Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ  ಕನ್ನಡ ರಾಜ್ಯೋತ್ಸವ : ಕನ್ನಡ ಅಭಿಮಾನ ಬೆಳೆಸಿಕೊಳ್ಳಲು ಗಣ್ಯರ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ  ಕನ್ನಡ ರಾಜ್ಯೋತ್ಸವ : ಕನ್ನಡ ಅಭಿಮಾನ ಬೆಳೆಸಿಕೊಳ್ಳಲು ಗಣ್ಯರ ಕರೆ

ನವೆಂಬರ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ನ.22 NEWS DESK : ನಾವು ಕನ್ನಡ ಭಾಷೆಯನ್ನು ಪ್ರತಿನಿತ್ಯ ಬಳಸಿದರೆ ಭಾಷೆಯು ತನ್ನಿಂದ ತಾನೇ ಬೆಳೆಯುತ್ತದೆ. ನಮ್ಮ ಕನ್ನಡ ಭಾಷೆ ಅನ್ನದ ಭಾಷೆಯಾಗಬೇಕು. ನೌಕರರ ನೇಮಕಾತಿಗಳಲ್ಲಿ ಕನ್ನಡ ಭಾಷಿಕರಿಗೆ ಮೊದಲ ಆದ್ಯತೆ ಸಿಗಬೇಕು ಎಂದು‌ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಬೆಂಗಳೂರಿನ ಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ ಹೇಳಿದರು. ಕುಶಾಲನಗರ ಪಟ್ಟಣದ ಎ.ಪಿ.ಸಿ.ಎಂ.ಎಸ್. ಕನ್ವೆನ್ನನ್ ಸಭಾಂಗಣದಲ್ಲಿ ಜರುಗಿದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಬೆಂಗಳೂರು, ವೇದಿಕೆಯ ಕೊಡಗು ಜಿಲ್ಲಾ ಘಟಕ, ಸಂಗಮ ಟಿ.ವಿ. ಹಾಗೂ ವಂಶಿ ನ್ಯೂಸ್ ಸಹಯೋಗದೊಂದಿಗೆ ಕನ್ನಡ ಸುವರ್ಣ ಸಂಭ್ರಮ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ ಹಾಗೂ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಪ್ರತ್ಯೇಕ ಮೀಸಲಾತಿ ಸಿಗಬೇಕು ಎಂದರು. ಕನ್ನಡ ಸಾಹಿತ್ಯ ಪರಂಪರೆ ಬಹಳ ಅಭೂತಪೂರ್ವವಾದದ್ದು, ವೈಶಿಷ್ಟ ಭಾಷೆಯಾದ ಕನ್ನಡ ಭಾಷೆಯಲ್ಲಿರುವ ಪ್ರಭೇದ, ಪ್ರಕಾರಗಳು, ಷಟ್ಪದಿ, ರಗಳೆಗಳಂತ ಸಾಹಿತ್ಯ ಬೇರೆ ಯಾವ ಭಾಷೆಗಳಲ್ಲೂ ಕಾಣಸಿಗುವುದಿಲ್ಲ. ಜನಪದ ಸಾಹಿತ್ಯ ಮತ್ತು ವಚನ ಸಾಹಿತ್ಯಗಳು ಕನ್ನಡ ಸಾಹಿತ್ಯಕ್ಕೆ ಮಹತ್ವದ ವೇದಿಕೆಯ ಅಡಿಪಾಯ ಹಾಕಿದವು. ಜನಪದರು ಶರಣರು ಅನುಭಾವದ ನೆಲೆಯಲ್ಲಿ ಸಾಹಿತ್ಯವನ್ನು ಕಟ್ಟಿ ಬೆಳೆಸಿದರು ಎಂದರು. ಕೊಡಗಿನಲ್ಲಿ ಕೊಡಗಿನ ರಾಣಿಯಾದ ಗೌರಮ್ಮ ಮೊದಲನೇ ತಲೆಮಾರಿನ ಕಥೆಗಾರ್ತಿಯಾಗಿದ್ದರು, ಕರ್ನಾಟಕದಲ್ಲಿ ಕನ್ನಡ ಭಾಷೆಯ ಜೊತೆಗೆ ಅನೇಕ ಉಪಭಾಷೆಗಳಿವೆ ಆದ್ದರಿಂದ ಇದು ಕನ್ನಡ ರಾಜ್ಯೋತ್ಸವ ಮಾತ್ರವಲ್ಲ ಕರ್ನಾಟಕದ ರಾಜ್ಯೋತ್ಸವ ಎಂದು ಉಪ್ಪಾರ ಬಣ್ಣಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಕೊಡ್ಲಿಪೇಟೆಯ ಕ್ಷೇತ್ರ ಕಿರಿಕೊಡ್ಲಿ ಮಠದ ಸದಾಶಿವಸ್ವಾಮೀಜಿ ಮಾತನಾಡಿ, ಕನ್ನಡ ಭಾಷೆಯು ನೆಲ- ಜಲದ ಉಳಿವಿಗಾಗಿ ಈ ನಾಡಿನ ಅನೇಕ ಕನ್ನಡ ಪರ ಸಂಘಟನೆಗಳು ನಿರಂತರ ಹೋರಾಟದಲ್ಲಿ ತೊಡಗಿಸಿಕೊಂಡಿವೆ, ಆ ನಿಟ್ಟಿನಲ್ಲಿ ಎಲೆ ಮರೆಯಕಾಯಿಯಂತೆ ಕಾರ್ಯ ನಿರ್ವಹಿಸುತ್ತಿರುವ ಅನೇಕ ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನಿಸುತ್ತಿರುವುದು ಪ್ರಶಂಸನೀಯವಾದುದು ಎಂದರು. ಸಾಹಿತಿ ಉ.