Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಕೋರ್ಸ್* 
ಇತ್ತೀಚಿನ ಸುದ್ದಿಗಳು

*ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಕೋರ್ಸ್* 

December 9, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.9 NEWS DESK : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಇನ್ಫೋಸಿಸ್ ಕಂಪೆನಿಯ ವತಿಯಿಂದ 15 ದಿವಸಗಳ ಕಾಲ ಸರ್ಟಿಫಿಕೇಟ್ ಕೋರ್ಸ್ ಅನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಇನ್ಫೋಸಿಸ್ ಕಂಪನಿಯ ಸಿಎಸ್ಆರ್ ಚಟುವಟಿಕೆಯ ಅನ್ವಯ ಈ ಕೋರ್ಸ್ ಅನ್ನು ಆಯೋಜಿಸಲಾಗಿತ್ತು. ಸರ್ಟಿಫಿಕೇಟ್ ಕೋರ್ಸ್ ಗೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈ ಮುತ್ತು ಅವರು ಚಾಲನೆ ನೀಡಿದರು. ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಕಾರ್ಯಕ್ರಮದ ಸ್ವರೂಪದ ಬಗ್ಗೆ ಮಾತನಾಡಿದರು. 15 ದಿವಸಗಳ ಕಾಲ ಜರುಗಿದ ಕೋರ್ಸ್ ನಲ್ಲಿ ಇನ್ಫೋಸಿಸ್ ಕಂಪನಿಯ ತರಬೇತುದಾರರಾದ ನಳಿನಿ ಬಸವರಾಜ್ ಹಾಗೂ ವಿನೋದ್ ಮರಿ ರಾಜನ್ ವಿದ್ಯಾರ್ಥಿಗಳಿಗೆ ಸಂವಹನದ ವಿಧಾನ, ಭಾಷೆ ಹಾಗೂ ಸಾಫ್ಟ್ ಸ್ಕಿಲ್ಸ್, ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ರೆಸ್ಯುಮ್ ಅನ್ನು ತಯಾರಿಸುವ ಬಗ್ಗೆ, ಸಂದರ್ಶನವನ್ನು ಎದುರಿಸುವ ಬಗ್ಗೆ ತರಬೇತಿಯನ್ನು ನೀಡಿದರು. ಜೊತೆಗೆ ವಿದ್ಯಾರ್ಥಿಗಳಿಗೆ ಗುಂಪು ಚಟುವಟಿಕೆಗಳನ್ನು ನೀಡುವುದರ ಮೂಲಕ ಸಂವಹನ, ಕೌಶಲ್ಯ ವೃದ್ಧಿಗೆ ತರಬೇತಿಗೊಳಿಸಿದರು. ಮಾದರಿ ಸಂದರ್ಶನವನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಸಂದರ್ಶನವನ್ನು ಎದುರಿಸುವ ಬಗೆ, ತಯಾರಿ ಮಾಡಿಕೊಳ್ಳುವ ಕುರಿತು ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆಗಳು ಹಾಗೂ ವೃತ್ತಿಪರ ಅಭಿವೃದ್ಧಿ ಚಟುವಟಿಕೆಗಳು ಈ ಸರ್ಟಿಫಿಕೇಟ್ ಕೋರ್ಸ್ ನ ಮುಖ್ಯ ಕೇಂದ್ರ ಬಿಂದುಗಳಾಗಿದ್ದವು. ಈ ಕೋರ್ಸ್ ನಲ್ಲಿ ಪದವಿ ಕಾಲೇಜಿನ ಅಂತಿಮ ತರಗತಿಯ ಬಿಕಾಂ, ಬಿಬಿಎ, ಬಿಸಿಎ, ಹಾಗೂ ಬಿಎಸ್ಸಿ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. :: ಮೈಸೂರು ಇನ್ಫೋಸಿಸ್ ಕ್ಯಾಂಪಸ್ ಗೆ ಭೇಟಿ ನೀಡಿದ ವಿದ್ಯಾರ್ಥಿಗಳು ::  ಕಾಲೇಜಿನಲ್ಲಿ ಸರ್ಟಿಫಿಕೇಟ್ ಕೋರ್ಸ್ ಮುಕ್ತಾಯಗೊಂಡ ಬಳಿಕ ಅಂತಿಮ ಪದವಿಯ ವಿದ್ಯಾರ್ಥಿಗಳು ಉಪನ್ಯಾಸಕರನ್ನು ಒಳಗೊಂಡು ಮೈಸೂರಿನ ಇನ್ಫೋಸಿಸ್ ಕಾರ್ಪೊರೇಟ್ ತರಬೇತಿ ಕ್ಯಾಂಪಸ್ ಗೆ ಬೇಟಿ ನೀಡಿದರು. ವಿವಿಧಡೆಗಳಿಂದ ಆಗಮಿಸಿದ 900ಕ್ಕೂ ಅಧಿಕ ವಿದ್ಯಾರ್ಥಿಗಳು ಒಂದೆಡೆಯಲ್ಲಿ ಸೇರುವ ಮೂಲಕ ವಿದ್ಯಾರ್ಥಿ ಸಂಪರ್ಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇನ್ಫೋಸಿಸ್ ಕಾರ್ಪೊರೇಟ್ ಸಂಸ್ಥೆಯ ಸೆಲ್ವಪತಿ ಹಾಗೂ ಪವಿತ್ರ ರವರು ವಿದ್ಯಾರ್ಥಿಗಳಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಉದ್ಯೋಗ ಹಾಗೂ ಕೌಶಲ ಅಭಿವೃದ್ಧಿ, ಉದ್ಯೋಗ ಅವಕಾಶಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪರಸ್ಪರ ಚರ್ಚೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜಿನ ಉಪನ್ಯಾಸಕರುಗಳಾದ ಸಜೀರ, ಸುನಿತಾ, ನಿರ್ಮಲ, ಶಿಲ್ಪ, ಮುತ್ತಮ್ಮ, ನಮ್ರತಾ ಹಾಗೂ ಬಿನ್ಸಿ ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Articleಸೋಮವಾರಪೇಟೆಯಲ್ಲಿ ಗಣ ಹೋಮ ಮತ್ತು ಮಾತೃ ವಂದನಾ ಕಾರ್ಯಕ್ರಮ : ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ : ಸ್ವತಂತ್ರ ಬಸವಲಿಂಗ ಸ್ವಾಮೀಜಿ*
Next Article *ಸಶಸ್ತ್ರ ಪಡೆಗಳ ಧ್ವಜ ದಿನ : ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.