Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ  ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಮೈಸೂರು ವಿಭಾಗ ಮಟ್ಟದ ‘ಗಾನ ಸುಧೆ’ : ಗೀತೆ ಗಾಯನದ ಮೂಲಕ ದೇಶಭಕ್ತಿ ಮೆರೆದ 8 ಜಿಲ್ಲೆಗಳ ವಿದ್ಯಾರ್ಥಿಗಳು
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ  ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಮೈಸೂರು ವಿಭಾಗ ಮಟ್ಟದ ‘ಗಾನ ಸುಧೆ’ : ಗೀತೆ ಗಾಯನದ ಮೂಲಕ ದೇಶಭಕ್ತಿ ಮೆರೆದ 8 ಜಿಲ್ಲೆಗಳ ವಿದ್ಯಾರ್ಥಿಗಳು

ನವೆಂಬರ್ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ನ.23 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಕೊಡಗು ಜಿಲ್ಲಾ ಸಂಸ್ಥೆ,, ಮಡಿಕೇರಿ, ವತಿಯಿಂದ ಕಬ್ಸ್-ಬುಲ್ ಬುಲ್ಸ್-ಸ್ಕೌಟ್ಸ್-ಗೈಡ್ಸ್-ರೋವರ್ಸ್-ರೇಂಜರ್ಸ್ ಮಕ್ಕಳಿಗೆ ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತೆಗಾಯನ ಸ್ಪರ್ಧೆ-2025 ‘ಗಾನ ಸುಧೆ’ ಮಡಿಕೇರಿಯಲ್ಲಿ ನಡೆಯಿತು. ಒಟ್ಟು 8 ಜಿಲ್ಲೆಗಳ 320 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೀತೆ ಗಾಯನದ ಮೂಲಕ ದೇಶಭಕ್ತಿ ಮೆರೆದರು. ಮಡಿಕೇರಿ ನಗರದ ಜೂನಿಯರ್ ಕಾಲೇಜು ಆವರಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ(ಪಿಎಂಶ್ರೀ) ಸಭಾಂಗಣದಲ್ಲಿ ನಡೆದ ‘ಗಾನ ಸುಧೆ’ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿವೈಎಸ್‌ಪಿ ಪೆಮ್ಮಂಡ ಎ.ಸೂರಜ್ ಅವರು ಈ ರೀತಿಯ ಸ್ಪರ್ಧಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಐಕ್ಯತೆಯನ್ನು ಮೂಡಿಸುತ್ತದೆ ಮತ್ತು ಪೂರ್ವಜರ ದೇಶಭಕ್ತಿಯನ್ನು ನೆನಪಿಸುತ್ತದೆ ಎಂದರು. ಐಕ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಸಮವಸ್ತçಧಾರಿ ವಿಭಾಗವಾದ ಪೊಲೀಸ್ ಮತ್ತು ಸೇನೆ ಕೂಡ ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಮಹತ್ವಪೂರ್ಣವಾದ ಈ ರೀತಿಯ ಕಾರ್ಯಮಗಳು ವಿದ್ಯಾರ್ಥಿಗಳಿಂದ ಸದ್ಬಳಕೆಯಾಗಬೇಕು ಎಂದು ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಉತ್ತಮ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದು ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳ ಸವಿನೆನಪಿಗೆ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಹೊರ ಜಿಲ್ಲೆಗೆ ಭೇಟಿ ನೀಡಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಅಲ್ಲಿನ ಆಕರ್ಷಕ ಪ್ರದೇಶಗಳನ್ನು ವೀಕ್ಷಿಸಬೇಕು ಎಂದು ಕಿವಿಮಾತು ಹೇಳಿದರು. ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಕೂಡ ಕಾರ್ಯಕ್ರಮಗಳಿಗೆ ಸಹಕಾರ ನೀಡಲಿದೆ. ಜಿಲ್ಲಾ ಪೊಲೀಸರ ಸಾಂಸ್ಕೃತಿಕ ವೇದಿಕೆಯು ಕಾರ್ಯನಿರ್ವಹಿಸುತ್ತಿದ್ದು, ಉತ್ತಮ ಹಾಡುಗಾರರಿದ್ದಾರೆ. ಇಲಾಖೆಯ ಕಲಾವಿದರು ಕಾರ್ಯಕ್ರಮ ನೀಡಲು ಸಿದ್ಧರಿದ್ದಾರೆ ಎಂದು ಪೆಮ್ಮಂಡ ಎ.