
ಸೋಮವಾರಪೇಟೆ ಡಿ.5 NEWS DESK : ಕೊಡಗು ಜಿಲ್ಲಾ ಕನ್ನಡ ಸಿರಿ ಸ್ನೇಹ ಬಳಗ ಹಾಗೂ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ಮಹಿಳಾ ಸಮಾಜ ಭವನದಲ್ಲಿ “ಶತಕಂಠ ಗೀತ ಗಾಯನ” ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. 150 ವರ್ಷ ಪೂರೈಸಿದ ಬಕಿಮ್‍ಚಂದ್ರ ಚಟರ್ಜಿ ರಚಿಸಿರುವ “ವಂದೇ ಮಾತರಂ”, ರಾಷ್ಟ್ರಕವಿ ಕುವೆಂಪು ರಚಿಸಿದ “ಜಯ ಭಾರತ ಜನನಿಯ ತನುಜಾತೆ”, ಹುಯಿಲಗೊಳ ನಾರಾಯಣರಾಯರು ರಚಿಸಿರುವ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು” ಗೀತೆಗಳಿಗೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶತಕಂಠ ಗಾಯನದ ಮೂಲಕ ಗೌರವ ಸಲ್ಲಿಸಲಾಯಿತು. ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು, 150 ವರ್ಷ ಪೂರೈಸಿದ “ವಂದೇ ಮಾತರಂ” ಗೀತೆಗಳನ್ನು ಎಲ್ಲಾ ಗಾಯಕ ಗಾಯಕಿಯರು ಹಾಡಿದರು. ಕಾರ್ಯಕ್ರಮವನ್ನು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಉದ್ಘಾಟಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸ್ನೇಹ ಬಳಗದ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ವಹಿಸಿದ್ದರು. ವೇದಿಕೆಯಲ್ಲಿ ಬಳಗದ ತಾಲ್ಲೂಕು ಅಧ್ಯಕ್ಷ ಹೆಚ್.ಜೆ.ಜವರ, ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಕೋಶಾಧ್ಯಕ್ಷ ಎಸ್.ಎ.ಮುರುಳೀಧರ್ ಮತ್ತು ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರುಗಳು ಇದ್ದರು.









