Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರ : ಹೃದಯಾಘಾತವಾದರೆ ಸಮಯವೇ ಜೀವನ : ಡಾ.ಅಬ್ದುಲ್ ಅಜೀಜ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರ : ಹೃದಯಾಘಾತವಾದರೆ ಸಮಯವೇ ಜೀವನ : ಡಾ.ಅಬ್ದುಲ್ ಅಜೀಜ್*

ಡಿಸೆಂಬರ್ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಡಿ.3 : ಹೃದಯಾಘಾತದ ಸಂದರ್ಭ “ಸಮಯವೇ ಜೀವನ”, ಯಾಕೆಂದರೆ ತುರ್ತು ಪರಿಸ್ಥಿತಿಯಲ್ಲಿ ನೀಡುವ ತಕ್ಷಣದ ನೆರವು ಮತ್ತು ವೈದ್ಯಕೀಯ ಚಿಕಿತ್ಸೆ ರೋಗಿಯ ಜೀವ ಉಳಿಸುವ ಸಾಧ್ಯತೆಯನ್ನು  ಹೆಚ್ಚಿಸುತ್ತದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಅಬ್ದುಲ್ ಅಜೀಜ್ ಅವರು ತಿಳಿಸಿದ್ದಾರೆ. ನಗರದ ಫೀಲ್ಡ್  ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಕಾಲೇಜ್ ನಲ್ಲಿ ನಡೆದ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೃದಯಾಘಾತದ ಲಕ್ಷಣಗಳನ್ನು ಸರಿಯಾಗಿ ಗುರುತಿಸಬೇಕು, ಸೂಕ್ತ ಕ್ರಮ ಕೈಗೊಂಡರೆ ಜೀವ ರಕ್ಷಣೆ ಸಾಧ್ಯ. ಹೃದಯ ಸ್ತಂಭನದ ಕುರಿತು ಜಾಗೃತಿ, ತುರ್ತು ನೆರವು ಹಾಗೂ ಆರೋಗ್ಯಕರ ಜೀವನಶೈಲಿ ನಮ್ಮ ಹೃದಯದ ರಕ್ಷಕರು. ಪ್ರತಿಯೊಬ್ಬರು ಪ್ರಥಮ ಚಿಕಿತ್ಸೆ ಕುರಿತು ತರಬೇತಿ ಪಡೆದಲ್ಲಿ ಇನ್ನೊಬ್ಬರ ಜೀವನವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಅಗತ್ಯತೆಯ ಕುರಿತು ಮಾಹಿತಿ ಮತ್ತು  ಆಪತ್ಕಾಲದಲ್ಲಿ ಸಿಲುಕಿದವರ ಪ್ರಾಣವನ್ನು ಉಳಿಸಬಹುದಾದ ಕ್ರಮಗಳ ಬಗ್ಗೆ ಡಾ.ಅಬ್ದುಲ್ ಅಜೀಜ್ ಸಲಹೆ ನೀಡಿದರು. ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಫೀಲ್ಡ್  ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ. ಅವರು ಪ್ರಥಮ ಚಿಕಿತ್ಸೆ ತರಬೇತಿ ಜೀವ ರಕ್ಷಿಸುವ ಕೌಶಲ್ಯ. ಅಪಘಾತ ಅಥವಾ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ಸರಿಯಾದ ಕ್ರಮ ಕೈಗೊಳ್ಳುವುದರಿಂದ ಅನೇಕ ಜೀವಗಳನ್ನು ಉಳಿಸಬಹುದು. ಪ್ರಥಮ ಚಿಕಿತ್ಸೆಯ ಜ್ಞಾನ ಎಂಬುವುದು ಕೇವಲ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ಸೀಮಿತವಾಗಿರದೇ ಸಮಾಜದ ಎಲ್ಲಾ ನಾಗರೀಕರ ಜವಾಬ್ದಾರಿಯಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ನಾಗರೀಕರು ಈ ರೀತಿಯ ತರಬೇತಿಯನ್ನು ಸದುಪಯೋಗಪಡಿಸಿಕೊಂಡು ಸಂಕಷ್ಟದಲ್ಲಿರುವವರ ಜೀವವನ್ನು ಉಳಿಸುವುದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಶೈಕ್ಷಣಿಕ ಕ್ಷೇತ್ರದ ಭಾಗವಾದ ಎನ್‌ಸಿಸಿ ವಿದ್ಯಾರ್ಥಿಗಳು ಇಂತಹ ತರಬೇತಿಗಳಲ್ಲಿ ಭಾಗವಹಿಸಿ, ಕೌಶಲ್ಯವನ್ನು ಪಡೆದುಕೊಳ್ಳಬೇಕು. ಆ ಮೂಲಕ ಗ್ರಾಮೀಣ ಭಾಗದ ಪ್ರದೇಶಗಳಿಗೆ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನೆರವಾಗಲು ಸಾಧ್ಯವಾಗುತ್ತದೆ ಎಂದರು. ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ವಿಜಯ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮೂಲಕ ಹೃದಯಘಾತದ  ಸಂದರ್ಭ ಸಿಪಿಆರ್ ಪ್ರಥಮ ಚಿಕಿತ್ಸೆ, ಪಾರ್ಶ್ವವಾಯು, ನಾಯಿ ಕಡಿತ, ಮೂರ್ಚೆರೋಗ, ವಿಷಪೂರಿತ ಹಾವು ಕಡಿತ, ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿದಾಗ, ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಪ್ರಯತ್ನಿಸಿದಾಗ ಮತ್ತಿತರ ತುರ್ತು ಸಂದರ್ಭಗಳಲ್ಲಿ ಹೇಗೆ ಪ್ರಥಮ ಜೀವ ರಕ್ಷಕರಾಗಿ ಚಿಕಿತ್ಸೆಯನ್ನು ನೀಡಿ, ಪ್ರಾಥಮಿಕ ಹಂತದ ಚಿಕಿತ್ಸಾ ಕ್ರಮವನ್ನು ನಿರ್ವಹಿಸಬಹುದು ಎಂಬುವುದನ್ನು ವಿವರಿಸಿದರು. ಶಿಬಿರದಲ್ಲಿ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಸಿಬ್ಬಂದಿಗಳು, ಉಪನ್ಯಾಸಕರಾದ ಖುರ್ಷಿದ ಭಾನು, ಎನ್‌ಸಿಸಿ ವಿದ್ಯಾರ್ಥಿ ನಾಯಕರಾದ ಕೆ.ಎಂ.ತಿಮ್ಮಯ್ಯ, ವಂಶಿಕ್ ಸೋಮಣ್ಣ, ಸೇಜಲ್, ಎಂ.ಎಸ್.ಆಶಿತ, ಬೋಧಕ-ಬೋಧಕೇತರ ವರ್ಗ, ಎನ್‌ಸಿಸಿ ಕೆಡೆಟ್‌ಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಎನ್‌ಸಿಸಿ ನಾಯಕಿ ಚರಿಷ್ಮಾ ರೈ ಹಾಗೂ ಕೆಡೆಟ್ ರಕ್ಷಿತಾ ಪ್ರಾರ್ಥಿಸಿದರು. ಕೆಡೆಟ್ ಸಂದೇಶ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*

ಆಗಷ್ಟ್ 30, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.29 NEWS DESK  : ಜಿಲ್ಲೆಯಲ್ಲಿ ಇನ್‍ಫ್ಲುಯೆಂಜಾ (ಎಚ್1ಎನ್1) ವೈರಸ್ ನಿಂದ ಹರಡುವ ಜ್ವರ ತಡೆಯಲು ಆರೋಗ್ಯ ಇಲಾಖೆಯು…

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.