Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾಡಳಿತದಿಂದ ಮಾನವ ಹಕ್ಕುಗಳ ದಿನಾಚರಣೆ : ಮಾನವ ಹಕ್ಕುಗಳ ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾಡಳಿತದಿಂದ ಮಾನವ ಹಕ್ಕುಗಳ ದಿನಾಚರಣೆ : ಮಾನವ ಹಕ್ಕುಗಳ ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

ಡಿಸೆಂಬರ್ 10, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.10 NEWS DESK : ಇಂದಿನ ಸಾಮಾಜಿಕ ಜಾಲತಾಣ ಯುಗದಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ರಕ್ಷಣೆ ಪರಿಣಾಮಕಾರಿಯಾಗಿ ದೊರೆಯುತ್ತದೆ ಎಂಬುದು ಒಂದೆಡೆಯಾದರೆ, ಇದನ್ನು ದುರುಪಯೋಗ ಪಡಿಸಿಕೊಳ್ಳುವುದು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಮಾನವ ಹಕ್ಕುಗಳ ಸಂರಕ್ಷಣೆಯತ್ತ ಒತ್ತು ನೀಡುವುದು ಅಗತ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅಭಿಪ್ರಾಯಪಟ್ಟಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ‘ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಮಾಜಿಕ ಜಾಲತಾಣ ಯುಗದಲ್ಲಿ ಸಿಸಿಟಿವಿ, ವಾಯ್ಸ್ ರೆಕಾರ್ಡ್, ವೀಡಿಯೋ ರೆಕಾರ್ಡ್, ಕಾಲ್ ರೆಕಾರ್ಡ್, ಹೀಗೆ ಹಲವು ಜಾಲತಾಣಗಳನ್ನು ಸಾಕ್ಷಿಯಾಗಿ ಪರಿಗಣಿಸಿ ಮಾನವ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಒಂದೆಡೆಯಾದರೆ, ತಿಳಿದೋ ತಿಳಿಯದೆ ಘಟನೆಗಳು ಆದಾಗ ಅದನ್ನೇ ನೆಪವಾಗಿ ಇಟ್ಟುಕೊಂಡು ಮಾನವರನ್ನು ಪೀಡಿಸುವುದು ಅಥವಾ ಸತಾಯಿಸುವುದು ಸಹ ಕಂಡುಬರುತ್ತದೆ. ಆದ್ದರಿಂದ ಮಾನವರ ವೈಯಕ್ತಿಕ ಹಕ್ಕುಗಳ ಜತೆಗೆ ಇತರರ ಹಕ್ಕುಗಳನ್ನು ಸಂರಕ್ಷಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು ಎಂದು ಶುಭ ಅವರು ಪ್ರತಿಪಾದಿಸಿದರು. ರಾಷ್ಟ್ರಕವಿ ಕುವೆಂಪು ಅವರು ಹೇಳಿರುವಂತೆ ಹುಟ್ಟುವಾಗ ಎಲ್ಲರೂ ಸಹ ವಿಶ್ವ ಮಾನವರಾಗಿ, ಬೆಳೆಯುತ್ತಾ ಅಲ್ಪ ಮಾನವರಾಗುತ್ತೇವೆ. ಕಾನೂನಿನಲ್ಲಿ ಎಲ್ಲರಿಗೂ ಸಮಾನವಾಗಿ ಬದುಕುವ ಅವಕಾಶವಿದ್ದು, ಇತರರನ್ನು ಗೌರವಿಸುವಂತಾಗಬೇಕು. ಇದು ಸಂವಿಧಾನದ ಆಶಯವಾಗಿದೆ ಎಂದು ನುಡಿದರು. ಓ ನನ್ನ ಚೇತನ, ಆಗು ನೀ ಅನಿಕೇತನ ಕುವೆಂಪು ಅವರ ಸಂದೇಶ ವಾಣಿಯಂತೆ ಪ್ರತಿಯೊಬ್ಬರಲ್ಲೂ ಸಹ ಒಂದಲ್ಲ ಒಂದು ರೀತಿಯ ಚೈತನ್ಯವಿದ್ದು, ಇತರರಿಗೆ ಯಾವುದೇ ರೀತಿಯ ಮೋಸ ಮಾಡದೆ, ಅಥವಾ ಮೋಸಕ್ಕೆ ತುತ್ತಾಗದೆ ಸಮಾಜದಲ್ಲಿರುವ ಅವಕಾಶಗಳನ್ನು ಬಳಸಿಕೊಳ್ಳಲು ಮುಂದಾಗಬೇಕು ಎಂದು ಶುಭ ಕರೆ ನೀಡಿದರು. ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಹಿಂದುಳಿದವರಿಗೆ ಅವಕಾಶಗಳನ್ನು ಕಲ್ಪಿಸುವುದು ಅಗತ್ಯ. ಆ ದಿಸೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೆ ಅದನ್ನು ಪಡೆಯುವಲ್ಲಿ ಸಹಕಾರ ನೀಡಬೇಕು. ‘ವಸುದೈವ ಕುಟುಂಬ’ ಎಂಬಂತೆ ಇಡೀ ವಿಶ್ವವೇ ಒಂದು ಕುಟುಂಬವಾಗಿದ್ದು, ಯಾವುದೇ ಜಾತಿ, ಧರ್ಮ, ಅಂತಸ್ತಿನಿಂದ ಅಳೆಯುವಂತಿಲ್ಲ. ಪ್ರತಿಯೊಬ್ಬರನ್ನೂ ಇತರರಂತೆ ಕಾಣಬೇಕು ಎಂದರು. ಯಾರನ್ನು ಸಹ ತಾರತಮ್ಯ ಮಾಡದೆ, ಎಲ್ಲರೂ ಒಂದು ಎನ್ನುವ ಭಾವನೆ ಬರಬೇಕು. ಸಮಾಜದಲ್ಲಿ ಇಂದಿಗೂ ಸಹ ನಮ್ಮ ಎದುರಿಗೆ ಇರುವ ಹಾಡಿಯ ಜನರ ಬದುಕು ಹೇಗಿದೆ ಎಂಬುದನ್ನು ಅರಿತುಕೊಳ್ಳಬೇಕು. ಎಲ್ಲರಿಗೂ ಸಹ ಸರ್ಕಾರದ ಸೌಲಭ್ಯಗಳು, ಸಾಮಾಜಿಕ ನ್ಯಾಯ ದೊರೆಯಬೇಕು. ಪ್ರತಿಯೊಬ್ಬರಿಗೂ ಬದುಕುವ ಹಕ್ಕು ಇದ್ದು, ಎಲ್ಲರೂ ಸಹ ಸಮಾನರು ಎಂಬುದನ್ನು ತಿಳಿಯಬೇಕು ಎಂದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಲು ಶ್ರಮಿಸುತ್ತಿದೆ. ಆ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರದ ಮೂಲಕ ವಕೀಲರನ್ನು ನಿಯೋಜಿಸಿ ಅವಕಾಶ ವಂಚಿತರಿಗೆ ನ್ಯಾಯ ಕಲ್ಪಿಸಲಾಗುವುದು ಎಂದು ಶುಭ ಅವರು ಇದೇ ಸಂದರ್ಭದಲ್ಲಿ ನುಡಿದರು. ಪ್ರತಿಯೊಬ್ಬ ಮನುಷ್ಯರು ವಿಶೇಷ ವ್ಯಕ್ತಿಯಾಗಿದ್ದು, ತನ್ನದೇ ಆದ ಪ್ರತಿಭೆ ಮತ್ತು ಸಾಮಥ್ರ್ಯವನ್ನು ಹೊಂದಿದ್ದಾರೆ. ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎಂಬ ಕವಿವಾಣಿಯಂತೆ ಎಲ್ಲಾ ಮಾನವರು ಮುಕ್ತ ಮತ್ತು ಸಮಾನವಾಗಿ ಬದುಕು ಕಟ್ಟಿಕೊಳ್ಳಬೇಕು ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ, ಸಮಾಜದಲ್ಲಿ ಧಮನಿತರಿಗೆ ಧ್ವನಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಮಾನವ ಹಕ್ಕುಗಳನ್ನು ಕಲ್ಪಿಸಬೇಕು ಎಂದರು. ರಾಷ್ಟ್ರದ 150 ಕೋಟಿ ಜನರಲ್ಲಿ ಸಮಾನ ಅವಕಾಶ ಕಲ್ಪಿಸುವುದು ಅಗತ್ಯ. ಆ ನಿಟ್ಟಿನಲ್ಲಿ ಮಾನವ ಜನ್ಮ ದೊಡ್ಡದು ಎಂಬಂತೆ, ಮಾನವ ಹಕ್ಕುಗಳು ಎಲ್ಲರಿಗೂ ಸಮಾನವಾಗಿ ದೊರಕಬೇಕು ಎಂದರು. ಮಾನವ ಸಮಾಜ ಜೀವಿಯಾಗಿದ್ದು, ಒಬ್ಬರು ಮತ್ತೊಬ್ಬರನ್ನು ಅವಲಂಬಿಸಿರುತ್ತಾರೆ. ಆದ್ದರಿಂದ ಮಹಿಳೆಯರು, ಮಕ್ಕಳು, ವಿಶೇಷಚೇತನರು ಸೇರಿದಂತೆ ಎಲ್ಲರನ್ನು ಗೌರವಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಸಮಾಜದಲ್ಲಿ ಒಂದೇ ಬಾರಿ ಬದಲಾವಣೆ ಅಸಾಧ್ಯ. ಆದರೂ ಒಬ್ಬೊಬ್ಬರು ಪರಿವರ್ತನೆ ಆದಾಗ ಇಡೀ ಸಮಾಜ ಬದಲಾವಣೆ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದರು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ಎಂಬಂತೆ ಸರ್ವರ ಮಾನವ ಹಕ್ಕು ಸಂರಕ್ಷಣೆ ಅಗತ್ಯ ಎಂದು ಅವರು ನುಡಿದರು. ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕøತಿಕ ಹಕ್ಕುಗಳು ಒಂದು ಒಳ್ಳೆಯ ಹಾಗೂ ಅರ್ಥಪೂರ್ಣ ಜೀವನ ನಡೆಸಲು ಬೇಕಾದ ಮೂಲಭೂತ ಅಗತ್ಯತೆಗಳನ್ನು ಖಾತರಿಗೊಳಿಸುತ್ತದೆ ಎಂದು ಅವರು ತಿಳಿಸಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಮಾತನಾಡಿ ಪ್ರಪಂಚದಲ್ಲಿ ಶಾಂತಿ, ನ್ಯಾಯ ಮತ್ತು ಸ್ವಾತಂತ್ರ್ಯವನ್ನು ಸ್ಥಾಪಿಸಲು ಮಾನವ ಕುಟುಂಬದ ಎಲ್ಲಾ ಸದಸ್ಯರಲ್ಲೂ ಅಡಕವಾಗಿರುವ ಘನತೆ ಹಾಗೂ ಸಮಾನವಾದ ಮತ್ತು ಬೇರ್ಪಡಿಸಲಾಗದಂತಹ ಹಕ್ಕುಗಳನ್ನು ಗುರುತಿಸುವುದು ಎಂದು ತಿಳಿಸಲಾಗಿದೆ ಎಂದರು. ಜೀವಿಸುವ, ಮಾನವ ಘನತೆಯಿಂದ ಬದುಕುವ, ಸಮಾನತೆ, ವೈಯಕ್ತಿಕ ಸ್ವಾತಂತ್ರ್ಯ, ಶೋಷಣೆ ವಿರುದ್ದ ಹಕ್ಕುಗಳು ಮಾನವ ಹಕ್ಕುಗಳನ್ನು ಸಂರಕ್ಷಿಸಬಹುದಾಗಿದೆ ಎಂದು ಹೇಳಿದರು. ಭಾರತ ಸಂವಿಧಾನಕ್ಕೆ ಸಂಪೂರ್ಣ ನಂಬಿಕೆ ಮತ್ತು ನಿಷ್ಠೆ ಹೊಂದಿದ್ದೇನೆ, ಮಾನವ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಉತ್ತೇಜಿಸುವಲ್ಲಿ ಎಲ್ಲಾ ಕರ್ತವ್ಯಗಳನ್ನು ಸಂವಿಧಾನತ್ಮಕವಾಗಿ ನಿರ್ವಹಿಸುತ್ತೇನೆ. ಯಾವುದೇ ತಾರತಮ್ಯ ಇಲ್ಲದೆ ಏನೇ ಆದರೂ ಎಲ್ಲಾ ಮಾನವ ಜೀವಿಗಳ ಹಕ್ಕುಗಳನ್ನು ಗೌರವಿಸುತ್ತೇನೆ ಮತ್ತು ಎತ್ತಿ ಹಿಡಿಯುತ್ತೇವೆ. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನನ್ನ ವಿಚಾರಗಳಿಂದ, ಮಾತುಗಳಿಂದ ಅಥವಾ ನಡವಳಿಕೆಯಿಂದ ಬೇರೆಯವರ ಮಾನವ ಹಕ್ಕು ಉಲ್ಲಂಘಿಸುವುದಿಲ್ಲ ಎಂದು ಉಪ ವಿಭಾಗಾಧಿಕಾರಿ ಪ್ರತಿಜ್ಞಾ ವಿಧಿ ಬೋಧಿಸಿದರು. ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಚಿದಾನಂದ ಕುಮಾರ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಜಿ.ಪಂ.ಎಂಜಿನಿಯರ್ ನಾಯಕ್, ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಯ ಸಹಾಯಕ ನಿರ್ದೇಶಕರಾದ ಮಮತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಮಧುಕರ, ಮಹೇಶ್, ವಿವಿಧ ಇಲಾಖೆ ಸಿಬ್ಬಂದಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.