ರಾ. ನಾಗೇಶ್‌ ಮಾತನಾಡಿ, ರಂಗಭೂಮಿ ಬಯಲಾಟ ಹರಿಕಥೆ, ಕನ್ನಡದಲ್ಲಿ ವಚನ ಸಾಹಿತ್ಯ, ದಾಸ ಸಾಹಿತ್ಯ , ಮುಂತಾದವುಗಳು ಭಾಷೆಯನ್ನು ಕಟ್ಟಿ ಸಮೃದ್ಧವಾಗಿ ಬೆಳೆಸುವಲ್ಲಿ ಆಮೂಲಾಗ್ರ ಕೊಡುಗೆಯನ್ನು ನೀಡಿವೆ , ಎಲ್ಲಿ ಭಾಷೆ ನಾಶವಾಗುತ್ತಾ ಹೋಗುವುದೋ ಅಲ್ಲಿ ಸಂಸ್ಕೃತಿ ವಿನಾಶದತ್ತ ಸಾಗುತ್ತದೆ, ಈ ನಿಟ್ಟಿನಲ್ಲಿ ಅನ್ಯ ಭಾಷೆಗಳನ್ನು ಪ್ರೀತಿಸುವುದರೊಂದಿಗೆ ಮಾತೃ ಭಾಷೆ ಕನ್ನಡವನ್ನು ಬಳಸಿ ಉಳಿಸಿ ಬೆಳಸಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ರಘು ಕೋಟಿ ಮಾತನಾಡಿ, ಕನ್ನಡ ಭಾಷೆ ಸಂಸ್ಕೃತಿ ಉಳಿವಿಗಾಗಿ ತೆರೆಮರೆಯಲ್ಲಿ ಶ್ರಮಿಸುವ ಕನ್ನಡದ ಕಟ್ಟಾಳುಗಳನ್ನು ಗುರುತಿಸಿ ಸನ್ಮಾನಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ, ಪ್ರಶಸ್ತಿ ಪುರಸ್ಕಾರಗಳು ಲಾಭಿಗಳಾಗಬಾರದು, ಅದು ನಿಜವಾದ ಅರ್ಹರಿಗೆ ಲಭಿಸುವಂತಾಗಬೇಕು ಆದ್ದರಿಂದ ಇಂತಹ ಕಾರ್ಯಕ್ರಮಗಳನ್ನು, ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮಹಿಳಾ ಆಟೋ ಚಾಲಕಿಯರು ಹಾಗೂ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ನಡುವೆ ಕಾವ್ಯ ವಾಚನ, ಶಾಲಾ ಮಕ್ಕಳ ನೃತ ಪ್ರದರ್ಶನ, ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಣೆ ಮುಂತಾದ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭ ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ ಗೌರಯ್ಯ,
ಕನ್ನಡದ ಕಿರುತೆರೆ ಕಲಾವಿದೆ ಎಚ್.ಎಂ. ಮೀನಾಕ್ಷಿ, ಮುಂಬೈನ ಉದ್ಯಮಿ. ಸದಾಶಿವ ಬಿ.ಎನ್. ಶೆಟ್ಟಿ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಜಿಲ್ಲಾ ಘಟಕದ ಉಪಾಧ್ಯಕ್ಷೆ ರಾಣಿ ರವೀಂದ್ರ, ಚಿರನಹಳ್ಳಿ ಮಂಜುನಾಥ್, ಹೆಚ್. ಜೆ.ಜವರ, ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣದ ಬಿ.ಎ. ದಿನೇಶ್ ಶೆಟ್ಟಿ , ವಿವಿಧ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು, ವಿವಿಧ ಶಾಲೆಯ ಶಿಕ್ಷಕರು ಮಕ್ಕಳು ಸಾರ್ವಜನಿಕರು ಉಪಸ್ಥಿತರಿದ್ದರು.

 

 

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.