Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಕ್ಕಬ್ಬೆ : ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಪುತ್ತರಿ (ಹುತ್ತರಿ) ಹಬ್ಬ ಆಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಕ್ಕಬ್ಬೆ : ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಪುತ್ತರಿ (ಹುತ್ತರಿ) ಹಬ್ಬ ಆಚರಣೆ

ಡಿಸೆಂಬರ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ಡಿ.6 NEWS DESK : ಕೊಡಗಿನ ಸುಗ್ಗಿಯ ಹಬ್ಬವಾದ ಧಾನ್ಯ ಲಕ್ಷ್ಮೀಯನ್ನು ಬರಮಾಡಿಕೊಳ್ಳುವ ಪುತ್ತರಿ (ಹುತ್ತರಿ) ಹಬ್ಬ ವನ್ನು ಜಿಲ್ಲೆಯಾದ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ರಾತ್ರಿ ಹುತ್ತರಿ ಹಬ್ಬದ ಮೊದಲ ಪೂಜೆ ನಡೆಯಿತು. ಬಳಿಕ ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಭತ್ತದ ಕದಿರಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು. ಪಾಡಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವಾಲಯದ ಸುತ್ತಮುತ್ತಲಿನ ಪೊ0ಗೇರ, ಕೋಳೆಯಂಡ, ಬೊಳ್ಳನಮ್ಮಂಡ, ಹಳ್ಳಿ ಮಾಡ ಸೇರಿದಂತೆ ಅಮ್ಮಂಗೇರಿಯ ಸುತ್ತÀಮುತ್ತಲಿನ ಕುಟುಂಬದವರು ಊರಿನ, ಪರವೂರಿನ ಭಕ್ತರು ಪಾಲ್ಗೊಂಡಿದ್ದರು. ದೇವಾಲಯದ ಸುತ್ತಮುತ್ತಲಿನ ವಿವಿಧ ಕುಟುಂಬಗಳ ಮಹಿಳೆಯರು ತಳಿಯಕ್ಕಿ ಬೊಳಕ್ನೊಂದಿಗೆ ದೇವಾಲಯಕ್ಕೆ ಆಗಮಿಸಿದರು. ಬಳಿಕ ಕುಡಿಯರ ಕಾವೇರಪ್ಪ ಮತ್ತು ಸಂಗಡಿಗರಿಂದ ದುಡಿಕೊಟ್ ಪಾಟ್ ನುಡಿಸಲಾಯಿತು. ಬಳಿಕ ಹಿರಿಯರಾದ ಪೊ0ಗೇರ ಉಲ್ಲಾಸ್ ದೇವರ ನಡೆಯಲ್ಲಿ ನಾಡಿನ ಸುಭಿಕ್ಷೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆನಂತರ ಜಾಗಟೆ, ಡೋಲು ಸಹಿತ ಬೆಳ್ಳಿಯ ಬಿಂದಿಗೆಯೊ0ದಿಗೆ ಮುಕ್ಕಾಟಿ ಸುಬ್ರಮಣಿ ಹಾಗೂ ವಿವಿಧ ಕುಟುಂಬಗಳ ಮಹಿಳೆಯರು ತಳಿಯಕ್ಕಿ ಬೊಳಕ್ನೊಂದಿಗೆ ಭಕ್ತಾದಿಗಳು ಪೊ0ಗೇರ ಅಪ್ಪಣ್ಣನವರ ಮಾಬಲ್ಯ ಗದ್ದೆಗೆ ತೆರಳಿ ಪೂಜೆ ವಿಧಿವಿಧಾನ ನೆರವೇರಿಸಿದರು. ನಿಗದಿತ ಸಮಯದಲ್ಲಿ ಕುಶಾಲು ತೋಪು ಹಾರಿಸಿ ಪೊಲಿಪೊಲಿ ಬಾ ಉದ್ಘೋಷಗಳನಡುವೆ ಪಟಾಕಿಗಳ ಮೊರೆಕದೊಂದಿಗೆ ಕದಿರನ್ನು ಮುಕ್ಕಾಟಿ ಸುಬ್ರಮಣಿ ಅವರು ಭತ್ತದ ಕದಿರುಗಳನ್ನು ಕೊಯ್ದು ಇತರರ ಕೈಗೆ ಕೊಟ್ಟರು. ನಂತರ ಭತ್ತದ ಕದಿರಿನೊಂದಿಗೆ ದೇವಾಲಯಕ್ಕೆ ಆಗಮಿಸಿದ ಭಕ್ತರು ದೇವಾಲಯದ ಅಶ್ವತ್ಥ ಕಟ್ಟೆಗೆ ಪ್ರದಕ್ಷಿಣೆ ಬಂದು ತೆನೆಗಳನ್ನು ಅರ್ಚಕರಿಗೆ ಒಪ್ಪಿಸಲಾಯಿತು. ಬಳಿಕ ದೇವಾಲಯದ ನಮಸ್ಕಾರ ಮಂಟಪದಲ್ಲಿರಿಸಿ ವಿಶೇಷ ಧಾನ್ಯಲಕ್ಷ್ಮಿ ಪೂಜೆಯನ್ನು ಅರ್ಚಕರಾದ ಜಗದೀಶ್ ಅರ್ಚಕ ವೃಂದ ,ಶ್ರೀಕಾಂತ್ ದೇವಾಲಯದಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಆನಂತರ ಪ್ರಥಮವಾಗಿ ಕದಿರು ದೇವರ ಗರ್ಭಗುಡಿ ಸೇರಿದಂತೆ ದೇವಾಲಯದ ವಿವಿಧ ಕಡೆಯಲ್ಲಿ ಕಟ್ಟಲಾಯಿತು. ಬಳಿಕ ಭಕ್ತರಿಗೆ ಕದಿರು, ತೀರ್ಥಪ್ರಸಾದವನ್ನು ವಿತರಿಸಲಾಯಿತು. ದೇವಾಲಯದಲ್ಲಿ ನಡೆದ ಆಚರಣೆಯಲ್ಲಿ ಊರಿನ,ಪರವೂರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸುಬ್ರಹ್ಮಣ್ಯ ಯುವಕ ಸಂಘದ ವತಿಯಿಂದ ತಳಿರು ತೋರಣ ವ್ಯವಸ್ಥೆಯನ್ನು ಮಾಡಲಾಗಿತ್ತು. ಬಳಿಕ ದೇವಾಲಯದ ಸುತ್ತಮುತ್ತಲಿನ ಕುಟುಂಬಸ್ಥರು ತಮ್ಮ ತಮ್ಮ ಮನೆಗೆ ತೆರಳಿ ಅವರ ಗದ್ದೆಯಿಂದ ಕಾದಿರು ತೆಗೆದು ಪಟಾಕಿ ಬಾಣ, ಬಿರುಸು, ಹಾಗೂ ಹುತ್ತರಿಯ ವಿಶೇಷ ತಿಂಡಿ,ತಿನಿಸು ಹಾಗೂ ಹೊಸ ಅಕ್ಕಿಯಿಂದ ಮಾಡಿದ ಪಾಯಸ ಗಳೊಂದಿಗೆ ಹುತ್ತರಿ ಹಬ್ಬವನ್ನು ವಿಶೇಷವಾಗಿ ಆಚರಿಸಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.