Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು : ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ  : ಸಿಎಂ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು : ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ  : ಸಿಎಂ ಸಿದ್ದರಾಮಯ್ಯ

ಡಿಸೆಂಬರ್ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಡಿ.2 NEWS DESK : ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿವೇಶನ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು. :: ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ ::  ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು,ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ.ವೆರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು , ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು , ಪಶುಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು. ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು. :: ರಾಜ್ಯ ಸಂಸದರ ಸಭೆ ::  ಪೌಲ್ಟ್ರಿ 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶುಆಹಾರ 4-5 ಲಕ್ಷ ಟನ್ ಹಾಗೂ 7-10 ಲಕ್ಷದ ಎಥನಾಲ್ ಗಾಗಿ ಬಳಸುತ್ತಾರೆ. ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು .ಎಥನಾಲ್ ಹಾಗೂ ಎಂ ಎಸ್ ಪಿ, ಎಫ್ ಆರ್ ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು, ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ ಎಂದರು. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇ ಉಪಸ್ಥಿತರಿರುತ್ತಾರೆ ಎಂದರು. :: ಹೈ ಕಮಾಂಡ್ ಭೇಟಿ ::  ಸಮಯ ಸಿಕ್ಕು ಭೇಟಿಗೆ ಅವಕಾಶ ನೀಡಿಯೇ ಹೈ ಕಮಾಂಡ್ ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರನ್ನು ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತೇವೆ ಎಂದರು. ಉಪಮುಖ್ಯಮಂತ್ರಿಗಳ ಮನೆಯ ಉಪಾಹಾರದಲ್ಲಿ ಮಾಂಸಾಹಾರವಿತ್ತು, ನಮ್ಮ ಮನೆಯಲ್ಲಿ ಸಸ್ಯಾಹಾರದ ಉಪಾಹಾರವಿತ್ತು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ ಎಂದರು. ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಿಎಲ್. ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ ಎಂದರು. :: ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು ::  ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028 ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದರು. ಪರಮೇಶ್ವರ್ ಅವರು ಸಿಎಂ ಹಾಗೂ ಡಿಸಿಎಂ ಅವರನ್ನು ಉಪಾಹಾರಕ್ಕೆ ಕರೆಯುವುದಾಗಿ ಹೇಳಿರುವ ಬಗ್ಗೆ ಮಾತನಾಡಿ ಅದನ್ನು ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತಾರೆ ಎಂದು ಹೇಳಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಶಾರದಾ ಪೂಜೆ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.13 NEWS DESK : ವಿರಾಜಪೇಟೆ ನಗರದ ಶಿವೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ವೈಭವದ ನವರಾತ್ರಿ…

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಅ.15ರಂದು ಮೂನಾಡ್‌ನಲ್ಲಿ ಸಿಎನ್‌ಸಿಯ 6ನೇ ಶಾಂತಿಯುತ ಮಾನವ ಸರಪಳಿ; ಕೊಡವ ಜನಾಂಗದ ಅಸ್ತಿತ್ವ, ಭೂಮಿ, ಭಾಷೆ ಮತ್ತು ಸಂಸ್ಕೃತಿ ರಕ್ಷಣೆಗೆ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 13, 2026

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.