
ಮಡಿಕೇರಿ ಡಿ.2 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದ ವತಿಯಿಂದ ಪ್ರತಿ ವರ್ಷವೂ ರೂಢಿ ಸಂಪ್ರದಾಯದಂತೆ ‘ಹುತ್ತರಿ ಹಬ್ಬ’ ಡಿ.4 ರಂದು ರೋಹಿಣಿ ನಕ್ಷತ್ರ ಕರ್ಕಾಟಕ ಲಗ್ನದಲ್ಲಿ ನಡೆಯಲ್ಲಿದ್ದು, ಅಂದು ರಾತ್ರಿ 8.40 ಗಂಟೆಗೆ ನೆರೆ ಕಟ್ಟುವುದು, ರಾತ್ರಿ 9.40 ಗಂಟೆಗೆ ಕದಿರು ಕುಯ್ಯುವುದು ನಂತರ ಪ್ರಸಾದ ವಿತರಣೆ ನಡೆಯಲಿದೆ. ಡಿ.5 ರಂದು ನಗರದ ಕೋಟೆ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ‘ಹುತ್ತರಿ ಕೋಲಾಟ’ ನಡೆಯಲಿದೆ. ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ಜರುಗುವ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ವತಿಯಿಂದ ಕೋರಿದೆ.









