Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ವಿಪ್ರ ಕ್ರೀಡೋತ್ಸವ’ವ ಉದ್ಘಾಟನೆ : ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ವಿಪ್ರ ಸಮಾಜಕ್ಕೆ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ವಿಪ್ರ ಕ್ರೀಡೋತ್ಸವ’ವ ಉದ್ಘಾಟನೆ : ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ವಿಪ್ರ ಸಮಾಜಕ್ಕೆ ಕರೆ*

ಡಿಸೆಂಬರ್ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಡಿ.7 : ಸರ್ವರಲ್ಲೂ ಹಿತವನ್ನು ಬಯಸುವ ವಿಪ್ರ ಸಮಾಜವು ತನ್ನ ಪಾರಂಪರಿಕವಾದ ಪೂಜಾ ಕಾರ್ಯಗಳಿಗಷ್ಟೆ ಸೀಮಿತವಾಗದೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಹಿರಿಯ ಪತ್ರಕರ್ತ ಬಿ.ಜಿ.ಅನಂತಶಯನ ಕರೆ ನೀಡಿದ್ದಾರೆ. ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಯೋಗದೊಂದಿಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ವಿಪ್ರ ಬಾಂಧವರಿಗಾಗಿ ನಡೆದ ‘ವಿಪ್ರ ಕ್ರೀಡೋತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ವರಲ್ಲೂ ಒಳಿತನ್ನು ಬಯಸುವ ಬ್ರಾಹ್ಮಣ ಸಮೂಹದ ಸರ್ವರೂ ಒಂದಾಗಿ, ಸಂಘಟಿತರಾಗುವ ಅವಶ್ಯಕತೆ ಇದೆ. ಇದಕ್ಕೆ ಸಮಾಜದ ಎಲ್ಲರ ಸಹಕಾರ ಅತ್ಯವಶ್ಯವೆಂದು ಅಭಿಪ್ರಾಯಿಸಿದ ಅವರು, ಈ ನಿಟ್ಟಿನಲ್ಲಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಸದಸ್ಯತ್ವವನ್ನು ಸಮಾಜದ ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕೊಡಗು ಜಿಲ್ಲಾ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷರಾದ ರಾಮಚಂದ್ರ ಮೂಗೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿರುವ ಬ್ರಾಹ್ಮಣ ಸಮಾಜ ಬಾಂಧವರನ್ನು ಒಂದಾಗಿ ಬೆಸೆಯುವ ಮತ್ತು ಯುವ ಸಮೂಹದಲ್ಲಿನ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸುವ ನಿಟ್ಟಿನಲ್ಲಿ ನಿಧಿಯ ವತಿಯಿಂದ 4ನೇ ವರ್ಷದ ವಿಪ್ರ ಕ್ರೀಡೋತ್ಸವವನ್ನು ಆಯೋಜಿಸಲಾಗುತ್ತಿದೆಯೆಂದು ತಿಳಿಸಿದರು. ಸಮಾಜ ಬಾಂಧವರಿಗಾಗಿ ಆಯೋಜಿಸುವ ಇಂತಹ ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಬ್ರಾಹ್ಮಣ ಸಮೂಹ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸ್ಪಂದಿಸಬೇಕು. ಇಂತಹ ಕ್ರೀಡಾಕೂಟಗಳು ಸಮಾಜದ ಸಂಘಟನೆಗೆ ಸಹಕಾರಿಯಾಗುತ್ತದೆ ಎಂದರು.
