Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ : ಕುಶಾಲನಗರ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ : ಕುಶಾಲನಗರ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ*

ಡಿಸೆಂಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.10 NEWS DESK : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕುಶಾಲನಗರ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕುಶಾಲನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.  ಕುಶಾಲನಗರ ತಾಲ್ಲೂಕು ಘಟಕದ ಅಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆದ‌ ಕಾರ್ಯಕ್ರಮವನ್ನು ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಿತ್ಯ ನಿರಂತರ ಸುದ್ದಿ ಮಾಡುವ ಪತ್ರಕರ್ತರಿಗೆ ಸಮಸ್ಯೆಗಳಿರುತ್ತವೆ. ನೈಜ ವರದಿಗಳ‌ ಮೂಲಕ ಸಮಾಜಕ್ಕೆ ಬೆಳಕು ಚೆಲ್ಲುವ ಸಂದರ್ಭ ಹಲವರ ವಿರೋಧ ಕಟ್ಟಿಕೊಳ್ಳುವ ಸಾಧ್ಯತೆಯಿದೆ. ಸರಕಾರ ಸೇರಿದಂತೆ ಎಲ್ಲ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳಿಗೆ ಪತ್ರಕರ್ತರ ಸೇವೆ ಅನಿವಾರ್ಯವಾಗಿ ಅಗತ್ಯವಿದೆ. ದಿಟ್ಟ ವರದಿಗಳ ಮೂಲಕ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವಲ್ಲಿ ಪತ್ರಕರ್ತರ ಸೇವೆ ಅನನ್ಯವಾದುದು ಎಂದರು. ಪತ್ರಿಕಾ ಪ್ರತಿನಿಧಿಗಳ ಬದುಕಿಗೆ ಭದ್ರತೆಯ ಅಗತ್ಯತೆ ಅನಿವಾರ್ಯವಾಗಿದೆ ಎಂದರು ಸಂಘಕ್ಕೆ ಕಟ್ಟಡ ನಿರ್ಮಿಸಲು ಅಗತ್ಯ ಸಹಕಾರ ಒದಗಿಸುವ ಭರವಸೆ ನೀಡಿದರು.  ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಕುಶಾಲನಗರ ತಾಲೂಕು ರಚನೆಯಾದ ಬಳಿಕ ತಾಲೂಕು ಸಂಘವಾಗಿ ಮೇಲ್ದರ್ಜೆಗೇರಿದ ಕುಶಾಲನಗರ ಸಂಘ ಸ್ಥಾಪಕ ಹಂತದಲ್ಲಿಯೇ ನಿರಂತರ ಚಟುವಟಿಕೆಗಳಿಗೆ ರಾಜ್ಯಮಟ್ಟದ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಸಂಘದ ಸಾಮರ್ಥ್ಯ ರೂಪಿಸಿದ್ದಾರೆ. ಸಂಘದ ವಿಚಾರದಲ್ಲಿ ಸರ್ವ ಸದಸ್ಯರು ಒಂದು ಕುಟುಂಬದಂತೆ ಬಾಂಧ್ಯವ್ಯ ಹೊಂದುವ ಅಗತ್ಯವಿದೆ. ಈ ಮೂಲಕ ಸಂಘದ ಸದಸ್ಯರ ಶ್ರೇಯೋಭಿವೃದ್ದಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದರು.  ದೈನಂದಿನ ವರದಿಗಳಲ್ಲಿ ನೊಂದವರ, ಅನ್ಯಾಯಕ್ಕೊಳಗಾದವರ ದ್ವನಿಯಾಗಿ, ವಸ್ತುಸ್ಥಿತಿ ವರದಿ ನೀಡುವಲ್ಲಿ ಪತ್ರಕರ್ತರು ಕಾರ್ಯ ನಿರ್ವಹಿಸಬೇಕಿದೆ ಎಂದು ಸಲಹೆ ನೀಡಿದರು. ರಾಜ್ಯ ಸಮಿತಿ ಸದಸ್ಯರಾದ ಬಿ ಆರ್ ಸವಿತಾ ರೈ ಮಾತನಾಡಿ, ಸಂಘದಲ್ಲಿ‌ ತಮಗೆ ದೊರೆತ ಹುದ್ದೆಯನ್ನು ಆಸಕ್ತಿಯೊಂದಿಗೆ ಬದ್ದತೆಯಿಂದ ನಿರ್ವಹಿಸಿದಲ್ಲಿ ಸಂಘವನ್ನು ದೊಡ್ಡಮಟ್ಟದಲ್ಲಿ ಅಭಿವೃದ್ಧಿಗೊಳಿಸಲು ಸಾಧ್ಯವಿದೆ. ಪ್ರತಿಯೊಬ್ಬರು ತಮ್ಮ ಕೊಡುಗೆ ಮೂಲಕ ಸಂಘವನ್ನು ಬಲಪಡಿಸಲು ಪ್ರಯತ್ನಿಸಬೇಕಿದೆ ಎಂದು ಹೇಳಿದರು. ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಅನು ಕಾರ್ಯಪ್ಪ ಮಾತನಾಡಿ, ಗುಣಮಟ್ಟದ, ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಂಘ ಗುರುತಿಸಿಕೊಳ್ಳಬೇಕಿದೆ. ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಎಲ್ಲರೂ ಭಾಗಿಯಾಗುವುದು ಮುಖ್ಯವಾಗಿದೆ ಎಂದರು. ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಕುಶಾಲನಗರ ಪದವಿಪೂರ್ವ ಕಾಲೇಜಿನ ಹಿರಿಯ ಗ್ರಂಥಾಲಯ ಅಧಿಕಾರಿ ನಂದೀಶ್ ಅವರು ನೂತನ ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ, ಮಾತನಾಡಿದರು. ಪತ್ರಕರ್ತರು ವಿರೋಧ ವಿಚಾರಗಳಿಗೆ ಅಂಜದೆ ಸಮಾಜಕ್ಕೆ ನೆರವಾಗುವ ನಿಟ್ಟಿನಲ್ಲಿ ಸದಾ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಕರೆ ನೀಡಿದರು. ತಾಲೂಕು ಸಂಘದ ಅಧ್ಯಕ್ಷ ಎಂ.ಎನ್.ಚಂದ್ರ ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಳೆದ ಸಾಲಿನಲ್ಲಿ ಉತ್ತಮ ಕಾರ್ಯಚಟುವಟಿಕೆಗೆ ರಾಜ್ಯಮಟ್ಟದ ಪ್ರಶಸ್ತಿ ಕುಶಾಲನಗರ ತಾಲೂಕು ಸಂಘಕ್ಕೆ ದೊರೆತಿರುವುದು ಮಹತ್ಕಾರ್ಯ. ಪತ್ರಕರ್ತರು ಮಾರಾಟದ ವಸ್ತುವಾಗದೆ ದಿಟ್ಟ ವರದಿಗಳ ಮೂಲಕ ಸಮಾಜದ ಏರುಪೇರುಗಳ ಬಗ್ಗೆ ಗಮನಿಸುವಂತಾಗಬೇಕು. ಸಮಾಜಮುಖಿ ವರದಿಗಳ ಮೂಲಕ ಪತ್ರಕರ್ತರು ಸಮಾಜದ ಗಮನ ಸೆಳೆದು ಹಲವು ಪ್ರಶಸ್ತಿಗಳಿಗೆ ಭಾಜನಾಗಿರುವುದು ಅಭಿನಂದನೀಯ ಸಂಗತಿ. ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ನಮ್ಮ ಮುಂದಿನ ಗುರಿ ಎಂದರು.  ನೂತನ ಸಾಲಿನ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಪದಗ್ರಹಣ ನಂತರ ಅಧಿಕಾರ ಹಸ್ತಾಂತರ ಮಾಡಿದರು.  ರಾಷ್ಟ್ರೀಯ ಸಮಿತಿ ಸದಸ್ಯ ಪಾರ್ಥ ಚಿಣ್ಣಪ್ಪ,  ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜೀರ ಅಯ್ಯಪ್ಪ ಮಾತನಾಡಿ, ನೂತನ ಆಡಳಿತ ಮಂಡಳಿಗೆ ಶುಭ ಕೋರಿದರು. ಹಿಂದಿನ ಸಾಲಿನ ಆಡಳಿತ ಮಂಡಳಿ ಖಜಾಂಚಿ ಕುಡೆಕಲ್ ಗಣೇಶ್ ಪ್ರಾರ್ಥಿಸಿದರು, ಸದಸ್ಯರು ಹಾಗೂ ಜಿಲ್ಲಾ ಖಜಾಂಚಿ ಆಗಿರುವ ಸುನಿಲ್ ಪೊನ್ನೇಟಿ ಕಾರ್ಯಕ್ರಮ ನಿರೂಪಿಸಿದರು, ಹಿಂದಿನ ಸಾಲಿನ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರ ಮೋಹನ್ ಸ್ವಾಗತಿಸಿದರು, ಕಾರ್ಯದರ್ಶಿ ಕೆ.ಕೆ.ನಾಗರಾಜಶೆಟ್ಟಿ ವಂದಿಸಿದರು. ನಂತರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.