Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನ : ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನ : ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಡಿಸೆಂಬರ್ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.6 NEWS DESK : ಡಾ.ಬಿ.ಆರ್.ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶ ವಿದೇಶಗಳಲ್ಲಿ ಹಲವು ಸ್ನಾತಕೋತ್ತರ ಪದವಿ ಪಡೆದು ರಾಷ್ಟ್ರಕ್ಕೆ ಒಳ್ಳೆಯ ಸಂವಿಧಾನ ನೀಡಿದ್ದಾರೆ. ಅವರ ಜೀವನ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು. ದೇಶ ವಿದೇಶಗಳಲ್ಲಿ ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರಗಳು ಹಾಗೂ ಸಂಶೋಧನಾ ಕೇಂದ್ರಗಳು ಇವೆ. ಇಡೀ ಪ್ರಪಂಚದಲ್ಲಿಯೇ ಅವರು ಅಜರಾಮರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಸ್ಮರಿಸಿದರು. ದೇಶ ವಿದೇಶಗಳಲ್ಲಿಯೂ ಸಹ ಅವರ ಪ್ರತಿಮೆಯನ್ನು ಕಾಣಬಹುದಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ ಮತ್ತು ಸಾಮಾಜಿಕ ಹೋರಾಟ ರಾಷ್ಟ್ರದಲ್ಲಿ ಒಂದು ರೀತಿ ಮಹಾನ್ ಕ್ರಾಂತಿ ಎಂದು ಜಿಲ್ಲಾಧಿಕಾರಿ ಅವರು ವರ್ಣಿಸಿದರು. ಅಂಬೇಡ್ಕರ್ ಅವರ ಮೌಲ್ಯಗಳು ಹಾಗೂ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು. ಅವರು ಬರೆದಿರುವ ಸಂವಿಧಾನವನ್ನು ಸ್ಮರಿಸಿಕೊಂಡು ಅಭಿವೃದ್ಧಿಯತ್ತ ಚಿಂತನೆ ಮಾಡಬೇಕು. ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿ ನಡೆದುಕೊಳ್ಳಬೇಕು ಎಂದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಎಚ್.ಎಲ್.ದಿವಾಕರ ಮಾತನಾಡಿ ಸುಮಾರು ಆರು ದಶಕಗಳ ಹೋರಾಟದ ನಂತರ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣವಾಗುತ್ತಿರುವುದು ಶ್ಲಾಘನೀಯ ಎಂದರು. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಸಂಬಂಧ ಜಿಲ್ಲಾಧಿಕಾರಿ ಅವರು ನುಡಿದಂತೆ ನಡೆದಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ನಗರಸಭೆ ಸದಸ್ಯರಾದ ಎಸ್.ಸಿ.ಸತೀಶ್, ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕರಾದ ದೀಪಕ್ ಪೊನ್ನಪ್ಪ, ಪ್ರಮುಖರಾದ ಮೋಹನ್ ಮೌರ್ಯ, ಪ್ರೇಮ್ ಕುಮಾರ್, ರಮೇಶ್, ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.