Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಎಐಡಿಎಸ್‍ಓ ಸಮಿತಿಯಿಂದ ಪ್ರತಿಭಟನೆ : ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಎಐಡಿಎಸ್‍ಓ ಸಮಿತಿಯಿಂದ ಪ್ರತಿಭಟನೆ : ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ಆಗ್ರಹ*

ನವೆಂಬರ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.24 NEWS DESK : ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸೂಡೆಂಟ್ಸ್ ಆರ್ಗನೈಜೇಷನ್ ಕೊಡಗು ಜಿಲ್ಲಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಎಐಡಿಎಸ್‍ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ, ಕರ್ನಾಟಕ ಪಬ್ಲಿಕ್ ಶಾಲೆಗಳ (ಏPS) – ಮ್ಯಾಗ್ನೆಟ್ ಶಾಲೆಗಳ ಯೋಜನೆ ಅಡಿಯಲ್ಲಿ ಸರ್ಕಾರವು ರಾಜ್ಯದಾದ್ಯಂತ 40,000ಕ್ಕೂ ಹೆಚ್ಚು ಶಾಲೆಗಳನ್ನು ವಿಲೀನಗೊಳಿಸಲು ಮತ್ತು ಅವುಗಳನ್ನು ಸಂಪೂರ್ಣವಾಗಿ ಮುಚ್ಚಲು ಸಿದ್ಧತೆ ನಡೆಸುತ್ತಿದೆ. ಗುಣಮಟ್ಟ ಮತ್ತು ಮಾದರಿ ಶಾಲೆಗಳು ಎಂಬ ಆಕರ್ಷಕ ಪದಗಳ ಹಿಂದೆ, ಉಚಿತ ಮತ್ತು ಸಾರ್ವತ್ರಿಕ ಶಿಕ್ಷಣದ ನಮ್ಮ ನವೋದಯ ಚಿಂತಕರು, ಕ್ರಾಂತಿಕಾರಿಗಳು ಕಷ್ಟಪಟ್ಟು ಗಳಿಸಿದ ವ್ಯವಸ್ಥೆಯನ್ನು ನಾಶಪಡಿಸುವ ಪ್ರಯತ್ನ ಅಡಗಿದೆ ಎಂದು ಆರೋಪಿಸಿದರು. ಕೇವಲ ಕೆಪಿಎಸ್ ಶಾಲೆಯಿಂದ ಸಮಸ್ಯೆಯಿಲ್ಲ. ಆದರೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತೆರೆಯುವ ಕೆಪಿಎಸ್- ಮ್ಯಾಗ್ನೆಟ್ ಶಾಲೆ ಅತ್ಯಂತ ಅಪಾಯಕಾರಿಯಾಗಿದೆ. ಕರ್ನಾಟಕದಲ್ಲಿ ಒಟ್ಟು 49,600 ಸರ್ಕಾರಿ ಶಾಲೆಗಳಿದೆ. 30,000 ಗ್ರಾಮಗಳಿರುವ ನಮ್ಮ ರಾಜ್ಯದಲ್ಲಿ ಕೇವಲ 5,900 ಗ್ರಾಮ ಪಂಚಾಯಿತಿಗಳಿದೆ. ಸರ್ಕಾರದ ಯೋಜನೆಯ ಪ್ರಕಾರ ರಾಜ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ 5,900 ಶಾಲೆಗಳು ಮಾತ್ರ ಉಳಿಯುತ್ತದೆ. ಈ ಮೂಲಕ ಬಡವರ ಮಕ್ಕಳು, ರೈತರ ಮಕ್ಕಳು ಹಾಗೂ ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದ್ದು, ಇದಕ್ಕೆ ಎಐಡಿಎಸ್‍ಓ ಸಂಘಟನೆ ವಿರೋಧ ಇದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲಾ ಸಂಚಾಲಕರಾದ ಸ್ವಾತಿ ಮಾತನಾಡಿ, ಪಬ್ಲಿಕ್ ಶಾಲೆಯ ಸುತ್ತಮುತ್ತಲಿನ 1 ರಿಂದ 5 ಕಿ.ಮೀ ವ್ಯಾಪ್ತಿಯ, 50ಕ್ಕಿಂತ ಕಡಿಮೆ ದಾಖಲಾತಿ ಹೊಂದಿರುವ ಚಿಕ್ಕಪುಟ್ಟ ಶಾಲೆಗಳನ್ನು ತನ್ನಲ್ಲಿ ವಿಲೀನಗೊಳಿಸಿಕೊಳ್ಳಲಿದೆ ಎಂದರು. ಸರ್ಕಾರವು ಪ್ರತಿ ಹಳ್ಳಿಗೆ ಬಸ್ ಬಿಡುತ್ತೇವೆ ಎಂದು ಹೇಳುತ್ತಿದೆ. ಆದರೆ ಈಗಾಗಲೇ ಎಷ್ಟೋ ಹಳ್ಳಿಗಳಲ್ಲಿ ಬಸ್ ಇಲ್ಲದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಸ್ತವತೆ ಹೀಗಿರುವಾಗ, 6-7 ಕಿಮೀ ದೂರದ ಶಾಲೆಯನ್ನು ತಲುಪಲಾಗದೆ ಬಡ ಮಕ್ಕಳು ಶಿಕ್ಷಣದಿಂದ ದೂರ ಉಳಿಯಬೇಕಾಗಿದೆ. ಈ ಯೋಜನೆಗೆ ಸಾಲ ಪಡೆಯಲಿರುವ ಸರ್ಕಾರವು ಕಾರ್ಫೋರೇಟ್ ಹಿತಾಸಕ್ತಿ ಕಾಪಾಡಲು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜನರ ತೆರಿಗೆಯ ಮೇಲೆ ನಡೆಯುವ ಸರ್ಕಾರಗಳೇ ಶಿಕ್ಷಣದ ಮಾರಾಟಕ್ಕೆ ನಿಂತಿರುವಾಗ, ರಾಜ್ಯದಾದ್ಯಂತ ಪ್ರಬಲ ಪ್ರತಿರೋಧ ಚಳುವಳಿಯನ್ನು ಕಟ್ಟುವುದು ನಮ್ಮ ಜವಾಬ್ದಾರಿಯಾಗಿದೆ. ಸರ್ಕಾರಿ ಶಾಲೆಗಳನ್ನು ರಕ್ಷಿಸಲು ಪ್ರತಿಯೊಬ್ಬ ವಿದ್ಯಾರ್ಥಿ, ಶಿಕ್ಷಕರು ಮತ್ತು ಪೆÇೀಷಕರು ಒಂದಾಗಬೇಕೆಂದು ಕರೆ ನೀಡಿದರು. ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಉಪಾಧ್ಯಕ್ಷ ವಿ.ಎನ್ ರಾಜಶೇಖರ್, ಎಐಡಿಎಸ್‍ಒ ಸಂಘಟನೆಯ ಪದಾಧಿಕಾರಿ ಅಂಜಲಿ, ವಿದ್ಯಾರ್ಥಿಗಳಾದ ಜೀವನ್, ಉಮಾವತಿ, ಪ್ರಿಯ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.

 

 

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.