Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕುಶಾಲನಗರದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ : ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಸುಧಾರಿಸಲು ಬಿಇಓ ಕೃಷ್ಣಪ್ಪ ಸಲಹೆ*
ಇತ್ತೀಚಿನ ಸುದ್ದಿಗಳು

ಕುಶಾಲನಗರದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ : ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಸುಧಾರಿಸಲು ಬಿಇಓ ಕೃಷ್ಣಪ್ಪ ಸಲಹೆ*

November 29, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ನ.29 NEWS DESK : ಪ್ರಸಕ್ತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಹೊಸದಾಗಿ ಜಾರಿಗೆ ತಂದಿರುವ ಪಠ್ಯಾಧಾರಿತ ಮೌಲ್ಯಾಂಕವನ್ನು ಚಾಚು ತಪ್ಪದೇ ಪರಿಪಾಲಿಸುವ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಪ್ರೌಢಶಾಲಾ ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಕರೆ ನೀಡಿದರು. ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ ತಾಲ್ಲೂಕಿನ ಪ್ರೌಢಶಾಲಾ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಶಿಕ್ಷಕರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶವನ್ನು ಸುಧಾರಿಸುವ ಕುರಿತಂತೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶಾಲಾ ಶಿಕ್ಷಣ ಇಲಾಖೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಿರುವ ಪಠ್ಯಾಧಾರಿತ ಮೌಲ್ಯಾಂಕ( ಎಲ್.ಬಿ.ಎ.) ಬೋಧನೆ ಮೂಲಕ ಮಕ್ಕಳ ಕಲಿಕಾ ಪ್ರಗತಿಯ ಉನ್ನತೀಕರಣಕ್ಕೆ
ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು ಎಂದರು. ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ರಶ್ಮಿ ಮಹೇಶ್ ಅವರ ನೇತೃತ್ವದಲ್ಲಿ ಪ್ರಸಕ್ತ ಸಾಲಿನಲ್ಲಿ ಪಠ್ಯಾಧಾರಿತ ಮೌಲ್ಯಾಂಕ( ಎಲ್.ಬಿ.ಎ.) ಪದ್ಧತಿಯನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಪದ್ಧತಿಯು ವಿದ್ಯಾರ್ಥಿಗಳ ಕಲಿಕೆಗೆ ಪ್ರೇರೇಣೆಯಾಗಿದೆ ಎಂದರು. ಪ್ರಸಕ್ತ ಸಾಲಿನಲ್ಲಿ ಸರ್ಕಾರವು ಎಸ್ಎಸ್ಎಲ್‌ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ಹಲವು ಯೋಜನೆಗಳನ್ನು ರೂಪಿಸಿದ್ದು, ಶಾಲಾ ಹಂತದಲ್ಲಿ ಇದನ್ನು ಪರಿಪಾಲಿಸುವ ಮೂಲಕ ಪ್ರಾಯೋಗಿಕವಾಗಿ ವಿವಿಧ ರೀತಿಯ ಪರೀಕ್ಷೆಗಳನ್ನು ನಡೆಸಿ ಪರೀಕ್ಷಾ ಫಲಿತಾಂಶವನ್ನು ಸುಧಾರಿಸಬೇಕು. ಶಾಲಾ ಶಿಕ್ಷಣ ಇಲಾಖೆಯು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರ ದೂರದೃಷ್ಟಿಯನ್ವಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯು
ಅನುತ್ತೀರ್ಣಗೊಳ್ಳದಂತೆ ನಿಗಾ ವಹಿಸಿ ಪ್ರತಿ ವಿದ್ಯಾರ್ಥಿಯು ಈ ಪರೀಕ್ಷೆಯಲ್ಲಿ ಕಡ್ಡಾಯವಾಗಿ ತೇರ್ಗಡೆ ಹೊಂದುವಂತೆ ಶಿಕ್ಷಕರು ಕ್ರಮ ವಹಿಸಬೇಕಿದೆ. ಶಿಕ್ಷಣ ಇಲಾಖೆಯು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಶಿಕ್ಷಕರು ಇದರ ತೀವ್ರತೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಬಿಇಓ ಕೃಷ್ಣಪ್ಪ ತಿಳಿಸಿದರು. ತರಬೇತಿಯ ಮೇಲುಸ್ತುವಾರಿ ಅಧಿಕಾರಿಯಾದ ಕೂಡಿಗೆ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ತೇರ್ಗಡೆ ಯಾಗುವ ರೀತಿಯಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಬೇಕು.
ಪಠ್ಯಾಧಾರಿತ ಮೌಲ್ಯಾಂಕ (ಎಲ್.ಬಿ.ಎ.) ಮಾದರಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು. ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎ.ಸಿ.ಮಂಜುನಾಥ್ ಮಾತನಾಡಿದರು. ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನಿರ್ದೇಶಕ ‌ಕೆ.ಪಿ.ಜಯಕುಮಾರ್, ಕೋಶಾಧಿಕಾರಿ ಎಲ್.ಆರ್. ಕವಿತ,ಸಿ ಆರ್ ಪಿ ಶಾಲಿನಿ ಇದ್ದರು. ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಗೌಡಳ್ಳಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಚ್.ಆನಂದಪ್ಪ, ತರಬೇತಿ ಸಂಪನ್ಮೂಲ ಶಿಕ್ಷಕರಾದ ಕೆ.ಮೂರ್ತಿ, ಬಿ.ಬಿ.ದಿನೇಶ್, ಹ್ಯೂಬರ್ಟ್ ಡಯಾಸ್, ಬಿ.ಎನ್.ಸುಜಾತ, ಎಸ್.ಎನ್. ವೇಣುಗೋಪಾಲ್ ಹಾಗೂ ಮಧುಕುಮಾರ್ ಅವರು ವಿಷಯವಾರು ಶಿಕ್ಷಕರೊಡನೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ನೀಲನಕ್ಷೆ ಮತ್ತು ಪ್ರಶ್ನೆ ಪತ್ರಿಕೆ ತಯಾರು ಮಾಡುವ ಕುರಿತು ಮಾಹಿತಿ ನೀಡಿದರು. ಮತ್ತಿತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*
Next Article *ಸಿಎಂ ಪಟ್ಟಕ್ಕಾಗಿ ಆಗ್ರಹಿಸಿ ಡಿಕೆಶಿ ಭಾವಚಿತ್ರದೊಂದಿಗೆ ಜೈಕಾರ : ತೊರೆನೂರು ಒಕ್ಕಲಿಗ ಸಮಾಜದಿಂದ ಗ್ರಾಮ ದೇವರಿಗೆ ಪೂಜೆ* 

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.