*ಡಿ.14 ರಂದು ಕ್ರಿಕೆಟ್* ಇದೇ ಡಿ.14ರಂದು ಜಿಲ್ಲೆಯ ವಿಪ್ರ ಬಾಂಧವರಿಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ವಿರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ. ಅದೇ ದಿನ ಸಂಜೆ ಸಂಜೆ 4 ಗಂಟೆಗೆ ಮೈದಾನದ ಮತ್ತೊಂದು ಭಾಗದಲ್ಲಿ ಜಿಲ್ಲಾ ಮಟ್ಟದ ಹಗ್ಗ-ಜಗ್ಗಾಟ ಸ್ಪರ್ಧೆಯು ಸಹ ನಡೆಯಲಿದೆ. ಇದರಲ್ಲಿ ಜಿಲ್ಲೆಯ ಬ್ರಾಹ್ಮಣ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ರಾಮಚಂದ್ರ ಮೂಗೂರು ವಿನಂತಿಸಿಕೊಂಡರು. ನಿಧಿಯ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಅವರು, ಇದೇ ಡಿ.21 ರಂದು ಮಡಿಕೇರಿ ತಾಲ್ಲೂಕು ಮಟ್ಟದ ಚೆಸ್ ಮತ್ತು ಕೇರಂ ಸ್ಪರ್ಧೆ ನಗರದ ಶ್ರೀ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ವಿಪ್ರಬಾಂಧವರಿಗಾಗಿ ನಡೆಯಲಿದೆ. ಜಿಲ್ಲೆಯ ಇತರೆ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಸ್ಪರ್ಧೆಗಳು ನಡೆದು, ಜನವರಿಯಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆ ನಡೆಯಲಿದೆಯೆಂದು ಮಾಹಿತಿ ನೀಡಿದರು. ಸ್ಪರ್ಧೆಗಳಿಗೆ ಚಾಲನೆ- ವಿಪ್ರ ಕ್ರೀಡೋತ್ಸವಕ್ಕೆ ಚಾಲನೆ ನೀಡಿದ ಬಿ.ಜಿ.ಅನಂತ ಶಯನ ಅವರು, ನಿಧಿಯ ಅಧ್ಯಕ್ಷ ರಾಮಚಂದ್ರ ಮೂಗೂರು ಅವರೊಂದಿಗೆ ಶಟಲ್ ಬ್ಯಾಡ್ಮಿಂಟನ್ ಆಡುವ ಮೂಲಕ ಸ್ಪರ್ಧೆಯನ್ನು ಉದ್ಘಾಟಿಸಿದರು.
*ಸಂಭ್ರಮಿಸಿದ ವಿಪ್ರ ಬಾಂಧವರು* ಒಳಾಂಗಣ ಕ್ರೀಡಾಕೂಟದಲ್ಲಿ ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಡಬಲ್ಸ್, ಟೇಬಲ್ ಟೆನ್ನಿಸ್ ಸಿಂಗಲ್ಸ್, ಡಬಲ್ಸ್ ಪಂದ್ಯಾವಳಿ ಪುರುಷರು ಮತ್ತು ಮಹಿಳೆಯರ ವಿಭಾಗ ಹಾಗೂ 50 ವರ್ಷ ಮೇಲ್ಪಟ್ಟ ಹಿರಿಯ ವಿಭಾಗಗಳಲ್ಲಿ ನಡೆಯಿತು. ಈ ಎಲ್ಲಾ ಸ್ಪರ್ಧೆಗಳಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ವಿಪ್ರ ಬಾಂಧವರು ಪಾಲ್ಗೊಂಡು ಸಂಭ್ರಮಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಉಪಾಧ್ಯಕ್ಷರಾದ ಭರತೇಶ್ ಕಂಡಿಗೆ, ಸಹ ಕಾರ್ಯದರ್ಶಿ ಎ.ವಿ. ಮಂಜುನಾಥ್, ನಿರ್ದೇಶಕರಾದ ಬಿ.ಕೆ.ಅರುಣ್ ಕುಮಾರ್, ರಾಜಶೇಖರ್, ಜಿ.ಡಿ.ಶಿವಶಂಕರ್, ಪಿ.ವಿ.ಅಶೋಕ್, ಎಂ.ಎನ್. ಶ್ಯಾಮಲಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.