Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
  • *ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*
  • *ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*
  • *ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*
  • *ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*
  • *ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*
  • *ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ : ಗಮನ ಸೆಳೆದ ನೃತ್ಯ ವೈಭವ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ : ಗಮನ ಸೆಳೆದ ನೃತ್ಯ ವೈಭವ*

ಡಿಸೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಾರ್ಕಳ ಡಿ.8 NEWS DESK : ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವವು “ಸಿಂದೂರ ಸಂಭ್ರಮ” ಪರಿಕಲ್ಪನೆಯಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಜಿ.ರಾಮಕೃಷ್ಣ ಆಚಾರ್, ಸ್ಥಾಪಕರು, ಎಸ್. ಕೆ.ಎಫ್ ಎಲಿಕ್ಸರ್ ಇಂಡಿಯಾ ಮತ್ತು ಸಂಜೀವಿನಿ ಗೋಧಾಮ ಮುನಿಯಾಲು ಅವರು ಮಾತನಾಡಿ’ ಕಾಲೇಜುಗಳು ಬರಿಯ ಪಠ್ಯದ ಅಭ್ಯಾಸ ನೀಡುವ ಸ್ಥಳವಲ್ಲ. ವಿದ್ಯಾರ್ಥಿಗಳ ಸಾಮಥ್ರ್ಯವನ್ನೆತ್ತಿ ಹಿಡಿಯುವ ವೇದಿಕೆಗಳಾಗಬೇಕು. ಅಂತಹ ವೇದಿಕೆಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿ ಕೊಡುತ್ತಿರುವ ಕ್ರಿಯೇಟಿವ್ ಕಾಲೇಜಿನ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್, ವಿಶ್ರಾಂತ ಪ್ರಾಚಾರ್ಯರಾದ ಕೆ.ಗುಣಪಾಲ್ ಕಡಂಬ, ಖ್ಯಾತ ನಟ ಶನಿಲ್ ಗೌತಮ್ ಇವರು ತಮ್ಮ ಮಾತುಗಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಂತಹ ಕಾರ್ಯಕ್ರಮಗಳನ್ನು ಕಾಲೇಜು ಕೈಗೊಂಡಿರುವ ಬಗ್ಗೆ ಶ್ಲಾಘಿಸಿದರು. ಕ್ರಿಯೇಟಿವ್ ಯಕ್ಷಾರಾಧನಮ್ ಹವ್ಯಾಸಿ ಕಲಾವಿದರಿಂದ ‘ಶ್ರೀರಾಮಾನುಗ್ರಹ ಸಿಂದೂರ ವಿಜಯ’ ಯಕ್ಷಗಾನ ಪ್ರದರ್ಶನ ನಡೆಯಿತು.  ದಿ. ಎಚ್.ಎಸ್ ವೆಂಕಟೇಶಮೂರ್ತಿಯವರ  ಸವಿ ನೆನಪಿನ ಕುರಿತ ‘ಭಾವ ನಮನ’ ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ರವರಿಂದ ಮ್ಯಾಜಿಕ್ ಶೋ ಕಾರ್ಯಕ್ರಮ ನಡೆದು, ಇದು ಎಲ್ಲರ ಮನಸೂರೆಗೊಂಡಿತು. ಖ್ಯಾತ ನಿರೂಪಕ ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿವಿಧ ಸ್ಪರ್ಧಾವಳಿಗಳ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಿತು. ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು.  ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ 180 ವಿದ್ಯಾರ್ಥಿಗಳಿಗೆ ಸನ್ಮಾನದೊಂದಿಗೆ ಪೆÇ್ರೀತ್ಸಾಹ ಧನವನ್ನೂ ನೀಡಲಾಯಿತು. ಮುಖ್ಯ ಅತಿಥಿ ವಿರೂಪಾಕ್ಷ ದೇವರಮನೆ  ಇವರು  ‘ವಿದ್ಯಾರ್ಥಿಗಳ ಸಾಧನೆ ಎಂದರೆ ಕೇವಲ ಅಂಕಗಳಲ್ಲ. ವ್ಯಕ್ತಿತ್ವ ನಿರ್ಮಾಣವೂ ಅದೇ ಮಟ್ಟಿಗೆ ಮಹತ್ವದ್ದು. ವಿದ್ಯಾರ್ಥಿಗಳು ಸತತ ಅಭ್ಯಾಸದೊಂದಿಗೆ ತಮ್ಮ ಧ್ವನಿಯನ್ನು ಸ್ವಸ್ಥ ಸಮಾಜ ನಿರ್ಮಾಣದತ್ತ ರವಾನಿಸಬೇಕು ‘ ಎಂಬ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಯನ್ನು ವೇದಿಕೆಯಲ್ಲಿ 150 ವಿದ್ಯಾರ್ಥಿಗಳ ಸಮ್ಮುಖದಲ್ಲಿ ಗೀತ ಗಾಯನದೊಂದಿಗೆ ನೆರವೇರಿಸಲಾಯಿತು. ಚುಟುಕು ಚಕ್ರವರ್ತಿ ಹೆಚ್.ದುಂಡಿರಾಜ್ ಅವರ ಉಪಸ್ಥಿತಿಯಲ್ಲಿ ‘ಕ್ರಿಯೇಟಿವ್ ಸಾಹಿತ್ಯ ಸಾಂಗತ್ಯ’ ಕಾರ್ಯಕ್ರಮ ಜರುಗಿತು. ದುಂಡಿರಾಜ್ ಯುವ ಮನಸ್ಸುಗಳ ಓದಿನ ಅಭ್ಯಾಸವೇ ಅವರ ಬದುಕಿನ ಶಕ್ತಿ ಕೇಂದ್ರ. ಪುಸ್ತಕವು ವ್ಯಕ್ತಿಯ ಚಿಂತನೆಗೆ ದಿಕ್ಕು ತೋರಿಸುವ ಗುರು ಎಂದು ಹೇಳಿದರು.  ಸಂಜೆ ಸಮಾರೋಪ ಸಮಾರಂಭ ಜರುಗಿತು. ಪ್ರಾಚಾರ್ಯ ವಿದ್ವಾನ್ ಗಣಪತಿ ಭಟ್ ರವರು ವಾರ್ಷಿಕ ವರದಿ ವಾಚಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ ರವರು ‘ ಶಿಕ್ಷಣ ಎಂದರೆ ಉದ್ಯೋಗ ಸಿಗುವ ಮಾರ್ಗ ಮಾತ್ರವಲ್ಲ. ಅದು ವ್ಯಕ್ತಿತ್ವ ನಿರ್ಮಾಣದ ಮೂಲನೆಲೆ. ಯುವಜನಾಂಗ ಮಾನವೀಯತೆಯೊಂದಿಗೆ ಕೈಜೋಡಿಸಿದಾಗ ಸಮಾಜದಲ್ಲಿ ನಿಜವಾದ ಬದಲಾವಣೆ ನಡೆಯುತ್ತದೆ ಎನ್ನುತ್ತಾ ಕ್ರಿಯೇಟಿವ್ ಕಾಲೇಜು ನಡೆಸುತ್ತಿರುವ ನೈತಿಕತೆ ಆಧಾರಿತ ಶೈಕ್ಷಣಿಕ ಚಟುವಟಿಕೆಗಳನ್ನು ಶ್ಲಾಘಿಸಿ, ಸಂಸ್ಥೆಯ ಮುಂದಿನ ಬೆಳವಣಿಗೆಗೆ ಶುಭ ಹಾರೈಸಿದರು. ಸಂಸ್ಥೆ ಆರಂಭವಾಗಿ ಐದು ವರ್ಷಗಳು ಪೂರ್ಣಗೊಳ್ಳುವ ಶುಭಸಂದರ್ಭದಲ್ಲಿ ಐದು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬೋಧಕೇತರ ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಿ, ಗೌರವಿಸಲಾಯಿತು.  ಕ್ರಿಯೇಟಿವ್ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಂದ ” ಸಿಂದೂರ ಸಂಭ್ರಮ ” ಪರಿಕಲ್ಪನೆಯ ಅತ್ಯಂತ ವರ್ಣ ರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕೋತ್ಸವ ಸಮಾರಂಭವು ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ, 2500 ಕ್ಕಿಂತಲೂ ಹೆಚ್ಚು  ವಿದ್ಯಾರ್ಥಿಗಳು, ಬೋಧಕ – ಬೋಧಕೇತರ ವರ್ಗದವರು, ಪೆÇೀಷಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ.07: ಸ್ವಚ್ಛತೆಯ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು ಬಿಟ್ಟಂಗಾಲ…

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*

ಮಾರ್ಚ್ 7, 2026

*ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*

ಮಾರ್ಚ್ 7, 2026

*ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*

ಮಾರ್ಚ್ 7, 2026

*ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*

ಮಾರ್ಚ್ 7, 2026

*ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*

ಮಾರ್ಚ್ 7, 2026

*ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.