Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚತುಷ್ಪಥ ರಸ್ತೆ ಕಾಮಗಾರಿ ಆರಂಭ : ಸುಗಮ ಸಾರಿಗೆ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚತುಷ್ಪಥ ರಸ್ತೆ ಕಾಮಗಾರಿ ಆರಂಭ : ಸುಗಮ ಸಾರಿಗೆ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*

ಡಿಸೆಂಬರ್ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.4 NEWS DESK : ಶ್ರೀರಂಗಪಟ್ಟಣದಿಂದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿ ವರೆಗೆ ನಾಲ್ಕು ಪಥದ ರಸ್ತೆ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಬಸವನಹಳ್ಳಿಯಿಂದ ಸಂಪಾಜೆವರೆಗೆ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಸುಗಮ ಸಾರಿಗೆ ಸಂಚಾರಕ್ಕೆ ಅಗತ್ಯ ಮುನ್ನೆಚ್ಚರ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಅವರ ಸಭಾಂಗಣದಲ್ಲಿ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಶಾಲನಗರದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಿಂದ ಸಂಪಾಜೆ ವರೆಗೆ ರಸ್ತೆ ಸುರಕ್ಷತೆ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು. ಉಬ್ಬುಗಳ ನಿರ್ಮಾಣ, ಅಗತ್ಯವಿರುವ ಕಡೆಗಳಲ್ಲಿ ಜೀಬ್ರಾ ಕ್ರಾಸ್ ಬರೆಸುವುದು, ಉಬ್ಬುಗಳ ನಿರ್ಮಾಣ, ಬ್ಲಾಕ್ ಸ್ಪಾಟ್ ಗುರುತಿಸುವುದು, ತಿರುವುಗಳಲ್ಲಿ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಕುಶಾಲನಗರದಿಂದ ಸಂಪಾಜೆವರೆಗೆ ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಹೆಚ್ಚಿನ ಗಮನಹರಿಸಬೇಕು. ಈ ಭಾಗದ ರಸ್ತೆಯಲ್ಲಿ ದೀಪ ಅಳವಡಿಸುವುದು. ರಸ್ತೆ ಬದಿ ಗಿಡಗಂಟೆಗಳನ್ನು ಕಡಿಯುವುದು, ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕ ಹಾಗೂ ಉಬ್ಬುಗಳ ನಿರ್ಮಾಣ ಮಾಡಬೇಕು ಎಂದು ಹೇಳಿದರು. ಮಡಿಕೇರಿಯಿಂದ ಬೋಯಿಕೇರಿವರೆಗೆ ಒಂದು ರೀತಿ ಒತ್ತಡದ ರಸ್ತೆಯಾಗಿದ್ದು, ಈ ಭಾಗದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಮತ್ತಷ್ಟು ನಿಗಾವಹಿಸಬೇಕು ಎಂದು ಹೇಳಿದರು. ಹೆದ್ದಾರಿಗಳಲ್ಲಿ ಸೈನ್ ಬೋರ್ಡ್ ಅಳವಡಿಸುವುದು, ಮೂರ್ನಾಡು ಗೋಣಿಕೊಪ್ಪದಲ್ಲಿ ವಾಹನ ನಿಲುಗಡೆಗೆ ಜಾಗ ಗುರುತಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರು ಶ್ರೀರಂಗಪಟ್ಟಣದಿಂದ ಬಸವನಹಳ್ಳಿ ವರೆಗೆ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು. ಕುಶಾಲನಗರ ದಿಂದ ಸಂಪಾಜೆ ವರೆಗೆ ಹೆದ್ದಾರಿಯಲ್ಲಿ ಅಪಘಾತ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ರಸ್ತೆ ಕಾಮಗಾರಿ ಯೋಜನೆ ಸಂಬಂಧ ಡಿಪಿಆರ್ ಸಿದ್ದಪಡಿಸುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಗಮನಕ್ಕೆ ತರುವಂತಾಗಬೇಕು ಎಂದು ಸಲಹೆ ಮಾಡಿದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ ಅವರು ಮಾತನಾಡಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದರು. ಜಿ.ಪಂ.ಕಾರ್ಯಪಾಲಕ ಎಂಜಿನಿಯರ್ ನಾಯಕ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ, ಪೊಲೀಸ್ ಅಧಿಕಾರಿ ಮೇದಪ್ಪ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸತೀಶ(ವಿರಾಜಪೇಟೆ), ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‍ಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.