
ಮಡಿಕೇರಿ ಡಿ.2 NEWS DESK : ಮಡಿಕೇರಿಯ ಕಲಾವಿದೆ ಚಿತ್ರಾ ರವಿಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಸುದ್ದಿ ಪತ್ರಿಕೆಗಳ ಸಂಘದಿಂದ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಕಲಾವಿದೆ ಚಿತ್ರಾ ರವಿಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು.









