Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಹುದಿಕೇರಿ ಸರ್ಕಾರಿ ಶಾಲೆಯಲ್ಲಿ ಎನ್‍ಎಸ್‍ಎಸ್ ವಾರ್ಷಿಕ ಶಿಬಿರ : ಪತ್ರಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿ : ಪತ್ರಕರ್ತ ಜಗದೀಶ್ ಜೋಡುಬೀಟಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹುದಿಕೇರಿ ಸರ್ಕಾರಿ ಶಾಲೆಯಲ್ಲಿ ಎನ್‍ಎಸ್‍ಎಸ್ ವಾರ್ಷಿಕ ಶಿಬಿರ : ಪತ್ರಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿ : ಪತ್ರಕರ್ತ ಜಗದೀಶ್ ಜೋಡುಬೀಟಿ

ನವೆಂಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಗೋಣಿಕೊಪ್ಪ ನ.29 NEWS DESK : ಪತ್ರಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ಹೇಳಿದರು. ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ, ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್.ಎಸ್.ಎಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ವಾರ್ಷಿಕ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪತ್ರಿಕಾ ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಯುವಜನತೆ ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು, ಪತ್ರಿಕೆಗಳು ವಿಶ್ವಾಸಾರ್ಹ ಮಾಹಿತಿಯ ಮೂಲವಾಗಿದ್ದು, ಯುವ ಜನರಿಗೆ ವಿಭಿನ್ನ ವಿಷಯಗಳ ಬಗ್ಗೆ ತಿಳುವಳಿಕೆಯನ್ನು ನೀಡುತ್ತವೆ. ಪತ್ರಿಕೆಗಳನ್ನ ಹೆಚ್ಚು ಹೆಚ್ಚು ಓದುವುದರಿಂದ ಜ್ಞಾನ ಬಂಡಾರವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸುಗಳಿಸಲು ಸಾಧ್ಯವಾಗುತ್ತದೆ. ಆದರೆ ಇಂದಿನ ಯುವಜನತೆ ಪತ್ರಿಕೆ ಹಾಗೂ ಪುಸ್ತಕ ಓದುವುದನ್ನು ಕಡಿಮೆ ಮಾಡಿ, ಮೊಬೈಲ್ ಫೋನ್ ಕಡೆಗೆ ಆಕರ್ಷಿತರಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ತಮ್ಮ ಓದಿಕೆ ಪೂರಕವಾಗಿ, ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಲು ಹಿತಮಿತವಾಗಿ ಬಳಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಅಧ್ಯಯನ ಮತ್ತು ದೈನಂದಿನ ಚಟುವಟಿಕೆಗಳ ಕಡೆಗೆ ಗಮನಹರಿಸಲು ಕಷ್ಟವಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಅತ್ಯಂತ ವೇಗವಾಗಿ ಹರಡುತ್ತದೆ ಇದರಿಂದ ಯುವ ಜನರು ದಾರಿ ತಪ್ಪುವ ಸಾಧ್ಯತೆ ಇದೆ. ವೈಯಕ್ತಿಕ ಮಾಹಿತಿಯನ್ನು ಅತಿಯಾಗಿ ಹಂಚಿಕೊಳ್ಳುವುದರಿಂದ ಅದು ದುರುಪಯೋಗವಾಗುವ ಸಾಧ್ಯತೆ ಇರುತ್ತದೆ. ಆದುದರಿಂದ ಯುವ ಜನತೆ ಸಾಮಾಜಿಕ ಜಾಲತಾಣಗಳ ಸಕಾರಾತ್ಮಕ ಹಾಗೂ ನಕಾರಾತ್ಮಕ ಅಂಶಗಳ ಬಗ್ಗೆ ಅರಿತುಕೊಂಡು ಬಹಳ ಎಚ್ಚರಿಕೆಯಿಂದ ಮುನ್ನಡೆಯಬೇಕು ಎಂದರು. ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರು ಮಾತನಾಡಿ, ನೈತಿಕ ಮೌಲ್ಯಗಳು ಮರೆಯಾಗಿರುವ ಈ ಸಂದರ್ಭದಲ್ಲಿ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ, ಪರಿಸರ ಸಂರಕ್ಷಣೆ, ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ, ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದರು. ಹುದಿಕೇರಿ ಕ್ಲಸ್ಟರ್ ನ ಸಿಆರ್‍ಪಿ ಸೌಮ್ಯ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹುದಿಕೇರಿ ಗ್ರಾ.ಪಂ. ಸದಸ್ಯ ಕಿರಿಯಮಾಡ ಮಿಲನ್ ಗಣಪತಿ ಮಾತನಾಡಿ, ಹಿಂದೆ ಗುರುಕುಲ ಶಿಕ್ಷಣ ಪದ್ಧತಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಬದುಕಿನ ಮೌಲ್ಯಗಳನ್ನು ಕಲಿಯುತ್ತಿದ್ದರು. ಈಗಿನ ಇಂಗ್ಲಿಷ್ ಶಿಕ್ಷಣ ಪದ್ಧತಿ ಕೇವಲ ಅಂಕಗಳಿಗಷ್ಟೇ ಸೀಮಿತವಾಗಿರುವ ಸಂದರ್ಭದಲ್ಲಿ ಎನ್‍ಎಸ್‍ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮೌಲ್ಯಗಳನ್ನು ಬೆಳೆಸುತ್ತಿದೆ ಎಂದರು. ಕಾಫಿ ಬೆಳೆಗಾರರಾದ ಕೊಡಂಗಡ ರೋಷನ್, ಮಾದಿರ ಅಜಿತ್, ಮಂಡಂಗಡ ವೀಟು ದೇವಯ್ಯ, ಎನ್.ಎಸ್.ಎಸ್ ಅಧಿಕಾರಿಗಳಾದ ಮಂಡಂಗಡ ಎ. ಕುಶಾಲಪ್ಪ, ಪುತ್ತಾಮನೆ ಪೂಜಾ ಶರಣು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.