Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪ ರೋಟರಿ ಸಂಸ್ಥೆಗೆ ಜಿಲ್ಲಾ ಗವರ್ನರ್ ಪಿ.ಕೆ ರಾಮಕೃಷ್ಣ ಭೇಟಿ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪ ರೋಟರಿ ಸಂಸ್ಥೆಗೆ ಜಿಲ್ಲಾ ಗವರ್ನರ್ ಪಿ.ಕೆ ರಾಮಕೃಷ್ಣ ಭೇಟಿ : ಸಾಧಕರಿಗೆ ಸನ್ಮಾನ*

ನವೆಂಬರ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ನ.28 NEWS DESK  : ಪೋಲಿಯೋ ನಿರ್ಮೂಲನೆಗೆ ಅಳವಡಿಸುವ ಲಸಿಕೆಗೆ ಕಳೆದ ಬಾರಿ ಮೂರು ಬಿಲಿಯನ್ ಅಸಾಧಾರಣ ಮೊತ್ತದ ವೆಚ್ಚವನ್ನು ರೋಟರಿ ಸಂಸ್ಥೆ ನಿಭಾಯಿಸಿದೆ ಎಂದು ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಪಿ.ಕೆ ರಾಮಕೃಷ್ಣ ತಿಳಿಸಿದರು. ಗೋಣಿಕೊಪ್ಪ ರೋಟರಿ ಸಂಸ್ಥೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಹಿನ್ನೆಲೆ ಕುಕೂನ್ ಸಭಾಂಗಣದಲ್ಲಿ ಹಮ್ಮಿಕೊಂಡ ಸರ್ವ ಸದಸ್ಯರ ಸಮಾಲೋಚನ ಸಭೆಯಲ್ಲಿ ಮಾತನಾಡಿದರು. ಪ್ರಪಂಚದಲ್ಲಿ 39 ಪೋಲಿಯೋ ಪ್ರಕರಣಗಳು ಬೆಳಕಿಗೆ ಬಂದಿದೆ. ಅವುಗಳಲ್ಲಿ 30 ಪ್ರಕರಣ ಪಾಕಿಸ್ತಾನ ಮತ್ತು 9 ಪ್ರಕರಣ ಅಪಘಾನಿಸ್ತಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ವರ್ಷ ಡಿ.21ರಂದು ಪೋಲಿಯೋ ಲಸಿಕೆ ಕಾರ್ಯಕ್ರಮ ದೇಶದಾದ್ಯಂತ ನಡೆಯಲಿದೆ ಎಂದು ಹೇಳಿದರು. ಪೋಲಿಯೋ ನಿರ್ಮೂಲನೆ ಮಾಡುವುದೇ ರೋಟರಿ ಸಂಸ್ಥೆಯ ಬಹುದೊಡ್ಡ ಉದ್ದೇಶವಾಗಿ ಹಬ್ಬಿಕೊಂಡಿದೆ. ಪ್ರತಿಯೊಬ್ಬರು 5 ವರ್ಷದ ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕುವ ಮೂಲಕ ಪೆÇಲೀಯೋ ನಿರ್ಮೂಲನೆಯೆಡೆಗೆ ಜಾಗೃತರಾಗಬೇಕೆಂದು ಸಲಹೆ ನೀಡಿದರು. ಇದರ ಜೊತೆಗೆ ಅಪಾರವಾದ ಸಾಮಾಜಿಕ ಕಳಕಳಿಯನ್ನು ಸಂಸ್ಥೆ ಹೊಂದಿದೆ. ರಕ್ತ ಸಂಗ್ರಹ ಘಟಕ, ಮತ್ತು ಚರ್ಮಗಳ ಶಿತಲೀಕರಣ ಘಟಕಗಳ ಸ್ಥಾಪನೆಗೆ ರೋಟರಿ ಸಂಸ್ಥೆ ಯೋಜನೆ ರೂಪಿಸಿಕೊಂಡಿದೆ ಎಂದು ಮಾಹಿತಿ ನೀಡಿದರು. ಪ್ರಪಂಚದಾದ್ಯಂತ ಪೋಲಿಯೋ ಲಸಿಕೆ ಅಭಿಯಾನವನ್ನು