Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆಯಲ್ಲಿ ಗಣ ಹೋಮ ಮತ್ತು ಮಾತೃ ವಂದನಾ ಕಾರ್ಯಕ್ರಮ : ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ : ಸ್ವತಂತ್ರ ಬಸವಲಿಂಗ ಸ್ವಾಮೀಜಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆಯಲ್ಲಿ ಗಣ ಹೋಮ ಮತ್ತು ಮಾತೃ ವಂದನಾ ಕಾರ್ಯಕ್ರಮ : ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ : ಸ್ವತಂತ್ರ ಬಸವಲಿಂಗ ಸ್ವಾಮೀಜಿ*

ಡಿಸೆಂಬರ್ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಡಿ.9 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸೋಮವಾರಪೇಟೆ ಕಾರ್ಯಕ್ಷೇತ್ರಕ್ಕೆ ಒಳಪಡುವ ಪ್ರಗತಿಬಂಧು ಸ್ವಸಹಾಯ ಗುಂಪುಗಳ ನೇತೃತ್ವದಲ್ಲಿ ಪಟ್ಟಣದ ಮಹಿಳಾ ಸಮಾಜದಲ್ಲಿ ಗಣ ಹೋಮ ಮತ್ತು ಮಾತೃ ವಂದನಾ ಕಾರ್ಯಕ್ರಮ ನಡೆಯಿತು. ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಮುಳ್ಳೂರು ಮಠದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಅವರು, ತಾಯಿ ತನ್ನ ನಡವಳಿಕೆ ಮೂಲಕ ಮಕ್ಕಳಿಗೆ ಸಂಸ್ಕಾರ ನೀಡಬೇಕು. ಸಂಸ್ಕಾರದ ಕೊಂಡಿ ಕಳಚಿದರೆ ಸಮಾಜಕ್ಕೆ ಭವಿಷ್ಯವಿಲ್ಲ. ಕುಟುಂಬ ವ್ಯವಸ್ಥೆ ಬಲಗೊಳ್ಳುವುದೇ ಮನೆಯ ತಾಯಿಯಿಂದ ಎಂದ ಅವರು, ಕೌಟುಂಬಿಕ ಸಂಬಂಧಗಳು ಉತ್ತಮಗೊಳ್ಳಬೇಕು. ಇಂಗ್ಲೀಷ್ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣವೂ ಅತ್ಯಗತ್ಯ ಎಂದು ಪ್ರತಿಪ್ರಾದಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಜನಜಾಗೃತಿ ಸಮಿತಿ ಸ್ಥಾಪಕಾಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ಮಾತನಾಡಿ, ಕ್ಷೇತ್ರದಿಂದ ಮಹಿಳಾ ಸಬಲೀಕರಣ, ರೈತರು, ವೃದ್ಧರು, ವಿದ್ಯಾರ್ಥಿಗಳು, ಅಶಕ್ತರ ಶ್ರೇಯೋಭಿವೃದ್ಧಿಗೆ ಹಲವಷ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಇದನ್ನು ಸಹಿಸದ ಕಿಡಿಗೇಡಿಗಳು ಕ್ಷೇತ್ರದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಎಂದರು. ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಮಾತನಾಡಿ, ದೇಶದ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದು ಅಭಿಪ್ರಾಯಿಸಿದರು. ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಸೋಮೇಶ್ ಮಾತನಾಡಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗ್ರಾಮಾಭಿವೃದ್ಧಿ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಮಹಿಳಾ ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡಿದೆ. ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಸ್ವಾವಲಂಬಿಗಳಾಗಲು ವೇದಿಕೆ ಕಲ್ಪಿಸಿದೆ. ನಮ್ಮ ಆಚಾರ ವಿಚಾರ ಉಳಿಯಬೇಕಾದರೆ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದರು. ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಮಾತನಾಡಿ, ನೆಲದ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಧಾರ್ಮಿಕ ಆಚರಣೆಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ಹಿನ್ನೆಲೆ ಧರ್ಮಸ್ಥಳ ಹಾಗೂ ಗ್ರಾಮಾಭಿವೃದ್ಧಿ ಸಮಿತಿಗಳು ಹೆಚ್ಚು ಕ್ರಿಯಾಶೀಲವಾಗಿವೆ ಎಂದರು. ವೇದಿಕೆಯಲ್ಲಿ ಜನಜಾಗೃತಿ ಸಮಿತಿಯ ಸದಸ್ಯ ಮಸಗೋಡು ಸುರೇಶ್, ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಪೂಜಾ ಸಮಿತಿ ಅಧ್ಯಕ್ಷೆ ಪೌಲಿನಾ ಸಿಕ್ವೇರಾ, ಒಕ್ಕೂಟದ ಅಧ್ಯಕ್ಷರುಗಳಾದ ರವಿಕುಮಾರ್, ಚೇತನ್, ಲತಾ ಅಣ್ಣಪ್ಪ, ಲತಾ ರಾಮದಾಸ್, ರೂಪಾ ಹರೀಶ್, ಮುತ್ತಮ್ಮ ಅವರುಗಳು ಉಪಸ್ಥಿತರಿದ್ದರು. ಸೀತಾ ಬಳಗದ ಸದಸ್ಯರು ಪ್ರಾರ್ಥಿಸಿ, ಸೇವಾ ಪ್ರತಿನಿಧಿ ತಾರಾಲಕ್ಷ್ಮೀ ನಿರೂಪಿಸಿ, ವಲಯ ಮೇಲ್ವಿಚಾರಕ ದೇವೇಂದ್ರ ವಂದಿಸಿದರು.
ಸಭಾ ಕಾರ್ಯಕ್ರಮಕ್ಕೂ ಮುನ್ನ ಸೋಮೇಶ್ವರ ದೇವಾಲಯದ ಪ್ರಧಾನ ಅರ್ಚಕ ಚಿತ್ರಕುಮಾರ್ ಭಟ್ ಅವರ ನೇತೃತ್ವದಲ್ಲಿ ಗಣಹೋಮ ಹಾಗೂ ಮಾತೃವಂದನೆ ನಡೆಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.