Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ‘ವಿಪ್ರ ಕ್ರೀಡೋತ್ಸವ’*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ‘ವಿಪ್ರ ಕ್ರೀಡೋತ್ಸವ’*

ಡಿಸೆಂಬರ್ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.2 NEWS DESK : ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಯೋಗದೊಂದಿಗೆ ವಿಪ್ರ ಬಾಂಧವರಿಗಾಗಿ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದ ‘ವಿಪ್ರ ಕ್ರೀಡೋತ್ಸವ’ವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಾಮಚಂದ್ರ ಮೂಗೂರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿಪ್ರ ಬಾಂಧವರಿಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸೌಹಾರ್ದಯುತವಾಗಿ ಬೆರೆಯಲು ಇದೊಂದು ಸದವಕಾಶವಾಗಿದ್ದು, ವಿಪ್ರ ಬಾಂಧವರು ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಪ್ರ ಕ್ರೀಡೋತ್ಸವವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಮಾತನಾಡಿ, ಡಿ.7ರಂದು ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಸ್ಪರ್ಧೆಗಳು ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣ(ಮ್ಯಾನ್ಸ್ ಕಾಂಪೌಂಡ್)ದÀಲ್ಲಿ ವಿವಿಧ ವಿಭಾಗಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು. ಪುರುಷರ ವಿಭಾಗ ಹಾಗೂ ಮಹಿಳೆಯರ ವಿಭಾಗದಲ್ಲಿ ಸಿಂಗಲ್ಸ್ ಹಾಗೂ ಡಬಲ್ಸ್, 50 ವರ್ಷ ಮೇಲ್ಪಟ್ಟವರ ವಿಭಾಗ, ಬಾಲಕ-ಬಾಲಕಿಯರ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಅದೇ ದಿನ ಬೆಳಗ್ಗೆ 9 ಗಂಟೆಗೆ ಸ್ಥಳದಲ್ಲೇ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಅವಕಾಶವನ್ನು ಮಾಡಿಕೊಡಲಾಗಿದೆಯೆಂದು ಹೇಳಿದರು. ವಿರಾಜಪೇಟೆಯಲ್ಲಿ ಡಿ.14 ರಂದು ಕ್ರಿಕೆಟ್-ಡಿ.14ರಂದು ಜಿಲ್ಲೆಯ ವಿಪ್ರ ಬಾಂಧವರಿಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ವಿರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಪಂದ್ಯಾವಳಿ ಆರಂಭಗೊಳ್ಳಲಿದ್ದು, ತಂಡಗಳು ಡಿ.5ರ ಒಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮಾಹಿತಿ ನೀಡಿ, ಇಲ್ಲಿಯವರೆಗೆ 9 ತಂಡಗಳು ನೋಂದಾಯಿಸಿಕೊಂಡಿರುವುದಾಗಿ ಮಾಹಿತಿ ನೀಡಿದರು. ಪಂದ್ಯಾವಳಿಯ ನಡುವೆ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಪ್ರ ಸಮಾಜದ ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಮೈದಾನದ ಮತ್ತೊಂದು ಭಾಗದಲ್ಲಿ ಜಿಲ್ಲಾ ಮಟ್ಟದ ಹಗ್ಗ-ಜಗ್ಗಾಟ ಸ್ಪರ್ಧೆಯು ಸಹ ನಡೆಯಲಿದೆ. ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು. ಅಲ್ಲದೇ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ವಿವಿಧ ಕ್ರೀಡೋತ್ಸವದ ಅಂಗವಾಗಿ ತಾಲ್ಲೂಕು ಮಟ್ಟದ ಕ್ರೀಡೆಗಳು ನಡೆಯಲಿದ್ದು, ಇದರಲ್ಲಿ ಒಳಾಂಗಣ ಕ್ರೀಡೆಗಳಾದ ಚೆಸ್ ಮತ್ತು ಕೇರಂ ಹಾಗೂ ಇನ್ನಿತರ ಮನೋರಂಜನಾ ಕ್ರೀಡೆಗಳು ನಡೆಯಲಿದೆ. ಚೆಸ್ ಹಾಗೂ ಕೇರಂನಲ್ಲಿ ವಿಜೇತರಾಗುವ ತಾಲ್ಲೂಕು ಮಟ್ಟದ ಸ್ಪರ್ಧಿಗಳು ಜನವರಿಯಲ್ಲಿ ಮಡಿಕೇರಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆಯುತ್ತಾರೆ ಎಂದರು. :: ಸಾಧಕರಿಗೆ ಸನ್ಮಾನ :: ಅದೇ ದಿನ ಜಿಲ್ಲೆಯ ವಿಪ್ರ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಲಾಗಿದೆ. ಕ್ರೀಡೋತ್ಸವದಲ್ಲಿ ವಿಜೇತರಾಗುವ ಎಲ್ಲಾ ಸ್ಪರ್ಧಿಗಳಗೆ ಅದೇ ದಿನ ನಡೆಯುವ ಸಮಾರೋಪ ಸಮಾರಂಭದಲ್ಲಿ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು ಬಿ.ಕೆ.ಜಗದೀಶ್ ಹೇಳಿದರು. :: ಡಿ.21 ರಂದು ಮಡಿಕೇರಿ ತಾಲ್ಲೂಕು ಮಟ್ಟದ ಸ್ಪರ್ಧೆ :: ಇದೇ ಡಿ.21 ರಂದು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ವಿಪ್ರಬಾಂಧವರಿಗಾಗಿ ಚೆಸ್ ಮತ್ತು ಕೇರಂ ಪಂದ್ಯಾವಳಿ ನಡೆಯಲಿದೆಯೆಂದು ಮಾಹಿತಿಯನ್ನಿತ್ತರು. ಸುದ್ದಿಗೋಷ್ಠಿಯಲ್ಲಿ ನಿಧಿಯ ಉಪಾಧ್ಯಕ್ಷ ಭರತೇಶ್ ಕಂಡಿಗೆ, ನಿರ್ದೇಶಕರಾದ ಎಂ.ಎನ್.ಶಾಮಲ ಹಾಗೂ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.