಗ್ರಂಥಾಲಯವಾಗಿದೆ ಎಂದು ಹೇಳಿದರು. ಸಹಾಯಕ ಪ್ರಾಧ್ಯಾಪಕರು ಹಾಗೂ ಲೇಖಕರಾದ ಡಾ.ದೀಕ್ಷಿತಾ ವರ್ಕಾಡಿ ಅವರು ಮಾತನಾಡಿ ಬದುಕನ್ನು ಬದಲಾಯಿಸಿಕೊಳ್ಳಲು ಒಳ್ಳೆಯ ಪುಸ್ತಕ ಓದಬೇಕು. ಪುಸ್ತಕ ಓದುವುದರಿಂದ ದಾರಿದೀಪವನ್ನಾಗಿ ರೂಪಿಸಿಕೊಳ್ಳಲು ಸಾಧ್ಯ ಹಾಗೂ ಹೆಚ್ಚು ಪುಸ್ತಕಗಳನ್ನು ಓದುವ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ ಎಂದರು. ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹರೆಂದೇ ಹೆಸರಾದ ದಿವಂಗತ ಡಾ.ಎಸ್ ಆರ್.ರಂಗನಾಥನ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ಜಿಲ್ಲಾ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ಸುರೇಖಾ ಸ್ವಾಗತಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸಂಚಾರಿ ಗ್ರಂಥಾಲಯ ಮೇಲ್ವಿಚಾರಕರಾದ ನಾಗವೇಣಿ ಪ್ರಾರ್ಥಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.