Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತೂರು : ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ ಉದ್ಘಾಟನೆ : ಕಲಿಕೆ ಜ್ಞಾನದ ಜತೆಯಲ್ಲಿ ಸಾಮಾಜಿಕ ಸ್ಥಾನಮಾನವನ್ನೂ ತಂದುಕೊಡುತ್ತದೆ : ಡಾ.ಪಲ್ಲವಿ.ಕೆ.ಎನ್*
ಇತ್ತೀಚಿನ ಸುದ್ದಿಗಳು

*ಪುತ್ತೂರು : ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ ಉದ್ಘಾಟನೆ : ಕಲಿಕೆ ಜ್ಞಾನದ ಜತೆಯಲ್ಲಿ ಸಾಮಾಜಿಕ ಸ್ಥಾನಮಾನವನ್ನೂ ತಂದುಕೊಡುತ್ತದೆ : ಡಾ.ಪಲ್ಲವಿ.ಕೆ.ಎನ್*

November 27, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪುತ್ತೂರು ನ.27 NEWS DESK : ಹೊಸತನದ ಮತ್ತು ಶ್ರೇಷ್ಟವಾದ ವಿಚಾರಗಳನ್ನು ಕಷ್ಟಪಟ್ಟಾದರೂ ಕಲಿಯಬೇಕು. ಕಲಿಯುವ ವಿಷಯದಲ್ಲಿ ನಾವು ಪರಿಣಿತರಾದರೆ ಅದು ಜ್ಞಾನದ ಜತೆಯಲ್ಲಿ ಸಾಮಾಜಿಕ ಸ್ಥಾನಮಾನವನ್ನೂ ತಂದುಕೊಡುತ್ತದೆ ಎಂದು ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಫ್ರೊಫೆಸರ್ ಡಾ.ಪಲ್ಲವಿ.ಕೆ.ಎನ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು, ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2025 ಕ್ಕೆ ಚಾಲನೆ ನೀಡಿ ಮಾತಾಡಿದರು. ಪ್ರಸಕ್ತ ಸನ್ನಿವೇಶದಲ್ಲಿ ಕಾರ್ಯಕ್ಷೇತ್ರದಲ್ಲಿ ಒದಗಿಬರುವ ಸವಾಲುಗಳನ್ನು ಎದುರಿಸಲು ಅಪಾರವಾದ ಮತ್ತು ಅಗಾಧವಾದ ಜ್ಞಾನಶಕ್ತಿ ಹಾಗೂ ಮನೋಶಕ್ತಿಗಳು ಅಗತ್ಯ ಎಂದರು. ಪ್ರತಿಯೊಬ್ಬರೂ ಕೂಡಾ ತಾವು ಕಲಿತ ತಂತ್ರಜ್ಞಾನಗಳನ್ನು ಸಮಾಜದ ಒಳಿತಿಗಾಗಿ ಬಳಸಬೇಕು, ರಾಷ್ಟ್ರೀಯತೆಯನ್ನು ಎತ್ತಿ ಹಿಡಿಯುವ ಮೂಲಕ ನೆಲದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಯೋಚನೆಗಳನ್ನು ಯೋಜನೆಗಳನ್ನಾಗಿಸಿ ಅದಕ್ಕೊಂದು ಸ್ವಾರೂಪವನ್ನು ಕೊಟ್ಟು ಉತ್ಪನ್ನವಾಗಿಸುವ ನಿಟ್ಟಿನಲ್ಲಿ ಕಾಲೇಜು ಪ್ರೋತ್ಸಾಹವನ್ನು ನೀಡುತ್ತಿದೆ ಎಂದರು. ಈ ಉತ್ಪನ್ನಗಳು ಸಮಾಜದ ಒಳಿತಿಗೆ ಸಹಕಾರಿಯಾಗುವ ರೀತಿಯಲ್ಲಿ ಯೋಜನೆಯನ್ನು ತಯಾರಿಸುವುದು ಆವಶ್ಯಕ ಅದಕ್ಕಾಗಿ ಹೆಚ್ಚಿನ ಶ್ರಮವಹಿಸಿ ಯೋಜನೆಗಳನ್ನು ತಯಾರಿಸಿ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ ಮಾತನಾಡಿ ಯಾವುದೇ ಕೆಲಸವನ್ನು ಮಾಡುವುದಕ್ಕೂ ಆತ್ಮವಿಶ್ವಾಸ ಅತೀ ಅಗತ್ಯ. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ವ್ಯಕ್ತಿ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುತ್ತಾನೆ ಎಂದರು. ಕಾಲೇಜು ವಿದ್ಯಾರ್ಜನೆಗೆ ಪೂರಕವಾದ ಅನೇಕ ಚಟುವಟಿಕೆಗಳನ್ನು ನಡೆಸುತ್ತದೆ. ಪಾಠದ ಜತೆಗೆ ನೈತಿಕ ಮೌಲ್ಯವನ್ನು ಬೆಳೆಸುವುದಕ್ಕೂ ಸಹಕರಿಸುತ್ತದೆ ಎಂದರು. ಇಲ್ಲಿ ಮಂಡಿಸಿದ ಎಲ್ಲಾ ಪ್ರೌಢ ಪ್ರಬಂಧÀಗಳನ್ನು ಮುದ್ರಿಸಿದ ಸಂಚಿಕೆಯನ್ನು ಅತಿಥಿಗಳು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು. ಜ್ಞಾನ ಸಂಗಮ 2025ರ ಸಹ ಸಂಯೋಜಕಿ ಪ್ರೊ.ರಶ್ಮಿ.ಪಿ.ಸಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜ್ಞಾನ ಸಂಗಮ 2025ರ ಸಂಯೋಜಕ ಪ್ರೊ.ವೆಂಕಟೇಶ್.ವೈ.ಸಿ ಸ್ವಾಗತಿಸಿ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಡಾ.ಅಜಿತ್ ಹೆಬ್ಬಾರ್ ವಂದಿಸಿದರು. ಉಪನ್ಯಾಸಕಿ ಪ್ರೊ.ಶ್ರೀಶರಣ್ಯ ಕಾರ್ಯಕ್ರಮ ನಿರ್ವಹಿಸಿದರು.

 

 

 

Share. Facebook Twitter Pinterest LinkedIn Tumblr Email WhatsApp
Previous Article*ಎಫ್.ಎಂ.ಕೆ.ಎಂ.ಸಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ : ಭಾರತದ ಸಂವಿಧಾನ ಪ್ರಜಾಪ್ರಭುತ್ವದ ಮೂಲಭೂತ ಆಧಾರ : ಮೇಜರ್ ಪ್ರೊ.ರಾಘವ.ಬಿ*
Next Article *ಸೋಮವಾರಪೇಟೆಯಲ್ಲಿ ಪರಿಸರ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮ : ವಿದ್ಯಾರ್ಥಿಗಳು ಪರಿಸರ ರಕ್ಷಣೆಯಲ್ಲಿ ತೊಡಗಿ : ಡಾ.ಇಮಾನಿ ಸಲಹೆ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.