
ನಾಪೋಕ್ಲು ನ.27 NEWS DESK : ನಾಪೋಕ್ಲುವಿನ ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ನಡೆಯಿತು. ಬಲ್ಲಮಾವಟಿ ಗ್ರಾಮದ ಭಗವತಿ ದೇವಾಲಯದಲ್ಲಿ ವಿಶೇಷ ನಾಗನ ಪೂಜೆಯನ್ನು ನೆರವೇರಿಸಲಾಯಿತು. ಬಲ್ಲಮಾವಟಿ, ನೆಲಜಿ, ಪುಲಿಕೋಟು ಗ್ರಾಮದ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಮಹಾಪೂಜೆ ನೆರವೇರಿಸಲಾಯಿತು. ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ದೇವಾಲಯದ ಆಡಳಿತ ಮಂಡಳಿ ಸದಸ್ಯರು, ತಕ್ಕ ಮುಖ್ಯಸ್ಥರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು
ವರದಿ : ದುಗ್ಗಳ ಸದಾನಂದ.









