Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಕ್ರಿಸ್ಮಸ್ ಗಾನ ತರಂಗ ಗಾಯನ ಸ್ಪರ್ಧೆ : ಕ್ರಿಸ್ಮಸ್ ಜಗತ್ತಿಗೆ ಒಗ್ಗಟ್ಟಿನ ಬಲವನ್ನು ಸಾರುತ್ತದೆ : ರೆ.ಫಾ. ಎಸ್.ಜೆ.ಪ್ರಾನ್ಸಿಸ್ ಸೆರಾವೋ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಕ್ರಿಸ್ಮಸ್ ಗಾನ ತರಂಗ ಗಾಯನ ಸ್ಪರ್ಧೆ : ಕ್ರಿಸ್ಮಸ್ ಜಗತ್ತಿಗೆ ಒಗ್ಗಟ್ಟಿನ ಬಲವನ್ನು ಸಾರುತ್ತದೆ : ರೆ.ಫಾ. ಎಸ್.ಜೆ.ಪ್ರಾನ್ಸಿಸ್ ಸೆರಾವೋ*

ಡಿಸೆಂಬರ್ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.9 NEWS DESK : ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವಿರಾಜಪೇಟೆ ಘಟಕ ಹಾಗೂ ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದ ಸಹಯೋಗದೊಂದಿಗೆ ನಡೆದ ಕ್ರಿಸ್ಮಸ್ ಗಾನ ತರಂಗ- 2025 ಗಾಯನ ಸ್ಪರ್ಧೆಯು ನಡೆಯಿತು. ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯ ಸಭಾಂಗಣದಲ್ಲಿ ನಡೆದ ಕ್ರಿಸ್‍ಮಸ್ ಋತುವಿನ ಸಂತೋಷ ಮತ್ತು ಸದ್ಭಾವನೆಯನ್ನು ಆಚರಿಸಲು, ಕ್ಯಾರೋಲ್‍ಗಳ ಮೂಲಕ ಪ್ರೀತಿ, ಶಾಂತಿ ಮತ್ತು ಏಕತೆಯ ಸಂದೇಶಗಳನ್ನು ಹರಡಲು ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ವಿರಾಜಪೇಟೆ ವಲಯದ ಶ್ರೇಷ್ಠ ಗುರುಗಳಾದ ಫಾ. ಜೇಮ್ಸ್ ಡೊಮೇನಿಕ್ ಧ್ವಜಾರೋಹಣ ನೆರವೇರಿಸಿ, ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ರೆ.ಫಾ. ಎಸ್.ಜೆ.ಪ್ರಾನ್ಸಿಸ್ ಸೆರಾವೋ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿ, ಡಿಸೆಂಬರ್ ಬಂತೆಂದರೆ ಸಾಕು ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹುರುಪು ಎಲ್ಲರಲ್ಲೂ ಮನೆಮಾಡಿರುತ್ತದೆ. ಕ್ರಿಶ್ಚಿಯನ್ ಬಾಂಧವರು ಒಗ್ಗೂಡಿ ಆಚರಿಸುವ ಕ್ರಿಸ್ಮಸ್ ವಿಶ್ವಕ್ಕೆ ಸಮಾನತೆ ಹಾಗೂ ಸಾರ್ಥಕತೆಯ ಪಾಠವನ್ನು ಮಾಡುತ್ತದೆ. ಕ್ರಿಸ್ಮಸ್ ಶಾಂತಿ ಸಮಾಧಾನವನ್ನು ಸಾರುವ ಹಬ್ಬವಾಗಿದ್ದು ಜಗತ್ತಿಗೆ ಒಗ್ಗಟ್ಟಿನ ಬಲವನ್ನು ಸಾರುತ್ತದೆ. ಇಂತಹ ಒಂದು ಸಮಯದಲ್ಲಿ ಸಂಸ್ಥೆಯ ಮೂಲಕ ಸಮಾಜಮುಖಿ ಸೇವೆ ಸಲ್ಲಿಸುತ್ತಾ, ಸಮಾಜದಲ್ಲಿ ಕಷ್ಟದಲ್ಲಿ ಬದುಕುತ್ತಿರುವ ಹಾಗೂ ಅನಾರೋಗ್ಯ ಪೀಡಿತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಆರ್ಥಿಕವಾಗಿ ಸಹಾಯ ಒದಗಿಸುವ ಸೇವೆ ನಿಜವಾಗಲೂ ಶ್ಲಾಘನೀಯ. ಇಲ್ಲಿ ಎಲ್ಲರೂ ಒಂದಾಗಿ ಬಾಳಲು ಪಣ ತೊಡಬೇಕು. ಇವ ನಮ್ಮವ ಎನ್ನುವ ಭಾವನೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಅರಾಟ್ ಗ್ರೂಪ್ ಎಂ.ಡಿ.