
ಮಡಿಕೇರಿ ಡಿ.4 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿರಾಜಪೇಟೆಯ ರಸ್ತೆಗಳನ್ನು ಪರಿಶೀಲಿಸಿದರು. ಪುರಸಭಾ ವ್ಯಾಪ್ತಿಯಲ್ಲಿ ಹಾದು ಹೋಗುವ ರೂ.5.60 ಕೋಟಿಗಳ ಅನುದಾನದಲ್ಲಿ ಅಭಿವೃದ್ಧಿಗೊಳ್ಳುತ್ತಿರುವ, ಲೋಕೋಪಯೋಗಿ ರಸ್ತೆಗಳ ವೀಕ್ಷಣೆಯನ್ನು ಸ್ವತಃ ಕಾಲ್ನಡಿಗೆಯಲ್ಲಿ ಮೂಲಕ ತೆರಳಿ, ಅಧಿಕಾರಿಗಳ ತಂಡದೊಂದಿಗೆ ಚರ್ಚಿಸುತ್ತಾ ಅಗತ್ಯ ಇರುವ ಎಲ್ಲಾ ಕಡೆ ಸ್ವತಃ ಮುತುವರ್ಜಿಯಿಂದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕರು, ಈಗ ಮಳೆ ನಿಂತಿರುವ ಕಾರಣ ತುರ್ತು ಗತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅತಿ ಶೀಘ್ರದಲ್ಲಿ ಈ ಕಾಮಗಾರಿ ಪೂರ್ಣಗೊಂಡು ರಸ್ತೆ ಸಂಚಾರ ನಾಗರಿಕರಿಗೆ ಸುಗಮವಾಗಲಿದೆ ಎಂದು ಹೇಳಿದರು. ಈ ಬಾರಿಯ ತೀವ್ರ ಮಳೆಯಿಂದಾಗಿ ರಸ್ತೆಗಳು ಹಾನಿಯಾಗಿದ್ದು ಸಾರ್ವಜನಿಕರು ಕೆಲಸ ಪೂರ್ಣಗೊಳ್ಳುವ ತನಕ ಸಹಕರಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ನಗರ ಅಧ್ಯಕ್ಷರು ಮಾದಂಡ ತಿಮ್ಮಯ್ಯ, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಸದಸ್ಯರು ಹಾಗೂ ಪಕ್ಷದ ಮುಖಂಡರು,ಯುವ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.