ಸೂರಜ್ ತಿಳಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್ ಅವರು ಕೊಡಗಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಾಯಕತ್ವದ ಗುಣವನ್ನು ಬೆಳೆಸುತ್ತಿದೆ ಎಂದು ಶ್ಲಾಘಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ಇಂದಿನ ಮಕ್ಕಳೇ ದೇಶದ ಮುಂದಿನ ಭವಿಷ್ಯವಾಗಿದ್ದಾರೆ, ಎಂಟು ಜಿಲ್ಲೆಗಳ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ದೇಶಭಕ್ತಿಯ ‘ಗಾನ ಸುಧೆ’ಯಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ ಎಂದರು. ಈ ರೀತಿಯ ಕಾರ್ಯಕ್ರಮಗಳಿಂದ ಸಂಸ್ಕೃತಿಯ ವಿನಿಮಯವಾಗುತ್ತದೆ, ಪರಸ್ಪರ ವಿದ್ಯಾರ್ಥಿಗಳ ಪರಿಚಯವಾಗುತ್ತದೆ. ಭವಿಷ್ಯದ ಗೆಲುವಿಗಾಗಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಸೋಲೇ ಗೆಲುವಿನ ಮೆಟ್ಟಿಲಾಗಿದೆ, ಸೋಲು, ಗೆಲುವಿಗಿಂತ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದು ಕರೆ ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಪಾಜೆ ಅಧ್ಯಕ್ಷ ಧನಂಜಯ ಎಂ. ಅವರು ಮಾತನಾಡಿ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳ ಉತ್ಸಾಹದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಸ್ಕೌಟ್ ನ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ ಅವರು ‘ಗಾನ ಸುಧೆ’ ಸ್ಪರ್ಧೆಯ ಕುರಿತು ವಿವರಿಸಿದರು. *ತೀವ್ರ ಪೈಪೋಟಿ* ದೇಶಭಕ್ತಿಯ ಗೀತೆ ಗಾಯನ ಗುಂಪು ಸ್ಪರ್ಧೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳÀ 320 ವಿದ್ಯಾರ್ಥಿಗಳು ತೀವ್ರ ಪೈಪೋಟಿ ನೀಡಿದರು. ಸಮವಸ್ತçಧಾರಿಗಳಾಗಿದ್ದ  ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ಹಾಡಿ ಪ್ರೇಕ್ಷಕರ ಗಮನ ಸೆಳೆಯಿತು. ತೀರ್ಪುಗಾರರಾಗಿ ಕಲಾವಿದರಾದ ಶೋಭಾ ಸುಬ್ಬಯ್ಯ, ವೀಣಾ ಹೊಳ್ಳ, ಮಮತಾ ಶಾಸ್ತ್ರಿ, ಲಕ್ಷ್ಮೀ ಭಟ್, ಸುಮನಾ ರಾವ್ ಹಾಗೂ ಮೇಘನಾ ಭಟ್ ಕಾರ್ಯನಿರ್ವಹಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ರಾಜ್ಯ ಆಯುಕ್ತರಾದ(ಸ್ಕೌಟ್) ಬಿ.ಕೆ.ಬಸವರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎನ್.ಎಂ.ಜಗದೀಶ್, ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಕಾರ್ಯದರ್ಶಿ ಚಂದ್ರಶೇಖರ್ ಆರ್.ಪಿ, ಪೊನ್ನಂಪೇಟೆ ಅಧ್ಯಕ್ಷ ಕಾಳಿಮಾಡ ಎಂ.ಮೋಟಯ್ಯ, ಕಾರ್ಯದರ್ಶಿ ಕೆ.ಬಿ.ಉಷಾರಾಣಿ, ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್, ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮ ಕುಮಾರ್, ಜಿಲ್ಲಾ ಬುಲ್ ಬುಲ್ ಆಯುಕ್ತೆ ಡೈಸಿ ಫ್ರಾನ್ಸಿಸ್, ಕಾರ್ಯದರ್ಶಿ ಎಂ.ಎಂ.ವಸಂತಿ, ಕೋಶಾಧಿಕಾರಿ ಟಿ.ಎಂ.ಮುದ್ದಯ್ಯ, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಜಿಲ್ಲಾ ಸಹಾಯಕ ಆಯುಕ್ತ (ಸ್ಕೌಟ್) ಕೆ.ಬಿ.ಗಣೇಶ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎಚ್.ಕೆ.ಭವಾನಿ, ಸ್ಕೌಟ್ಸ್, ಗೈಡ್ಸ್ ನ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಶಾರದಾ ಪೂಜೆ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.13 NEWS DESK : ವಿರಾಜಪೇಟೆ ನಗರದ ಶಿವೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ವೈಭವದ ನವರಾತ್ರಿ…

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಅ.15ರಂದು ಮೂನಾಡ್‌ನಲ್ಲಿ ಸಿಎನ್‌ಸಿಯ 6ನೇ ಶಾಂತಿಯುತ ಮಾನವ ಸರಪಳಿ; ಕೊಡವ ಜನಾಂಗದ ಅಸ್ತಿತ್ವ, ಭೂಮಿ, ಭಾಷೆ ಮತ್ತು ಸಂಸ್ಕೃತಿ ರಕ್ಷಣೆಗೆ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 13, 2026

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.