Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಪುತ್ತರಿ ಹಬ್ಬದ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಪುತ್ತರಿ ಹಬ್ಬದ ಸಂಭ್ರಮ*

ಡಿಸೆಂಬರ್ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಡಿ.4 NEWS DESK : ಕೊಡಗಿನಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲ್ಪಡುವ ಪುತ್ತರಿ (ಹುತ್ತರಿ) ಹಬ್ಬದ ಸಂಭ್ರಮಕ್ಕೆ ನಾಡು ಸಜ್ಜಾಗಿದೆ. ಈ ಬಾರಿ ಡಿ.4 ರಂದು (ಇಂದು ಗುರುವಾರ ) ದಂದು ಹುಣ್ಣಿಮೆಯ ದಿನ ಕೊಡಗಿನ ಹುತ್ತರಿ (ಪುತ್ತರಿ) ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಕೊಡಗಿನಾದ್ಯಂತ ಧಾನ್ಯಲಕ್ಷ್ಮಿಯನ್ನು ಮನೆ ತುಂಬಿಸಿಕೊಳ್ಳುವ ಹಬ್ಬ ಹುತ್ತರಿ ಹಬ್ಬ ಕೊಡಗಿನಲ್ಲಿ ಭತ್ತದ ಬೆಳೆ ತೆನೆಬಿಟ್ಟು ಹೊಂಬಣ್ಣಕ್ಕೆ ತಿರುಗುತ್ತಿದ್ದರೆ ನಡುಕ ಹುಟ್ಟಿಸುವ ಚಳಿಯ ನಡುವೆ ಕೊಡಗಿನ ಹುತ್ತರಿ ಹಬ್ಬದ ಆಚರಣೆ. ಗಡಚಿಕ್ಕುವ ಪಟಾಕಿಗಳ ಸದ್ದು, ಮನೆಯಲ್ಲಿ ವಿಶೇಷ ತಿನಿಸುಗಳು, ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಮನೆ ಮಂದಿಯೆಲ್ಲಾ ಸಂಭ್ರಮದಿಂದ ಪಾಲ್ಗೊಂಡು ಆಚರಿಸುವ ಹುತ್ತರಿ (ಪುತ್ತರಿ) ಹಬ್ಬ ಕೊಡಗಿನ ವಿಶೇಷ. ಕೊಡವ ನುಡಿಯ ಪುತ್ತರಿ(ಪುದಿಯ ಅರಿ) ಅಂದರೆ ಹೊಸ ಅಕ್ಕಿ. ಇದು ಕನ್ನಡದಲ್ಲಿ ಹುತ್ತರಿ ಎಂದಾಗಿದೆ. ವ್ಯವಸಾಯವನ್ನೇ ಮಾಡಿ ಬದುಕುವ ಬಹುತೇಕ ರೈತಾಪಿ ವರ್ಗ ಪೈರುಗಳು ಬೆಳೆದಾಗ ಶಾಸ್ತ್ರೋಕ್ತವಾಗಿ ಕುಯ್ದು ತಂದು ಮನೆಯನ್ನು ತುಂಬಿಸಿಕೊಳ್ಳುವುದೇ ಈ ಹುತ್ತರಿ ಹಬ್ಬದ ವೈಶಿಷ್ಟ್ಯ. ಮೊದಲು ಕುಟುಂಬದ ಹಿರಿಯ ಮನೆಮಂದಿಯೊಂದಿಗೆ ನೆರೆ ಕಟ್ಟುವ ಕಾರ್ಯದಲ್ಲಿ ತೊಡಗುತ್ತಾರೆ. ಆ ಬಳಿಕ ನಿಗದಿ ಪಡಿಸಿದ ಸಮಯಕ್ಕೆ ಗದ್ದೆಗೆ ತೆರಳಿ ಭತ್ತದ ಕದಿರುಗಳನ್ನು ಪೂಜಿಸಿ ಅದಕ್ಕೆ ಹಣ್ಣು ಕಾಯಿ,ಹಾಲು ಜೇನುಗಳನ್ನು ಸಮರ್ಪಿಸುತ್ತಾನೆ. ಆ ಬಳಿಕ “ಪೊಲಿ ಪೊಲಿಯೇ ದೇವಾ” ಎಂದು ಕೂಗುತ್ತಾ ಶಾಸ್ತ್ರೋಕ್ತವಾಗಿ ಭತ್ತದ ತೆನೆಗಳನ್ನು ಕತ್ತರಿಸಿ ತಂದು ದೇವಾಲಯವನ್ನು, ಮನೆಯನ್ನು ತು0ಬಿಕೊಳ್ಳುತ್ತಾರೆ. ಮತ್ತೊಂದೆಡೆ ಮಕ್ಕಳು, ಯುವಕರು ಪಟಾಕಿ ಸಿಡಿಸುವುದರಲ್ಲಿ ತಲ್ಲೀನರಾಗುತ್ತಾರೆ. ಒಟ್ಟಿನಲ್ಲಿ ಎಲ್ಲೆಲ್ಲೂ ಪಟಾಕಿ, ಬಾಣಬಿರುಸುಗಳ ಸಂಭ್ರಮ ಹುತ್ತರಿಯ ರಾತ್ರಿ ಸಮಯದ ಪರಿವೆಯೇ ಇಲ್ಲದೆ ವಿಶೇಷ ಊಟೋಪಚಾರಗಳು ನಡೆಯುತ್ತವೆ. ಹುತ್ತರಿಯಂದು ಅಡುಗೆ ವೈವಿಧ್ಯಮಯವಾಗಿದ್ದು.