ಟೋನಿ ವಿನ್ಸೆಂಟ್ ಮಾತನಾಡಿ, ಕ್ರಿಸ್ಮಸ್ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ನೀಡುವ ಮತ್ತು ತರುವ ಆಚರಣೆಯಾಗಿದೆ. ದಾನ ಮಾಡುವ ಮೂಲಕ ಕೃತಜ್ಞರಾಗಿರಬೇಕು ಮತ್ತು ಉದಾರವಾಗಿರಬೇಕೆಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ. ಇತರರಿಗೆ ಸಹಾಯ ಮಾಡುವ ಮಹತ್ವವನ್ನು ನೆನಪಿಸುತ್ತದೆ. ಈ ನಿಟ್ಟಿನಲ್ಲಿ ಕಾರ್ಯೊನ್ಮೂಖವಾಗಿರುವ ಸಂಸ್ಥೆಯ ಕಾರ್ಯ ಮೆಚ್ಚುವಂತಹದ್ದು. ಮುಂದಿನ ದಿನಗಳಲ್ಲಿ ಸಂಸ್ಥೆಯ ಮೂಲಕ ಸಮಾಜಮುಖಿ ಕಾರ್ಯಗಳು ಹೆಚ್ಚು ನಡೆಯಲಿ ಎಂದು ಶುಭ ಹಾರೈಸಿದರು. ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವಿರಾಜಪೇಟೆ, ಪೊನ್ನಂಪೇಟೆ ತಾಲೂಕು ಘಟಕದ ಅಧ್ಯಕ್ಷ ಆಂಟೋನಿ ರಾಬಿನ್ ಮಾತನಾಡಿ, ಹದಿನೈದು ವರ್ಷಗಳಿಂದ ಸಮುದಾಯದ ಒಗ್ಗಟ್ಟಿಗೆ ಹಾಗೂ ನಮ್ಮ ಸಂಸ್ಕøತಿಯ ಆಚರಣೆಯಲ್ಲಿ ತೊಡಗಿಸಿಕೊಳ್ಳಲು ಈ ಸಂಸ್ಥೆ ಶ್ರಮಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ಕ್ರಿಸ್‍ಮಸ್ ಗಾಯನ ಸ್ಫರ್ಧೆಯನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ. ಸಮುದಾಯದ ಐಕ್ಯತೆ, ಚರ್ಚ್ ಕಾನ್ವೆಂಟ್‍ಗಳಲ್ಲಿರುವ ಮಕ್ಕಳು, ವಿದ್ಯಾರ್ಥಿಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದ್ದೇವೆ. ಇದರೊಂದಿಗೆ ಸಮಾಜಸೇವೆಯು ನಮ್ಮ ಗುರಿಯಾಗಿದೆ ಎಂದರಲ್ಲದೆ ಕ್ರಿಸ್ಮಸ್ ಹಬ್ಬದಾಚರಣೆ ಏಸುವಿನ ಜನ್ಮದಿನವನ್ನು ಆಚರಿಸುವುದರೊಂದಿಗೆ ಜನಾಂಗ ಬಾಂಧವ್ಯ ಸ್ಥಾಪಿಸುವುದು, ಉಡುಗೊರೆಗಳ ವಿನಿಮಯ ಹಾಗೂ ಬಂಧು ಬಾಂಧವರೆಲ್ಲರೂ ಸೇರಿ ಐಕ್ಯತೆ ಸಾರುವುದಾಗಿದೆ ಎಂದರು. ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಕೊಡಗು ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಐಸಿಸಿ ಉಪಾಧ್ಯಕ್ಷ ಡಿ.ಕೆ.ಬ್ರಿಜೇಶ್ ಹಾಗೂ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮದಲೈಮುತ್ತು ಮಾತನಾಡಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕಾರ್ಯಕ್ರಮ ನಡೆಸಲು ಇದು ಪ್ರೇರಣೆಯಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಧರ್ಮ ಗುರುಗಳಾದ ಜೇಮ್ಸ್ ಡೊಮೆನಿಕ್, ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಜೋಕಿಂ ರಾಡ್ರಿಗಸ್, ರೋಮನ್ ಕ್ಯಾಥೋಲಿಕ್ ಅಸೋಸಿಯೇೀಷನ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮರ್ವಿನ್ ಲೋಬೋ, ರೋಮನ್ ಕ್ಯಾತೋಲಿಕ್ ಅಸೋಸಿಯೇಷನ್ ತಾಲೂಕು ಉಪಾಧ್ಯಕ್ಷ ಆಂತೋನಿ ಜೋಸೆಫ್, ಕಾರ್ಯದರ್ಶಿ ಸ್ಟಾಲಿನ್, ದಿನೇಶ್ ಮತಿಯಾಸ್, ಸಹಾಯಕ ಧರ್ಮಗುರು ಅಭಿಲಾಷ್, ಕೊಡಗಿನ ವಿವಿಧ ಭಾಗಗಳ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಉಪಸ್ಥಿತರಿದ್ದರು. ಇದೇ ಸಂದರ್ಭ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಹಾಗೂ ಕಾರ್ಯಕ್ರಮಕ್ಕೆ ಕೈಜೋಡಿಸಿದವರಿಗೆ ಸನ್ಮಾನಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.