Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಪೊಕ್ಷೇತ್ರ ಮನೆಹಳ್ಳಿ ಮಠದಲ್ಲಿ ಸಂಭ್ರಮದ ಲಕ್ಷದೀಪೂತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಪೊಕ್ಷೇತ್ರ ಮನೆಹಳ್ಳಿ ಮಠದಲ್ಲಿ ಸಂಭ್ರಮದ ಲಕ್ಷದೀಪೂತ್ಸವ*

ಡಿಸೆಂಬರ್ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಡಿ.9 NEWS DESK : ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಸಂಭ್ರಮದ ದೀಪೋತ್ಸವ ಹಾಗೂ ಶ್ರದ್ಧಾ ಭಕ್ತಿಯಿಂದ ಶ್ರೀ ಗುರುಸಿದ್ಧವೀರೇಶ್ವರರ ಉತ್ಸವ ನಡೆಯಿತು. ಅಕ್ಕಪಕ್ಕದ ಗ್ರಾಮಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಹಸ್ರಾರು ಭಕ್ತಾದಿಗಳು ದೀಪೋತ್ಸವವನ್ನು ಕಣ್ತುಂಬಿಕೊಂಡರು. ಮುಂಜಾನೆಯಿಂದಲೇ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ಅರ್ಚನೆ ನಡೆಯಿತು. ಮಹಿಳೆಯರಾದಿಯಾಗಿ ಹಲವು ಭಕ್ತರು ಮಠದ ಆವರಣವನ್ನು ತಳಿರು ತೋರಣಗಳಿಂದ ಹಾಗೂ ವೈವಿಧ್ಯಮಯ ರಂಗೋಲಿ ಬಿಡಿಸಿ ಅಲಂಕರಿಸಿದ್ದರು. ಕ್ಷೇತ್ರದ ತುಂಬೆಲ್ಲಾ ಹಣತೆಗಳು ಪ್ರಜ್ವಲಿಸುತ್ತಿದ್ದವು. ಸಂಜೆ ನಡೆದ ಧಾರ್ಮಿಕ ಸಮಾರಂಭಲ್ಲಿ ಶಿಕ್ಣಣ ತಜ್ಞ ದಾವಣಗೆರೆಯ ಸಾಗರ್ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಮಕ್ಕಳು ಅನ್ಯ ಮಾರ್ಗ ಹಿಡಿದಿರುವುದು ಆತಂಕಕಾರಿ ವಿಚಾರವಾಗಿದೆ ಎಂದರು. ಆನ್ ಲೈನ್ ಗೇಮ್ ಗಳಿಗೆ‌ಬಲಿಯಾಗುತ್ತಿದ್ದಾರೆ ಎಂತಹ ಪರಿಸ್ಥಿತಿ ಬಂದಿದೆ ಎಂದರು. ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ ಇಂದು ಇರುವುದು ಕೇವಲ ಪದವಿಗಾಗಿ ಮಾತ್ರ ಆದರೆ ನೈತಿಕ ಶಿಕ್ಷಣ ಅವಶ್ಯಕತೆ ಇದೆ ಎಂದ ಅವರು ಬಸವಣ್ಣ ನವರ ಅನುಭವ ಮಂಟಪದ ರೀತಿಯ ಶಿಕ್ಷಣ ವ್ಯವಸ್ಥೆ ಬರಬೇಕು, ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು ಕಲಿಯಬೇಕು  ಎಂದರು. ಬಸವಣ್ಣನವರ ತತ್ವ ಗಳ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆ‌ಮಾಡಬೇಕಾಗಿದೆ ಎಂದ ಅವರು  ಮಕ್ಕಳಿಗೆ ಪೋಷಕರು ಹೆಚ್ಚಿನ‌ ಸಮಯ ಹಾಗೂ ಸಂಪೂರ್ಣ ಬೆಂಬಲ ನೀಡಬೇಕಾಗಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಮನೆಹಳ್ಳಿ ಮಠಾಧ್ಯಕ್ಷರಾದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಶ್ರೀಕ್ಷೇತ್ರ ಮನೆಹಳ್ಳಿ ಮಠವು ಈ ಹಿಂದೆ ಅಜ್ಞಾತ ಸ್ಥಳವಾಗಿದ್ದು, ವರ್ಷದಿಂದ ವರ್ಷಕ್ಕೆ ಧಾರ್ಮಿಕತೆಯ ಶ್ರದ್ಧಾಕೇಂದ್ರವಾಗಿ ರೂಪುಗೊಳ್ಳುತ್ತಿದೆ. ಕಾಡುಗಳಿಂದ ಕೂಡಿದ್ದ ಈ ಪ್ರದೇಶದಲ್ಲಿ ಶ್ರೀ ಗುರು ಸಿದ್ಧವೀರೇಶ್ವರ ಸ್ವಾಮಿಯವರ ಕೃಪಾ ವಿಶೇಷತೆಯಿಂದ ಗುಡಿ ಗೋಪುರಗಳು, ಪೂಜಾ ಕೈಂಕರ್ಯಗಳು, ದಾಸೋಹ ಕಾಯಕಗಳಿಂದ ಸಂಸ್ಕಾರಯುತ ಮೌಲ್ಯಗಳಿಂದ ತುಂಬಿರುವ ತಪೋಕ್ಷೇತ್ರವಾಗಿ ಬೆಳೆದುಬರುತ್ತಿದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ ಕೊಡಗು ಮಠಗಳ ನಾಡು ಎಂದೇ ಪರಿಗಣಿಸಲ್ಪಡುವ ಜಿಲ್ಲೆಯಾಗಿದೆ ಉತ್ತರ ಕೊಡಗಿನಲ್ಲಿ ಶ್ರೀ ಕ್ಷೇತ್ರ ತಪೋವನ ಮನೆಹಳ್ಳಿ ಮಠವು ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಗಳಿಂದ ಭಕ್ತರ ಪಾಲಿಗೆ ಪುಣ್ಯಕ್ಷೇತ್ರವಾಗಿ ರೂಪುಗೊಂಡಿರುವುದು ಹೆಮ್ಮೆಯ ಸಂಗತಿ ಎಂದರು. ನಮ್ಮ ದೇಶದಲ್ಲಿ ನಮ್ಮ ತನವನ್ನು ನಾವು ಮರೆಯುತ್ತಿದ್ದೇವೆ ಅನ್ಯ ಆಚಾರ,ವಿಚಾರಗಳಿಗೆ ಒಳಗಾಗುತ್ತಿದ್ದೇವೆ ಎಂದು ವಿಶಾದಿದರು.
ಬೇರೆ ಧರ್ಮದವರು ಅವರ ಧಾರ್ಮಿಕ ಧಾರ್ಮಿಕ ಆಚಾರ,ವಿಚಾರ ಗಳನ್ನೂ ಚಾಚುತಪ್ಪದೆ ಪಾಲಿಸುತ್ತಾರೆ ಆದರೆ ನಮ್ಮ ಸಮುದಾಯದವರು ಇಷ್ಟ ಲಿಂಗ ಧರಿಸಲೂ ಕಷ್ಟ ಪಡುತ್ತಾರೆ ಎಂದು ವಿಷಾಧಿಸಿದರು. ಈ ಸಂದರ್ಭ ರಾಜ್ಯ ಉಚ್ಛ ನ್ಯಾಯಾಲಯದ ಹಿರಿಯ ವಕೀಲ ಚಂದ್ರಮೌಳಿ ಯವರು ಕ್ಷೇತ್ರದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ‌ ಮಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ,ಕಲ್ಲುಮಠದ ಶ್ರೀ.ಮಹಾಂತ ಸ್ವಾಮೀಜಿ,ಮುಳ್ಳೂರು ಮಠದ ಶ್ರೀ.ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ,
ಚಿಲುಮೆ‌ಮಠದ ಜಯದೇವ ಸ್ವಾಮೀಜಿ,ತೊರೆನೂರು ಮಠದ ಮಲ್ಲೇಶ ಸ್ವಾಮೀಜಿ,ಶಿಡಿಗಳಲೆ ಮಠದ ಶ್ರೀ.ಇಮ್ಮಡಿ ಶಿವಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಗಣ್ಯರು ಉಪಸ್ತಿತರಿದ್ದರು. ತಪೋವನೇಶ್ವರಿ ಮಹಿಳಾತಂಡದಿಂದ ಪ್ರಾರ್ಥನೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.