Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಹಿರಿಯರ ಕವಿಗೋಷ್ಠಿ’ : ಯುವ ಪೀಳಿಗೆಗೆ ಸಾಹಿತ್ಯ ರಚನೆಯ ಪ್ರೇರಣೆ ನೀಡಬೇಕು : ಕವಿ ಕಾಜೂರು ಸತೀಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಹಿರಿಯರ ಕವಿಗೋಷ್ಠಿ’ : ಯುವ ಪೀಳಿಗೆಗೆ ಸಾಹಿತ್ಯ ರಚನೆಯ ಪ್ರೇರಣೆ ನೀಡಬೇಕು : ಕವಿ ಕಾಜೂರು ಸತೀಶ್*

ಡಿಸೆಂಬರ್ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.9 NEWS DESK : ಆಧುನೀಕತೆಯ ಸ್ಪರ್ಶವಿಲ್ಲದೆ, ಬದುಕಿನ ಅನುಭವಗಳನ್ನು ಯಾವುದೇ ಅಡೆ ತಡೆಗಳಿಲ್ಲದೆ ಸಾಹಿತ್ಯದ ಮೂಲಕ ಹೊರಹೊಮ್ಮಿಸುತ್ತಿದ್ದ ಹಿರಿಯ ಸಾಹಿತಿಗಳು ಇಂದಿನ ಯುವ ಪೀಳಿಗೆಗೆ ಸಾಹಿತ್ಯ ರಚನೆಯ ಕುರಿತು ಪ್ರೇರಣೆಯನ್ನು ನೀಡಬೇಕು ಎಂದು ಕವಿ ಕಾಜೂರು ಸತೀಶ್ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ನಡೆದ ‘ಹಿರಿಯರ ಕವಿಗೋಷ್ಠಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಕಲ್ಪನೆಯೇ ಇಲ್ಲದ ದಿನಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಸಂತೋಷದಿಂದ ಬೆರೆತು, ತಮ್ಮ ಅನುಭವಗಳನನ್ನು ಹಿರಿಯರು ಬರಹಕ್ಕಿಳಿಸುತ್ತಿದ್ದರು. ಅಂತಹ ಪರಿಸ್ಥಿತಿಗಳಿಗೆ ತದ್ವಿರುದ್ಧವಾಗಿರುವ ಸ್ಥಿತಿಯನ್ನು ನಾವಿಂದು ಕಾಣುತ್ತಿದ್ದೇವೆ, ಮೊಬೈಲ್, ಸಾಮಾಜಿಕ ಜಾಲತಾಣಗಳ ಹಾವಳಿ ಮೆದುಳನ್ನು ಕಿತ್ತು ಬಗೆದು ತಿನ್ನುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಪ್ರಶಾಂತವಾದ ಅಂದಿನ ದಿನಮಾನಗಳ ಪರಿಸ್ಥಿತಿ ಇಂದು ಬದಲಾಗಿದೆ. ಇಂತಹ ಕಾಲ ಘಟ್ಟದಲ್ಲಿ ಹಿಂದಿನ ಮತ್ತು ಇಂದಿನ ಪರಿಸ್ಥಿತಿಗಳನ್ನು ಮಿಳಿತಗೊಳಿಸಿ ಸೃಜನಾತ್ಮಕವಾದ ಬರವಣಿಗೆಯಲ್ಲಿ ತೊಡಗಿಸಿಕೊಳ್ಳುವುದೇ ಒಂದು ದೊಡ್ಡ ಸವಾಲೆಂದು ಅಭಿಪ್ರಾಯಿಸಿದ ಕಾಜೂರು ಸತೀಶ್, ಹಿರಿಯ ಸಾಹಿತಿಗಳು ತಮ್ಮ ಅನುಭವಗಳನ್ನು ಹೊಸ ತಲೆಮಾರಿಗೆ ಹಸ್ತಾಂತರಿಸಬೇಕೆಂದು ನುಡಿದರು. *ಸೃಜನಶೀಲತೆಯ ಕಾರ್ಯ* ಕಾವ್ಯವೆನ್ನುವುದು ಸಂವೇದನೆ ಮತ್ತು ಸೃಜನಶೀಲತೆಯ ಕಾರ್ಯವೇ ಆಗಿದೆಯೆಂದು ಅಭಿಪ್ರಾಯಿಸಿದ ಕಾಜೂರು ಸತೀಶ್, ಹುಲಿ ಬೇಟೆಗಾಗಿ ಚಿರತೆಯನ್ನು ಬೆನ್ನಟ್ಟುವುದನ್ನು ಕಾಣುವ ಸಂದರ್ಭ ಜಿಂಕೆಯ ಪ್ರಾಣ ಭಯದೊಂದಿಗೆ ಹುಲಿಯ ಹಸಿವನ್ನು ಕಾಣುವ ಸೂಕ್ಷ್ಮ ಮನಸ್ಥಿತಿಯನ್ನು ಹೊಂದಿರುವಾತ ‘ಕವಿ’ ಎನಿಸಿಕೊಳ್ಳುತ್ತಾನೆ. ತಾವು ಬರೆಯುವ ಯಾವುದೇ ವಿಷಯಗಳಲ್ಲಿ ತಾದಾತ್ಮ್ಯತೆಯನ್ನು ಹೊಂದುವ ಹಾಗೂ ತಾವೇ ಆ ವಿಷಯವಾಗಿ ಹೋಗುವ ಮನಸ್ಥಿತಿ ಅತ್ಯವಶ್ಯ. ಕುವೆಂಪು ಅವರು ಹೇಳಿದಂತೆ ನೀಲ ಆಗಸದ ಕುರಿತು ಬರೆಯುವಾತ ಆಗಸದ ನೀಲಿಯೇ ಆಗಿಬಿಡಬೇಕೆನ್ನುವ ಮಾತನ್ನು ಅವರು ಉಲ್ಲೇಖಿಸಿದರು. *ಯುವ ಸಮೂಹದ ಸಂಕಷ* ಆಧುನಿಕ ಜಗತ್ತಿನ ಮೊಬೈಲ್‍ಗಳು, ಸ್ಮಾರ್ಟ್ ಫೋನ್‍ಗಳು ಗಂಭೀರ ಬರವಣಿಗೆಯ ಪ್ರಯತ್ನಗಳಿಗೆ ದೊಡ್ಡ ಅಡ್ಡಿಯೇ ಆಗಿ ಹೋಗುತ್ತಿವೆ. ಒಂದೊಳ್ಳೆಯ ಕೃತಿಯ ಓದಿನ ನಡುವೆ ಮೊಳಗಿ ಬಿಡುವ ಮೊಬೈಲ್ ರಿಂಗ್, ಓದಿನ ರಸಭಂಗವನ್ನು ಉಂಟುಮಾಡುತ್ತದೆಯೆಂದು ಅಭಿಪ್ರಾಯಿಸಿದ ಅವರು, ಇದು ಬರವಣಿಗೆಯ ಹಂತಗಳಲ್ಲು ಸಾಕಷ್ಟು ತೊಡಕುಗಳನ್ನು ಸೃಷ್ಟಿಸುತ್ತಿವೆ. ಇವುಗಳನ್ನು ಮೀರಿ ಯುವ ಸಮೂಹ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಹಿರಿಯರು ತಮ್ಮ ಅನುಭವಗಳಿಂದ ಮಾರ್ಗದರ್ಶನ ಮಾಡುವ ಅಗತ್ಯತೆ ಇರುವುದಾಗಿ ತಿಳಿಸಿದರು.
ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿನ ಹಿರಿಯ ಕವಿಗಳನ್ನು ಒಗ್ಗೂಡಿಸುವ ಪ್ರಯತ್ನವಾಗಿ ಹಿರಿಯರ ಕವಿಗೋಷ್ಠಿಯನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ ಐವತ್ತಕ್ಕೂ ಹೆಚ್ಚಿನ ಹಿರಿಯ ಕವಿಗಳಿದ್ದು, ಮುಂಬರುವ ದಿನಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇವರೆಲ್ಲರನ್ನೂ ಸೇರಿಸುವ ಪ್ರಯತ್ನಗಳು ನಡೆಯಲಿದೆಯೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಸಾಹಿತಿ ಬಿ.ಎ.ಷಂಶುದ್ದೀನ್, ಸಾಹಿತಿ ಕೃಪಾದೇವರಾಜ್ ಉಪಸ್ಥಿತರಿದ್ದರು. *ಕವನ ವಾಚನ* ಇದೇ ಸಂದರ್ಭ ಜಿಲ್ಲೆಯ ವಿವಿಧೆಡೆಗ¼ ಹಿರಿಯ ಸಾಹಿತಿಗಳು ಕವನಗಳನ್ನು ವಾಚಿಸಿ ಗಮನ ಸೆಳೆದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್ ಸರ್ವರನ್ನೂ ಸ್ವಾಗತಿಸಿದರು. ಉಪನ್ಯಾಸಕಿ ಪ್ರತಿಮಾ ರೈ ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.