Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»‘ಸಂವಿಧಾನ’ ಬದುಕಿನ ಅವಿಭಾಜ್ಯ ಅಂಗ : ನ್ಯಾಯಾಧೀಶ ಎಸ್.ನಟರಾಜ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

‘ಸಂವಿಧಾನ’ ಬದುಕಿನ ಅವಿಭಾಜ್ಯ ಅಂಗ : ನ್ಯಾಯಾಧೀಶ ಎಸ್.ನಟರಾಜ್

ನವೆಂಬರ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.27 NEWS DESK : ಸಂವಿಧಾನ ಜೀವನದ ಅಂಗವಾಗಿದ್ದು, ನಮ್ಮೆಲ್ಲ ಕರ್ತವ್ಯ , ಕೆಲಸಗಳು ಸರಾಗವಾಗಿ ನಡೆಯಲು ಕಾರಣವೇ ನಮ್ಮ ಸಂವಿಧಾನ ಎಂದು ಎರಡನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಎಸ್.ನಟರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.  ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ , ತಾಲ್ಲೂಕು ಕಾನೂನು ಸೇವೆಗಳ ಸಮಿತಿ ವಿರಾಜಪೇಟೆ, ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ನಾವೆಲ್ಲ ಇಂದು ಇಷ್ಟು ಶಿಸ್ತಿನಿಂದ ಹಾಗೂ ಸ್ವತಂತ್ರದಿಂದ ಬದುಕಲು ಸಂವಿಧಾನವೇ ಮೂಲ ಕಾರಣ. ವಿವಿಧ ದೇಶಗಳಿಗೆ ನಮ್ಮ ದೇಶವನ್ನು ಹೋಲಿಕೆ ಮಾಡಿದರೆ ಸಂವಿಧಾನದ ಮಹತ್ವ ಏನೆಂದು ತಿಳಿಯುತ್ತದೆ. ನಮ್ಮ ಸಂವಿಧಾನ ಅದ್ಭುತವಾದ ಜೀವಂತ ಸಂವಿಧಾನವಾಗಿದ್ದು, ಇದನ್ನು ರಚಿಸಲು ಪಟ್ಟಂತಹ ಶ್ರಮವನ್ನು ಅರಿಯುವುದರೊಂದಿಗೆ, ರಚಿಸಿದಂತಹ ಅಂಬೇಡ್ಕರ್ ಹಾಗೂ ರಚನಾ ಸಮಿತಿಯಲ್ಲಿದ್ದ ಪ್ರತಿಯೊಬ್ಬರನ್ನು ಸ್ಮರಿಸಬೇಕು. ಸಂವಿಧಾನವು ಎಲ್ಲಾ ಕಾನೂನಿನ ತಾಯಿ ಎಂಬುದನ್ನು ಅರಿತು ಪ್ರತಿಯೊಬ್ಬರ ಹಕ್ಕು ಕರ್ತವ್ಯಗಳನ್ನು ಗೌರವಿಸಿ ಪಾಲಿಸಬೇಕೆಂದರು.  ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್. ಮಂಜುನಾಥ್ ಮಾತನಾಡಿ, ದೈನಂದಿನ ಜೀವನದಲ್ಲಿ ಸಂವಿಧಾನವು ಅವಿಭಾಜ್ಯ ಅಂಗವಾಗಿದೆ. ಸಂವಿಧಾನದ ಪ್ರಸ್ತಾವನೆಯನ್ನು ನಾವು ಅರ್ಥೈಸಿಕೊಂಡರೆ ಸಂಪೂರ್ಣ ಸಂವಿಧಾನವನ್ನು ಅರ್ಥೈಸಿಕೊಂಡಂತೆ. ಸಂವಿಧಾನ ಎಲ್ಲಾ ರೀತಿಯಲ್ಲೂ ನಮಗೆ ಸಮಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ್ದು . ನಾವು ನಮ್ಮ ಹಕ್ಕನ್ನು ಅನುಭವಿಸುವುದರೊಂದಿಗೆ ಕರ್ತವ್ಯವನ್ನು ಸಮರ್ಪಕವಾಗಿ ಪಾಲಿಸಿದರೆ ಉತ್ತಮ ಸಮಾಜವನ್ನು ನಿರ್ಮಿಸಬಹುದು. ಸಂವಿಧಾನವನ್ನು ಪ್ರತಿನಿತ್ಯದ ಜೀವನದಲ್ಲಿ ಅಳವಡಿಸುವುದರಿಂದ ಸಮಾಜದಲ್ಲಿ ಆದರ್ಶಪ್ರಾಯವಾಗಿ ಬದುಕಬಹುದೆಂದರು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರದೀಪ ಪೊತದಾರ ಮಾತನಾಡಿ, ಸಂವಿಧಾನವು ನಮಗೆ ವಿವಿಧ ಹಕ್ಕುಗಳನ್ನು ನೀಡಿದೆ. ಹಕ್ಕುಗಳನ್ನು ಅನುಭವಿಸುವುದರೊಂದಿಗೆ ಕರ್ತವ್ಯವನ್ನು ಸಮರ್ಪಕವಾಗಿ ಪಾಲಿಸಬೇಕು ಹಾಗೂ ಇತರರ ಹಕ್ಕುಗಳಿಗೆ ನಮ್ಮಿಂದ ತೊಂದರೆಯಾಗದಂತೆ ಸಂವಿಧಾನವನ್ನು ಗೌರವಿಸ ಬೇಕೆಂದರು. ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಸಿ.ಕೆ.ಪೂವಣ್ಣ ಮಾತನಾಡಿದರು.‌ ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ , ಕಾರ್ಯದರ್ಶಿ ವೇದಿಕಾ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ ಪ್ರಾಂಶುಪಾಲೆ ಪಿ.ಕೆ.ವಿನೀತಾ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ  ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ ದ ಟ್ರಸ್ಟಿ ಪ್ರಶಾಂತ್,  ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ , ಉಪನ್ಯಾಸಕರಾದ ಡಾ.ವೀಣಾ, ಕಾವೇರಿ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು, ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ ದ ಉಪನ್ಯಾಸಕರು , ವಿದ್ಯಾರ್ಥಿಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.