Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೊರೆನೂರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ವಿಜ್ಞಾನ ವಸ್ತು ಪ್ರದರ್ಶನ : ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಬಿಇಓ ಕೃಷ್ಣಪ್ಪ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೊರೆನೂರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ವಿಜ್ಞಾನ ವಸ್ತು ಪ್ರದರ್ಶನ : ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಬಿಇಓ ಕೃಷ್ಣಪ್ಪ ಕರೆ*

ಡಿಸೆಂಬರ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.1 NEWS DESK :  ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಮೂಲಕ ವಿಜ್ಞಾನದ‌ ಕೌತುಕ  ವಿನೂತನ ಪ್ರಯೋಗಗಳ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳುವ ಮೂಲಕ ವಿಜ್ಞಾನ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು  ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಕರೆ ನೀಡಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿನ ರಾಷ್ಟ್ರೀಯ‌ ಆವಿಷ್ಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಕುಶಾಲನಗರ ತಾಲ್ಲೂಕಿನ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು.  ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ  ಹೆಚ್ಚು ಆಸಕ್ತಿ ಹಾಗೂ ಕುತೂಹಲ ಹೊಂದಬೇಕು. ಇದರಿಂದ‌ ತಮ್ಮಲ್ಲಿರುವ ಸುಪ್ತ‌ ಪ್ರತಿಭೆಯನ್ನು ಹೊರಹಾಕಿ ಉತ್ತಮ ಭವಿಷ್ಯ ರೂಪಿಸಿ ಕೊಳ್ಳಲು ಸಾಧ್ಯ ಎಂದರು. ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಂಡರೆ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬಹುದು ಎಂದರು. ರಾಷ್ಟ್ರೀಯ‌ ಆವಿಷ್ಕಾರದ ಮುಖ್ಯ ಉದ್ದೇಶ ಕುರಿತು ಮಾಹಿತಿ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಇಂತಹ ವಿಜ್ಞಾನ ವಸ್ತು ಪ್ರದರ್ಶನವು ವಿದ್ಯಾರ್ಥಿಗಳನ್ನು ಗಣಿತ ,  ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳಲ್ಲಿ ಕುತೂಹಲವನ್ನು ಹೆಚ್ಚಿಸಿ ಅವರನ್ನು ಸಂಶೋಧನಾತ್ಮಕ ಪ್ರಯೋಗಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದಾಗಿದೆ ಎಂದರು. ವಿಜ್ಞಾನ ಆವಿಷ್ಕಾರವು ಮನುಕುಲಕ್ಕೆ ಸಹಕಾರಿಯಾಗಿದ್ದರೆ, ವಿಜ್ಞಾನಿಗಳ ಆವಿಷ್ಕಾರಗಳು ಮನುಕುಲಕ್ಕೆ ಅದ್ವಿತೀಯ ಆಕರಗಳಾಗುತ್ತವೆ ಎಂದರು. ಶಾಲಾ ಮುಖ್ಯ ಶಿಕ್ಷಕ ಬಿ.ಆರ್.ಸತ್ಯನಾರಾಯಣ ಮಾತನಾಡಿ, ಈ  ವಸ್ತು ಪ್ರದರ್ಶನವು ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿದೆ. ಮಕ್ಕಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ವಿಜ್ಞಾನ ಶಿಕ್ಷಕಿ ಬಿ.ಪಿ.ಸವಿತ, ಈ ವಸ್ತು ಪ್ರದರ್ಶನವು‌ ಮಕ್ಕಳಲ್ಲಿ ವಿಜ್ಞಾನ ಕಲಿಕೆಗೆ ಸಹಕಾರಿಯಾಗಿದೆ ಎಂದರು.  ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ.ಅಧ್ಯಕ್ಷ ಟಿ.ಎಚ್.ಗಣೇಶ್ ಮಾತನಾಡಿ, ಮಕ್ಕಳ ವಸ್ತು ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಅಣ್ಣಯ್ಯ, ಉಪಾಧ್ಯಕ್ಷೆ ಸುಷ್ಮಾ,  ಸದಸ್ಯರಾದ ರವಿಚಂದ್ರ, ದಿನೇಶ್, ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ  ಭಾಗ್ಯಲಕ್ಷ್ಮಿ, ಶಿರಂಗಾಲ ಸರ್ಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕಿ ಶೈಲಜಾ  ಸಂಪನ್ಮೂಲ ಶಿಕ್ಷಕಿಯರಾದ ಹೆಬ್ಬಾಲೆ ಶಾಲೆಯ ಶಿಕ್ಷಕಿ ರಮ್ಯ , ಚಿಕ್ಕ ಅಳುವಾರ ಶಾಲೆಯ ಶಿಕ್ಷಕಿ ರೇಖಾ, ಶಿಕ್ಷಕರು ಇದ್ದರು. ಶಿಕ್ಷಕ ಜಿ.ಶ್ರೀಹರ್ಷ ನಿರ್ವಹಿಸಿದರು. ಶಿಕ್ಷಕ ಟಿ.ಬಿ.ಮಂಜುನಾಥ್ ವಂದಿಸಿದರು. :: ಗಮನ ಸೆಳೆದ ವಿಜ್ಞಾನ ಪ್ರದರ್ಶನ :: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿಜ್ಞಾನ ಶಿಕ್ಷಕಿ ಬಿ.ಪಿ.ಸವಿತ ಅವರ‌ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು   ವಿಜ್ಞಾನ ವಿಷಯಕ್ಕೆ ಸಂಬಂದಿಸಿದಂತೆ ನಾನಾ ರೀತಿಯ ವಿಜ್ಞಾನ ಮಾದರಿಗಳು, ಪ್ರಯೋಗಗಳನ್ನು ಪ್ರದರ್ಶಿಸುವ ಮೂಲಕ  ಭಾಗವಹಿಸಿದ್ದ ಗಣ್ಯರು, ವಿದ್ಯಾರ್ಥಿಗಳು, ಪೋಷಕರ ಮೆಚ್ಚುಗೆ ಗಳಿಸಿದರು. ವಸ್ತು ಪ್ರದರ್ಶನದಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಪರಮಾಣುಗಳ ರಚನೆ, ವಿದ್ಯುತ್ಕಾಂತೀಯ ಕ್ರೇನ್‌, ಪರಿಸರ ಮಾಲಿನ್ಯ ನಿಯಂತ್ರಣ, ರಕ್ತ ಶುದ್ಧೀಕರಣ, ಸ್ವಯಂ ಚಾಲಿತ ಗಡಿ ಕಾಯುವ ಯಂತ್ರ, ಸೌರಶಕ್ತಿ ಬಳಕೆ, ಜಲಶಕ್ತಿ, ಬಾಹ್ಯಾಕಾಶ ಕ್ಷೇತ್ರ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ, ಸ್ವಯಂ ಚಾಲಿತ ಹನಿ ನೀರಾವರಿ ಪದ್ಧತಿ, ಜೀವಶಾಸ್ತ್ರ ಸೇರಿದಂತೆ ನಾನಾ ಬಗೆಯ ವಿಜ್ಞಾನ ಮಾದರಿ ಪ್ರದರ್ಶನ ಆಕರ್ಷಕವಾಗಿತ್ತು ಮತ್ತು ವಿದ್ಯಾರ್ಥಿಗಳು, ಪೋಷಕರು ಹಾಗೂ ವೀಕ್ಷಕರ ಗಮನ ಸೆಳೆಯಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.