Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಬಸವನಹಳ್ಳಿಯಲ್ಲಿ ಶರಣ ಸಾಹಿತ್ಯ ಪರಿಷತ್ತಿನ ವಿಚಾರ ಸಂಕಿರಣ : ಕನ್ನಡ ಭಾಷೆಯ ವಿಶ್ವಮನ್ನಣೆಗೆ ವಚನ ಸಾಹಿತ್ಯದ ಕೊಡುಗೆ ಅಪಾರ : ಗಮಕಿ ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ಆಶಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಸವನಹಳ್ಳಿಯಲ್ಲಿ ಶರಣ ಸಾಹಿತ್ಯ ಪರಿಷತ್ತಿನ ವಿಚಾರ ಸಂಕಿರಣ : ಕನ್ನಡ ಭಾಷೆಯ ವಿಶ್ವಮನ್ನಣೆಗೆ ವಚನ ಸಾಹಿತ್ಯದ ಕೊಡುಗೆ ಅಪಾರ : ಗಮಕಿ ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ಆಶಯ*

ನವೆಂಬರ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.28 NEWS DESK : ಹನ್ನೆರಡನೇ ಶತಮಾನದ ವಚನಕಾರರು ರಚಿಸಿದ ವಚನಗಳಲ್ಲಿ ಮನುಷ್ಯನ ಬದುಕನ್ನು ಸುಂದರ ಗೊಳಿಸುವ ಜೀವನ ಮೌಲ್ಯಗಳು ಅಡಕವಾಗಿದ್ದು ಅವುಗಳನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿತ್ವವನ್ನು ಹೊಳಪು ಮಾಡಿಕೊಳ್ಳಿ ಎಂದು ತುಮಕೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಗಮಕ ಕಲಾ ವಿದ್ವಾನ್ ಎಸ್.ಜಿ.ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ” ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆಗಳು ” ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಪಠ್ಯಗಳ ಜೊತೆಯಲ್ಲಿ ನೈತಿಕ ಪ್ರಜ್ಞೆ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ಶರಣರ ವಚನಗಳನ್ನು ಅರಿತರೆ ಬದುಕು ಸಾರ್ಥಕ ವಾಗುತ್ತದೆ. ಕನ್ನಡ ಸಾಹಿತ್ಯವನ್ನು ವಿಶ್ವ ಮಟ್ಟದಲ್ಲಿ ಶ್ರೀಮಂತ ಗೊಳಿಸಿದ ವಚನಸಾಹಿತ್ಯ ಈ ನೆಲ ಮೂಲ ಸಂಸ್ಕ್ರತಿಯ ತಾಯಿ ಬೇರು ಎಂದು ಸಿದ್ದರಾಮಯ್ಯ ವ್ಯಾಖ್ಯಾನಿಸಿದರು. ಯಾರಿಗೂ ನೋವಾಗದಂತೆ ಎಲ್ಲರ ಮನವನ್ನು ಅರಳಿಸುವಂತಹ ಮಾತು ಜ್ಯೋತಿರ್ಲಿಂಗ ದಂತಿರಬೇಕು. ಅದು ಮುತ್ತಿನ ಹಾರದಂತಿರಬೇಕು ಎಂದು ವಚನಗಳ ಮೂಲಕ ಶರಣರ ವಿಚಾರಧಾರೆಗಳನ್ನು ಅವರು ಪ್ರಸ್ತುತ ಪಡಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಪರಶಿವಮೂರ್ತಿ ಮಾತನಾಡಿ, ಸಮಾಜದ ಅಂಕು ಡೊಂಕು ತಿದ್ದುವ ಮೂಲಕ ಸಮ ಸಮಾಜದ ಕನಸನ್ನು ನನಸು ಮಾಡಿದ ವಚನ ಸಾಹಿತ್ಯ ವಿದ್ಯಾರ್ಥಿಗಳ ಪಾಲಿಗೆ ಭಗವದ್ಗೀತೆ ಯಾಗಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಚನಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅಧ್ಯಯನ ಶೀಲರಾಗಬೇಕು ಎಂದರು. ತುಮಕೂರಿನ ವಿದ್ಯಾವಾಹಿನಿ ವಿದ್ಯಾಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಕುಮಾರಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಾಜ ಸುಧಾರಕರು ಹಾಗೂ ವಚನಕಾರರ ಬದುಕು ಆದರ್ಶವಾಗಬೇಕು. ವಿದ್ಯಾರ್ಥಿಗಳು ಉಜ್ವಲ ಜೀವನದ ಕನಸು ಬಿತ್ತಬೇಕು.
ಯೋಜನೆಗಳು ಮತ್ತು ನವ ನವೀನ ಯೋಚನೆಗಳ ಮೂಲಕ ನಿರಂತರವಾದ ಶ್ರಮದೊಂದಿಗೆ ಶಿಸ್ತು ಸಂಯಮ ಹಾಗೂ ಸಮಯ ಪಾಲನೆ ರೂಢಿಸಿಕೊಂಡರೆ ಬದುಕು ಸುಂದರವಾಗಿ ರೂಪುಗೊಳ್ಳುತ್ತದೆ ಎಂದರು. ತುಮುಕೂರಿನ ಸರಿಗಮಪ ಹಾಸ್ಯ ಕಲಾವಿದ ಮಿಮಿಕ್ರಿ ಈಶ್ವರಯ್ಯ ಅವರಿಂದ ಇದೇ ಸಂದರ್ಭ ಬೆಕ್ಕು, ಎಮ್ಮೆ, ಹಸು, ಶ್ವಾನಗಳು ಮುಂತಾದ ಪ್ರಾಣಿಗಳ ಕುರಿತಾದ ಮಿಮಿಕ್ರಿ ವಿದ್ಯಾರ್ಥಿಗಳ ಮನಸೂರೆಗೊಂಡಿತು. ತುಮಕೂರಿನ ಜಾನಪದ ಹಾಡುಗಾರ್ತಿ ಪ್ರೇಮ ಕುಮಾರಸ್ವಾಮಿ ಜಾನಪದ ಹಾಡುಗಳ ಮೂಲಕ ಮಕ್ಕಳ ಮನ ಸೆಳೆದರು. ಶಾಲೆಯ ಸಂಗೀತಾ ಶಿಕ್ಷಕ ಪುಟ್ಟರಾಜು ಅವರಿಂದ ವಚನಗಾಯನ ನಡೆಯಿತು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಶಾಲಾ ಪ್ರಾಂಶುಪಾಲೆ ಶ್ರೀಲಕ್ಷ್ಮಿ, ಶಿಕ್ಷಕರಾದ ಶಬರಿಗಿರೀಶ್, ಜಗದೀಶ್ ಹಾಗೂ ಶಾಲಾ ಸಮಿತಿ ಸದಸ್ಯ ಪ್ರಮೋದ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.