Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು  ಕನ್ನಡವನ್ನು ಶ್ರೀಮಂತಗೊಳಿಸಿದೆ : ಮುಖ್ಯಮಂತ್ರಿ  ಸಿದ್ದರಾಮಯ್ಯ : ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು  ಕನ್ನಡವನ್ನು ಶ್ರೀಮಂತಗೊಳಿಸಿದೆ : ಮುಖ್ಯಮಂತ್ರಿ  ಸಿದ್ದರಾಮಯ್ಯ : ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು

ನವೆಂಬರ್ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು NEWS DESK ನವೆಂಬರ್ 30 : ಕನ್ನಡ ಭಾಷೆ ರಾಜ್ಯದ  ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು  ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು   ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ  ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ  ಕಾರ್ಯಕ್ರಮವನ್ನು ಉದ್ಘಾಟಿಸಿ,  ಮಾತನಾಡಿದರು. *ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿ* ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. 1882 ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು,  ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ, ತುಳು,  ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ , ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ  ಅರೆಭಾಷೆಯಾಗಿದೆ ಎಂದರು. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದರು. *ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ* ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣಗೌಡರು, ನನಗೆ ಪರಿಚಿತರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು,  ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದರು. *50 ಲಕ್ಷ ರೂ.ಬೇಡಿಕೆಯನ್ನು ಈಡೇರಿಸಲಾಗುವುದು* ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ .ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ 50 ಲಕ್ಷ ರೂ.ಬೇಡಿಕೆಯನ್ನು ಈಡೇರಿಸಲಾಗುವುದು.  ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. *ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು: ಭರವಸೆ*

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು ಎಂದು ಭರವಸೆಯಿತ್ತರು. ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಡಾಧಾರ, ಯು. ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ  ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಚಿವ ಭೈರತಿ  ಸುರೇಶ್, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಂ.ಎಸ್. ಪೊನ್ನಣ್ಣ, ಶಾಸಕ ಮಂತರ್ ಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಅರೆಭಾಷೆ  ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯತ್ರಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸಂತ ಮೇರಿ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ

ನವೆಂಬರ್ 29, 2026

ಕುಶಾಲನಗರದಲ್ಲಿ ಬಸವೇಶ್ವರ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ ಆರಂಭ; ಕಳಸ ಮೆರವಣಿಗೆ, ಧಾರ್ಮಿಕ ಕೈಂಕರ್ಯಗಳಿಗೆ ಚಾಲನೆ

ನವೆಂಬರ್ 29, 2026

ಸುಂಟಿಕೊಪ್ಪದಲ್ಲಿ ನ.30ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ಕಾರ್ಯಕ್ರಮ

ನವೆಂಬರ್ 29, 2026

ಕುಶಾಲನಗರದಲ್ಲಿ ಬಸವೇಶ್ವರ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ ಆರಂಭ; ಕಳಸ ಮೆರವಣಿಗೆ, ಧಾರ್ಮಿಕ ಕೈಂಕರ್ಯಗಳಿಗೆ ಚಾಲನೆ

ನವೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.29: ಕುಶಾಲನಗರ ಪಟ್ಟಣದ ನಂಜುಂಡೇಶ್ವರ ಬಡಾವಣೆಯಲ್ಲಿ ದಾನಿಗಳು ನೀಡಿರುವ ಜಾಗದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಬಸವೇಶ್ವರ…

ಸುಂಟಿಕೊಪ್ಪದಲ್ಲಿ ನ.30ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ಕಾರ್ಯಕ್ರಮ

ನವೆಂಬರ್ 29, 2026

ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರಕಬೇಕು : ಶರಣ್ ಪೂಣಚ್ಚ ಮನವಿ

ನವೆಂಬರ್ 29, 2026

ಚೆಂಬು ಗ್ರಾಮದಲ್ಲಿ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ; ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಲು ಶ್ರಮಿಸಿ: ಎ.ಎಸ್. ಪೊನ್ನಣ್ಣ ಕರೆ

ನವೆಂಬರ್ 29, 2026

ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ ಸಮಾರಂಭ | 53 ವಿದ್ಯಾರ್ಥಿಗಳಿಗೆ ಸನ್ಮಾನ; ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು ಕೈಜೋಡಿಸಿ: ಕೆ.ಎ. ಶಶಿಕಿರಣ್

ನವೆಂಬರ್ 29, 2026

ಪ್ರತಾಪ್ ಸಿಂಹ ಹೇಳಿಕೆಗೆ ಸಿಪಿಐ(ಎಂ) ತೀವ್ರ ಖಂಡನೆ; ಮಲಯಾಳಿ ಸಮುದಾಯದ ವಿರುದ್ಧದ ಹೇಳಿಕೆ ಹಿಂಪಡೆಯಲು ಆಗ್ರಹ

ನವೆಂಬರ್ 28, 2026

ಕಳ್ಳಿರ ಬಾಣೆ ಮಂದ್‌ನಲ್ಲಿ ಸಂಭ್ರಮದ ಪುತ್ತರಿ ಕೋಲ್: ಕೊಡವ ಸಂಸ್ಕೃತಿ, ಸಾಂಪ್ರದಾಯಿಕ ಕಲೆಗಳ ಅನಾವರಣ

ನವೆಂಬರ್ 28, 2026

ಕಾರುಗುಂದದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ನವೆಂಬರ್ 28, 2026

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.