Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೌಡಳ್ಳಿಯಲ್ಲಿ ವೀರಶೈವ ಧಾರ್ಮಿಕ ಸಭೆ : ಶರಣರ ಆದರ್ಶ, ಚಿಂತನೆ ಮೈಗೂಡಿಸಿಕೊಳ್ಳಲು ಶಾಸಕ ಡಾ.ಮಂತರ್ ಗೌಡ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೌಡಳ್ಳಿಯಲ್ಲಿ ವೀರಶೈವ ಧಾರ್ಮಿಕ ಸಭೆ : ಶರಣರ ಆದರ್ಶ, ಚಿಂತನೆ ಮೈಗೂಡಿಸಿಕೊಳ್ಳಲು ಶಾಸಕ ಡಾ.ಮಂತರ್ ಗೌಡ ಕರೆ*

ನವೆಂಬರ್ 27, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ನ.27 NEWS DESK : ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕ ಹಾಗೂಮಹಾಸಭಾದ ಸೋಮವಾರಪೇಟೆ ತಾಲ್ಲೂಕು ಘಟಕ ಹಾಗೂ ಮಹಾಸಭಾದ ಯುವ ಘಟಕದ ವತಿಯಿಂದ ತಾಲ್ಲೂಕಿನ ಗೌಡಳ್ಳಿ ಬಿ.ಜಿ.ಎಸ್.ವಿದ್ಯಾಸಂಸ್ಥೆಯ ಆವರಣದಲ್ಲಿ ಬಸವಣ್ಣನವರ ಜಯಂತಿ, ಹಾನಗಲ್ ಕುಮಾರಸ್ವಾಮಿ ಜಯಂತಿ, ಡಾ ಶಿವಕುಮಾರ ಸ್ವಾಮೀಜಿ ಹಾಗೂ ರೇಣುಕಾಚಾರ್ಯ ಜಯಂತಿ ಅಂಗವಾಗಿ ಧಾರ್ಮಿಕ ಸಭೆ , ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸಹಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ , ಬಸವಣ್ಣನ ಅನುಯಾಯಿಗಳಾದ ನಾವು ಸಮಾಜ ಮುಖಿ ಚಿಂತನೆಗಳನ್ನು ಅಳವಡಿಸಿಕೊಂಡು ಧರ್ಮ ಮಾರ್ಗದಲ್ಲಿ ನಡೆಯುವ ಮೂಲಕ ಇತರರಿಗೆ ಮಾದರಿಯಾಗಿ ಬದುಕಬೇಕು ಎಂದರು. ಕಲುಷಿತಗೊಳ್ಳುತ್ತಿರುವ ಸಾಮಾಜಿಕ ಬದುಕನ್ನು ಉತ್ತಮ ಪಡಿಸಿಕೊಳ್ಳಲು ಪ್ರತಿಯೊಬ್ಬರೂ ಬಸವಾದಿ ಶರಣರ ಜೀವನ ಮತ್ತು ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಡಾ ಮಂತರ್ ಗೌಡ ಸಲಹೆ ನೀಡಿದರು. ಇಂದು ನಮ್ಮ ನಾಡಿನಲ್ಲಿ ಮಠ- ಮಾನ್ಯಗಳು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ನೀಡುತ್ತಿರುವ ಸೇವಾ ಕಾರ್ಯಗಳು ಅನನ್ಯವಾದದ್ದು. ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದರು. :: ಬಸವ ಭವನ ಕಟ್ಟಡ ನಿರ್ಮಾಣಕ್ಕೆ ಶಾಸಕರಿಂದ ರೂ.10 ಲಕ್ಷ ಅನುದಾನದ ಭರವಸೆ :: ವೀರಶೈವ- ಲಿಂಗಾಯತ ಜಿಲ್ಲಾ ಮಹಾಸಭಾದ ವತಿಯಿಂದ ಕುಶಾಲನಗರದಲ್ಲಿ ನಿರ್ಮಿಸಲುದ್ದೇಶಿರುವ ಸಮಾಜದ‌ ‘ಬಸವ ಭವನ’ ಕಟ್ಟಡ ನಿರ್ಮಾಣಕ್ಕೆ ತಮ್ಮ ಶಾಸಕರ ಅನುದಾನದಲ್ಲಿ ರೂ. 