ನಿಭಾಯಿಸುವ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ರೋಟರಿ ಸಂಸ್ಥೆ ನಿರ್ವಹಿಸಿದೆ, ಈ ಮೂಲಕ ಪ್ರಪಂಚದಾದ್ಯಂತ ರೋಟರಿ ಸಂಸ್ಥೆ ಗಮನ ಸೆಳೆಯುತ್ತಿದೆ ಎಂದರು. ಸಹಾಯಕ ಗವರ್ನರ್, ದಿಲನ್ ಚಂಗಪ್ಪ ಮಾತನಾಡಿ, ರೋಟರಿ ಸಂಸ್ಥೆ ಸುಮಾರು ಹತ್ತಕ್ಕೂ ಹೆಚ್ಚು ಕಾರ್ಯಯೋಜನೆಗಳನ್ನ ರೂಪಿಸಿಕೊಂಡು ಸಮಾಜಮುಖಿಯಾಗಿ ಸಭೆಯನ್ನು ತೊಡಗಿಸಿಕೊಳ್ಳಲು ಚಿಂತನೆ ಹರಿಸಿದ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸುಣ್ಣ ಬಣ್ಣ ಬಳಿಯುವುದು, ಹೆಣ್ಣು ಮಕ್ಕಳು ರಕ್ತದಾನ ಮಾಡುವಂತೆ ಮನ ಒಲಿಸುವುದು, ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯವನ್ನು ಒದಗಿಸಿಕೊಡುವುದು, ಮಾನಸಿಕ ಒತ್ತಡಗಳಿಗೆ ಒಳಪಟ್ಟವರಿಗೆ ಚಿಕಿತ್ಸೆ ಮತ್ತು ಕೌನ್ಸಲಿಂಗ್ ನೀಡುವುದು ಮತ್ತು ಕಾಡು, ನೀರು, ಮಣ್ಣು ಈ ಪರಿಸರವನ್ನ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕುಕೂನ್ ಸಭಾಂಗಣದಲ್ಲಿ ಗೋಣಿಕೊಪ್ಪ ರೋಟರಿ ಸಂಸ್ಥೆ ಅಧ್ಯಕ್ಷ ಪಿಕೆ ವಿಜಯಕುಮಾರ್ ಅಧ್ಯಕ್ಷತೆಯಲ್ಲಿ, ಗೋಣಿಕೊಪ್ಪದ ಮೋದಕ್ ನ್ಯೂಸ್ ಏಜೆನ್ಸಿಯ ಮೂಲಕ ಮುಂಜಾನೆ ಮನೆ ಮನೆಗೆ ಪತ್ರಿಕೆ ಹಚ್ಚುವ ಬೆಳಗಿನ ಯೋಧ ಮಂಜು ಮತ್ತು ಗೋಣಿಕೊಪ್ಪ ನಗರದ ಮೊದಲ ಮಹಿಳಾ ಆಟೋ ಚಾಲಕಿ ಮಂಜುಳಾ ಅವರನ್ನು ಸನ್ಮಾನಿಸಲಾಯಿತು. ಜತೆಗೆ ಬೆಂಗಳೂರಿನ ಕೆಎಫ್‍ಕೆಸಿಸಿಐ ಸಂಸ್ಥೆ ನೀಡುವ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಪಡೆದುಕೊಂಡ ಚೇಂದಂಡ ಸುಮಿ ಸುಬ್ಬಯ್ಯ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಪ್ರಮೋದ್ ಕಾಮತ್ ವಾಚಿಸಿದರು, ಸನ್ಮಾನಿತರ ಪರಿಚಯವನ್ನು, ಖಜಾಂಚಿ ಜಪ್ಪೆಕೋಡಿ ಸುಭಾಷಿಣಿ ಮತ್ತು ದೀನಾ ನೆರವೇರಿಸಿದರು. ಈ ಸಂದರ್ಭ ಝೋನಲ್ ರೆಫ್ಟಿನೆಂಟ್ ಆದಿತ್ಯ ಕೆ.ಹೆಚ್. ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರುಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.