Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯ ಸಮಾಜ ಸೇವಕಿ ಚಿನ್ನಮ್ಮಗೆ ‘ಕರುನಾಡ ರತ್ನ’ ರಾಜ್ಯ ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯ ಸಮಾಜ ಸೇವಕಿ ಚಿನ್ನಮ್ಮಗೆ ‘ಕರುನಾಡ ರತ್ನ’ ರಾಜ್ಯ ಪ್ರಶಸ್ತಿ ಪ್ರದಾನ*

ನವೆಂಬರ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.24 NEWS DESK : ಅಂಗನವಾಡಿಯ ನಿವೃತ್ತ ಕಾರ್ಯಕರ್ತೆ ಹಾಗೂ ಮಡಿಕೇರಿಯ ಸಮಾಜ ಸೇವಕಿ ಎಂ.ಸಿ.ಚಿನ್ನಮ್ಮ ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಬೆಂಗಳೂರಿನ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ರಾಜ್ಯ ಮಟ್ಟದ ನಾಗರೀಕ ಸೇವಾ ಪ್ರಶಸ್ತಿ ‘ಕರುನಾಡ ರತ್ನ’ವನ್ನು ನೀಡಿ ಗೌರವಿಸಿದೆ. ಬೆಂಗಳೂರಿನ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹಾಗೂ ಕರ್ನಾಟಕ ಸಾಂಸ್ಕøತಿಕ ಅಕಾಡೆಮಿಯ ಅಧ್ಯಕ್ಷ ದಯಾನಂದ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಅಂಗನವಾಡಿಯ ಸಾಮಾನ್ಯ ಕಾರ್ಯಕರ್ತೆಯಾಗಿದ್ದ ಎಂ.ಸಿ.ಚಿನ್ನಮ್ಮ ಅವರು ಪುಟಾಣಿಗಳ ಮೇಲಿನ ಪ್ರೀತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಿಂಭಾಗದಲ್ಲಿ ಅಂಗನವಾಡಿ ಕೇಂದ್ರಕ್ಕೆ ಸ್ವಪ್ರಯತ್ನದಿಂದ ಜಾಗವನ್ನು ಹುಡುಕಿಕೊಟ್ಟರು. ಸರಕಾರದಿಂದ ಜಾಗ ಮಂಜೂರು ಮಾಡಿಸಿ ಅದೇ ಸ್ಥಳದಲ್ಲಿ ಶಾಶ್ವತವಾದ ಅಂಗನವಾಡಿ ಕೇಂದ್ರ ಸ್ಥಾಪನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆದು ಅಂಗನವಾಡಿ ಕೇಂದ್ರಕ್ಕೆ ಮೂಲಭೂತ ಸೌಲಭ್ಯವನ್ನು ದೊರಕಿಸಿಕಟ್ಟಿದ್ದಾರೆ. ಸುಮಾರು 25 ವರ್ಷಗಳಿಂದ ಮಕ್ಕಳಿಗೆ ಆಟಪಾಠ, ಮನರಂಜನೆ. ಶಾಲಾಪೂರ್ವ ಪರಿಸರ ಜ್ಞಾನ, ಆರೋಗ್ಯ ಮತ್ತಿತರ ಶೈಕ್ಷಣಿಕ ವಿಚಾರಗಳ ಕುರಿತು ತಿಳುವಳಿಕೆಯನ್ನು ನೀಡುತ್ತಾ ಬಂದಿದ್ದಾರೆ. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವುದು ಮತ್ತು ಪುಸ್ತಕ, ಬಟ್ಟೆಯನ್ನು ಕೊಡಿಸುವ ಕಾರ್ಯ ಮಾಡಿದ್ದಾರೆ. ವೈದ್ಯರನ್ನು ಸಂಪರ್ಕಿಸಿ ಬಡತನದಲ್ಲಿರುವ ರೋಗಿಗಳಿಗೆ ಬೇಕಾದ ಉಚಿತ ಔಷಧ ದೊರಕಿಸಿಕೊಟ್ಟಿದ್ದಾರೆ. ಅನಾಥ ಶವಸಂಸ್ಕಾರ ಚಿನ್ನಮ್ಮ ಅವರು ಮಾಡಿದ ಮಾನವೀಯ ಸೇವೆಗಳಲ್ಲಿ ಒಂದಾಗಿದೆ. ಅಂಗನವಾಡಿ ಸೇವೆಯನ್ನೇ ಉಸಿರಾಗಿಸಿಕೊಂಡಿದ್ದ ಚಿನ್ನಮ್ಮ ಅವರ ಉತ್ತಮ ಸೇವೆಗಾಗಿ 2003-04ರಲ್ಲಿ ರಾಜ್ಯ ಪ್ರಶಸ್ತಿ ಲಭಿಸಿದೆ. ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿ ವಂತಿಯಿಂದಲೂ ಪ್ರಶಸ್ತಿ ದೊರೆತ್ತಿದೆ. ಸುದೀರ್ಘ 25 ವರ್ಷಗಳ ಸೇವೆಯ ನಂತರ 2016 ಜೂ.1ರಂದು ನಿವೃತ್ತಿ ಹೊಂದಿದರು. ನಿವೃತ್ತಿಯ ನಂತರ ಮಕ್ಕಳ ಉಪಯೋಗಕ್ಕೆಂದು ಗೋಡೆಬರಹವನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮಾಡಿಸಿಕೊಟ್ಟಿದ್ದಾರೆ. ನಿವೃತ್ತಿಯಾದ ನಂತರದ ದಿನಗಳಲ್ಲಿ ಚಿನ್ನಮ್ಮ ಅವರು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ರೋಗಿಗಳಿಗೆ ಚಿಕಿತ್ಸೆ ಕೊಡಿಸುವುದು, ಮಹಿಳೆಯರಿಗೆ ಸ್ವಉದ್ಯೋಗದ ತರಬೇತಿ ನೀಡುವುದು, ಶಾಲೆ ಬಿಟ್ಟ ಮಕ್ಕಳ ಸರ್ವೇ ಕಾರ್ಯ, ಪ್ರವಾಹ ಮತ್ತು ಭೂಕುಸಿತವಾದ ಪ್ರದೇಶಗಳ ಮನೆಗಳು ಹಾಗೂ ಜನರ ಮಾಹಿತಿ ಸಂಗ್ರಹ, ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ಆದಾಯ ದೃಢೀಕರಣ ಪತ್ರ, ಪಾನ್ ಕಾರ್ಡ್, ವೃದ್ಧಾಪ್ಯ ವೇತನ, ಜೀವವಿಮೆ ಮತ್ತು ವಿಕಲಚೇತನರಿಗೆ ಮಾಸಾಶನ ಕೊಡಿಸಲು ನೆರವಾಗಿದ್ದಾರೆ. ರಾಷ್ಟ್ರೀಯ ವಿಪತ್ತಿನಂತಹ ತುರ್ತು ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣದ ವಾರಿಯರ್ ಆಗಿ ಸೇವೆ ಸಲ್ಲಿಸಿದ ಕಾರಣಕ್ಕಾಗಿ ಅಭಿನಂದನಾ ಪತ್ರ ಪಡೆದಿದ್ದಾರೆ. ಮಡಿಕೇರಿ ನಗರಸಭೆಯ ಟಾಸ್ಕ್‌ಫೋರ್ಸ್‌ನಲ್ಲಿ ವಾರಿಯರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ವಿಧಾನಸಭಾ ಕ್ಷೇತ್ರದ 199 ಮತಗಟ್ಟೆಯ ಹಂತದ ಅಧಿಕಾರಿಯಾಗಿ ಕಳೆದ ಅನೇಕ ವರ್ಷಗಳಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಸೇವೆಯನ್ನು ಗುರುತಿಸಿ ಚುನಾವಣಾ ಆಯೋಗವು ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದೆ. ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ ಸೆಪ್ಟಂಬರ್ ತಿಂಗಳಿನಲ್ಲಿ ನಡೆಸಿದ ಶಿಕ್ಷಕರ ದಿನಾಚರಣೆಯಲ್ಲಿ ಎಂ.ಸಿ.ಚಿನ್ನಮ್ಮ ಅವರಿಗೆ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಿತ್ತು. ಇತ್ತೀಚೆಗೆ ನಡೆದ 114ನೇ ಮಹಿಳಾ ದಿನಾಚರಣೆಯ ಸಂದರ್ಭ ಓ.ಡಿ.ಪಿ ಸಂಸ್ಥೆ ಚಿನ್ನಮ್ಮ ಅವರಿಗೆ ಪ್ರೇರಣಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.