10 ಲಕ್ಷ ಅನುದಾನವನ್ನು ಒದಗಿಸುವುದಾಗಿ ಶಾಸಕ ಡಾ ಮಂತರ್ ಗೌಡ ಭರವಸೆ ನೀಡಿದರು. :: ಶರಣರ ಚಿಂತನೆ ಸರ್ವಕಾಲೀಕ ::  ಧಾರ್ಮಿಕ ಸಭೆಯಲ್ಲಿ ಧರ್ಮ ಮತ್ತು ಸಮಾಜದ ಕುರಿತು ಆಶಯ ಭಾಷಣ ಮಾಡಿದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಸಮಾನತೆ ಸಾರಿದ ಶರಣರ ಚಿಂತನೆಗಳಿಗೆ ಸಮನಾದ ಶಕ್ತಿ ಇಲ್ಲ. ಎಲ್ಲ ಕಾಲಕ್ಕೂ ಶರಣರ ಚಿಂತನೆಗಳು ಅನ್ವಯ­ವಾಗುವುದು ಶರಣ ತತ್ವಗಳ ಚಿಂತನೆ­ಯ ವಿಶೇಷತೆ ಎಂದು ಹೇಳಿದರು. “ನುಡಿದಂತೆ ನಡೆ- ನಡೆದಂತೆ ನುಡಿ” ಎಂದು ತಿಳಿಸುವ ಶರಣರ ವಚನಗಳು, ಕಾಯಕ, ದಾಸೋಹ ಮತ್ತು ಪ್ರಸಾದ ಸಂಸ್ಕೃತಿಯನ್ನು ಸಾರುತ್ತಿವೆ. ನಮ್ಮನ್ನು ನಾವು ತಿದ್ದಿಕೊಳ್ಳಲು ಸಹಕಾರಿಯಾಗಿವೆ ಎಂದರು. ಮಹಾಸಭಾದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಸಚ್ಚಿದಾನಂದ ಮೂರ್ತಿ ಮಾತನಾಡಿ,ಪ್ರಸ್ತುತ ಅನೇಕ ಸವಾಲುಗಳನ್ನು ಎದುರಿಸುತ್ತಿರುವ ವೀರಶೈವ ಸಮಾಜವು ಇವುಗಳನ್ನು ಮೆಟ್ಟಿನಿಲ್ಲುವ ಶಕ್ತಿಯನ್ನು ಯುವಕರು ಪಡೆದುಕೊಳ್ಳಲು ವಿದ್ಯಾವಂತ ರಾಗಬೇಕು ಎಂದು ಕರೆ ನೀಡಿದರು. ರಾಜ್ಯ ಉಚ್ಛ ನ್ಯಾಯಾಲಯದ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ ಮಾತನಾಡಿ, ದುಡಿದು ತಿನ್ನಬೇಕು ಎನ್ನುವುದು ಕಾಯಕ ತತ್ತ್ವದ ಮೂಲ ಸಂದೇಶವಾಗಿದೆ ಎಂದರು. ಸಾಹಿತಿ ಪ್ರಭಾಕರ್ ಶಿಶಿಲ ಅವರು ದೊಡ್ಡರಾಜೇಂದ್ರ ಅವರ ಕುರಿತು ಬರೆದ ಪುಸ್ತಕವನ್ನು ಬಿಡುಗಡೆಗೊಳಿಸಿದ ಮಹಾಸಭಾದ ರಾಜ್ಯ ‌ಮಹಿಳಾ ಘಟಕದ ಅಧ್ಯಕ್ಷೆ ಮುಕ್ತಾಂಭ ಮಾತನಾಡಿ, ಮಹಿಳೆಯರು ಶಿವ ಶರಣೆಯರ ಆದರ್ಶ ಹಾಗೂ ಸಂಸ್ಕಾರಗಳನ್ನು ಮೈಗೂಢಿಸಿಕೊಳ್ಳಬೇಕು ಎಂದರು. ಮಹಾಸಭಾದ ವಾಣಿಜ್ಯ ಮತ್ತು ಕೈಗಾರಿಕಾ ಘಟಕದ ಅಧ್ಯಕ್ಷ ವಿಜಯಕುಮಾರ್ ಪಾಟೀಲ್, ಐಹಿಕ ಸಂಪತ್ತಿನ ಹೆಚ್ಚಳಕ್ಕಿಂತ ಆತ್ಮ ತೃಪ್ತಿ ಬಹಳ ದೊಡ್ಡದು. ಅದೇ ಶರಣರ ಸಂದೇಶ ಎಂದು ಬಣ್ಣಿಸಿದರು. ಮುದ್ದಿನಕಟ್ಟೆ ಮಠದ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶರಣರ ಕಾಯಕ, ದಾಸೋಹ ಮತ್ತು ಪ್ರಸಾದ ತತ್ವಗಳು ವ್ಯಕ್ತಿಯ ಜೀವನವನ್ನು ಆರೋಗ್ಯಪೂರ್ಣ­ವನ್ನಾಗಿಸಿ ಸಂತೃಪ್ತ ಜೀವನ ನಡೆಸಲು ಸಹಕಾರಿಯಾಗಿವೆ ಎಂದರು. ಕಲ್ಲಹಳ್ಳಿ ಮಠದ ರುದ್ರಮುನಿ ಸ್ವಾಮೀಜಿ ಮಾತನಾಡಿ, ಅಂತರಂಗದಲ್ಲಿರುವ ಅವಗುಣಗಳನ್ನು ಕಳೆದುಕೊಂಡರೆ ಮಾನವ ಮಹಾ ಮಾನವನಾಗಲು ಸಾಧ್ಯ ಎಂದರು. ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ ಮಾತನಾಡಿ, ಜಾತಿ ಸೂತಕ, ಲಿಂಗ ತಾರತಮ್ಯಗಳಿಲ್ಲದ ಶರಣರ ದೃಷ್ಟಿ ಅನನ್ಯ, ಸರ್ವಮಾನ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ವಿ.ಶಿವಪ್ಪ ಮಾತನಾಡಿ, ಇಂತಹ ಧಾರ್ಮಿಕ ಸಮ್ಮೇಳನಗಳು ಸಮಾಜದಲ್ಲಿ ಪ್ರೀತಿ- ವಿಶ್ವಾಸ, ಸ್ನೇಹಪರತೆ ಹಾಗೂ ಸಹಬಾಳ್ವೆ ನಡೆಸಲು ಸಹಕಾರಿಯಾಗಿವೆ ಎಂದರು. ಜಿಲ್ಲಾ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಟಿ.ಎಸ್. ಶಾಂಭಶಿವಮೂರ್ತಿ, ಕೋಶಾಧಿಕಾರಿ ಎಚ್.ಪಿ.ಉದಯ್ ಕುಮಾರ್, ಮಹಾಸಭಾದ ಉಪಾಧ್ಯಕ್ಷರಾದ ಡಿ.ಜೆ.ರಶ್ಮಿ, ಪ್ರವೀಣ್, ದಾಸೋಹ ಸಂಚಾಲಕರೂ ಆದ ನಿರ್ದೇಶಕ ಬಾಲಶಂಕರ್, ಮಹಾಸಭಾದ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಕೆ.ಪಿ.ಆದರ್ಶ್ , ಕಾರ್ಯದರ್ಶಿ ಎಂ.ಎನ್. ಚಂದ್ರಶೇಖರ್, ಕುಶಾಲನಗರ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್, ಕಟ್ಟಡ ದಾನಿ, ನಿವೃತ್ತ ಕಂದಾಯಾಧಿಕಾರಿ ಎಂ.ಬಿ.ಬಸವರಾಜ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋಕ್ಷಿತ್ ರಾಜ್, ಪದಾಧಿಕಾರಿಗಳಾದ ಶಿವಾನಂದ್, ಭರತ್, ವಿವಿಧ ಘಟಕಗಳ ಪದಾಧಿಕಾರಿಗಳು,ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ಮಹಾಸಭಾದ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಶಾಂಭಶಿವಮೂರ್ತಿ ಸ್ವಾಗತಿಸಿದರು. ಮಹಾಸಭಾದ ತಾಲ್ಲೂಕು ಘಟಕದ ಕಾರ್ಯದರ್ಶಿ ಉಷಾರಾಣಿ ವಂದಿಸಿದರು. *ಬಹುಮಾನ ವಿತರಣೆ*: ಇದೇ ವೇಳೆ ಕ್ರಿಕೆಟ್‌ ಟೂರ್ನಿ ಸೇರಿದಂತೆ ವಿವಿಧ ಕ್ರೀಡಾಕೂಟಗಳಲ್ಲಿ ವಿಜೇತಗೊಂಡವರಿಗೆ‌ ಮಹಾಸಭಾದ ವತಿಯಿಂದ ಟ್ರೋಫಿ ಮತ್ತು ಬಹುಮಾನಗಳನ್ನು ವಿತರಿಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.