
ಬೆಂಗಳೂರು ನ.25 NEWS DESK : ಶಿಡ್ಲಘಟ್ಟದಲ್ಲಿ ನಡೆದ ಚಿಕ್ಕಬಳ್ಳಾಪುರ ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್. ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
ಈ ಸಂದರ್ಭ ಸಚಿವರುಗಳಾದ ಕೆ.ಎಚ್ ಮುನಿಯಪ್ಪ, ಎಂ.ಸಿ ಸುಧಾಕರ್, ಬೋಸರಾಜ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ವೆಂಕಟೇಶ್, ಜಮೀರ್ ಅಹ್ಮದ್, ಬೈರತಿ ಸುರೇಶ್, ರಹೀಮ್ ಖಾನ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಶಾಸಕರು ಮತ್ತಿತರ ನಾಯಕರು ಭಾಗವಹಿಸಿದ್ದರು. ಇದೇ ಸಂದರ್ಭ ಎ.ಎಸ್ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.