ಬಾಳೇಹಣ್ಣಿನಿಂದ ತಯಾರಿಸಿದ ‘ತಂಬಿಟ್ಟು’ ಸವಿಯುತ್ತಾರೆ. ಮೊದಲೆಲ್ಲ ಹುತ್ತರಿ ಹಬ್ಬವೆಂದರೆ ವಾರಗಟ್ಟಲೆ ಸಂಭ್ರಮ, ಹಬ್ಬ ಒಂದು ದಿನವಾದರೂ ಅದಕ್ಕೆ ಸಂಬಂಧಿಸಿ ಆಚರಣೆಗಳೂ ವಾರ ಗಟ್ಟಲೆ ಜರಗುತ್ತಿದ್ದವು. ಹುತ್ತರಿಯ ನಂತರ ದಿನಗಳಲ್ಲಿ ಮಂದ್ ಎಂಬ ಊರ ಕ್ರೀಡಾಂಗಣದಲ್ಲಿ ಊರವರೆಲ್ಲರೂ ಸೇರಿ ಹಾಡುತ್ತಾ, ನೃತ್ಯ, ಕುಣಿತ ಮತ್ತು ಶೌರ್ಯ ಪ್ರದರ್ಶನ ಹೋರಾಟಗಳಲ್ಲಿ ನಿರತರಾಗಿರುತ್ತಿದ್ದರು. ಎರಡೂ ಕೈಗಲಲ್ಲಿ ಬೆತ್ತದ ಬಾರು ಕೋಲುಗಳನ್ನು ಹಿಡಿದು ಅವುಗಳನ್ನು ವಿವಿಧ ಭಂಗಿಗಳಲ್ಲಿ ಕ್ರಮಬದ್ಧವಾಗಿ ಬೀಸುತ್ತಾ ಕುಣಿಯುವ ಕೋಲಾಟ ‘ಹುತ್ತರಿ ಕೋಲಾಟ’ವೆಂದೇ ಪ್ರಸಿದ್ಧಿ ಪಡೆದಿದೆ. ನಾಪೋಕ್ಲುವಿನ ಬಿದ್ದಾಟಂಡ ವಾಡೆಯಲ್ಲಿ ಜನಪ್ರಿಯ ಹುತ್ತರಿ ಕೋಲಾಟ ನಡೆಯುತ್ತದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಹುತ್ತರಿ ಕೋಲಾಟ ನಡೆಯುತ್ತದೆ. ಕ್ರೀಡೆ, ಕುಣಿತಗಳು ವರ್ಷದಿಂದ ವರ್ಷಕ್ಕೆ ಗ್ರಾಮಾಂತರ ಪ್ರದೇಶಗಳಿಂದ ಮರೆಯಾಗತೊಡಗಿದೊಡಗಿನಲ್ಲಿ ಮಾತ್ರವೇ ಕಾಣಬಹುದಾದ ಹುತ್ತರಿ ಹಬ್ಬವು ಅಲ್ಲಿನ ಸಂಪ್ರದಾಯ ಕೃಷಿ ಚಟುವಟಿಕೆಯ ಮೇಲಿನ ಆಸಕ್ತಿ ಇತ್ಯಾದಿಗಳ ಪ್ರತಿರೂಪವಾಗಿದೆ. ಪೊಯಲೆ ಪೊಯಿಲೇ ಎಂಬ ಕರೆಯ ಮೂಲಕ ನಾಡಿನೆಲ್ಲೆಡೆ ಹುತ್ತರಿ ಸಂಭ್ರಮ ಮುಗಿಲು ಮುಟ್ಟುತ್ತದೆ. ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದ ಆವರಣದಲ್ಲಿ ನಾಡಿನ ಹದಿಮೂರು ತಕ್ಕಮುಖ್ಯಸ್ಥರು, ದೇಗುಲದ ತಕ್ಕಮುಖ್ಯಸ್ಥರು ಭಕ್ತಜನ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸಂಪ್ರದಾಯದಂತೆ ಅಮ್ಮಂಗೇರಿ ಜ್ಯೋತಿಷ್ಯರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹುತ್ತರಿ ದಿನ ಮತ್ತು ಆಚರಣೆಯ ಸಮಯವನ್ನು ನಿಗದಿಪಡಿಸಿದ್ದಾರೆ. ಕೊಡಗಿನ ಸುಗ್ಗಿಯ ಹಬ್ಬ `ಪುತ್ತರಿ’ಯನ್ನು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ಡಿ.4 ರಂದು (ಇಂದು) ಗುರುವಾರ ರೋಹಿಣಿ ನಕ್ಷತ್ರದ ಹುಣ್ಣಿಮೆಯ ದಿನ ಹುತ್ತರಿ ಹಬ್ಬ ಆಚರಣೆ. ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು, ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು. ಅನ್ನಪ್ರಸಾದಕ್ಕೆ 10.10 ಗಂಟೆಗೆ ಮುಹೂತ9 ನಿಗದಿಪಡಿಸಲಾಯಿತು. ಸಾರ್ವಜನಿಕರಿಗೆ ರಾತ್ರಿ 8.40 ಗಂಟೆಗೆ ನೆರೆ ಕಟ್ಟುವುದು,ರಾತ್ರಿ 9.40 ಗಂಟೆಗೆ ಕದಿರು ತೆಗೆಯುವುದು,ಭೋಜನಕ್ಕೆ ರಾತ್ರಿ 10.40 ಗಂಟೆಗೆ ಮುಹೂರ್ತ ನಿಗದಿಪಡಿಸಲಾಯಿತು. ಇದಕ್ಕೂ ಮುನ್ನ ಡಿ.4 ರಂದು ಗುರುವಾರ ಹಗಲು ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕಲ್ಲಾಡ್ಚ ಹಬ್ಬ ನಡೆಯಲಿದೆ.

ವರದಿ : ದುಗ್ಗಳ ಸದಾನಂದ. 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.