
ಗೋಣಿಕೊಪ್ಪ ಡಿ.1 NEWS DESK : ಗೋಣಿಕೊಪ್ಪ ರೋಟರಿ ಸಂಸ್ಥೆ ವತಿಯಿಂದ ಬೆಂಗಳೂರಿನ ಎಫ್‍ಕೆಸಿಸಿಐ ಸಂಸ್ಥೆ ಅತ್ಯುತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ ಪಡೆದುಕೊಂಡ ಚೇದಂಡ ಸುಮಿ ಸುಬ್ಬಯ್ಯ ಅವರನ್ನು ಸನ್ಮಾನಿಸಲಾಯಿತು. ಗೋಣಿಕೊಪ್ಪ ಕೂಕುನ್ ಸಭಾಂಗಣದಲ್ಲಿ ರೋಟರಿ ಸಂಸ್ಥೆ ಜಿಲ್ಲಾ ಗವರ್ನರ್ ಭೇಟಿ ಹಿನ್ನಲೆ ನಡೆದ ಸರ್ವ ಸದಸ್ಯರ ಸಮಾಲೋಚನ ಸಭೆಯಲ್ಲಿ ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಪಿ.ಕೆ.ರಾಮಕೃಷ್ಣ, ಗೋಣಿಕೊಪ್ಪ ರೋಟರಿ ಸಂಸ್ಥೆ ಅಧ್ಯಕ್ಷ ಪಿ.ಕೆ.ವಿಜಯಕುಮಾರ್ ಸನ್ಮಾನಿಸಿ, ಗೌರವಿಸಿದರು. ಸಹಾಯಕ ಗವರ್ನರ್, ದಿಲಾನ್ ಚಂಗಪ್ಪ, ಝೋನಲ್ ರೆಫ್ಟಿನೆಂಟ್ ಕೆ.ಹೆಚ್.ಆದಿತ್ಯ, ಗೋಣಿಕೊಪ್ಪ ರೋಟರಿ ಕಾರ್ಯದರ್ಶಿ ಪ್ರಮೋದ್ ಕಾಮತ್, ಖಜಾಂಚಿ ಜಪ್ಪೆಕೋಡಿ ಸುಭಾಷಿಣಿ, ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರುಗಳು ಇದ್ದರು.









